ಆಕರ್ಷಕ ವಿನ್ಯಾಸ, ಹೊಸ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ 2022ರ ಹೋಂಡಾ ಸಿವಿಕ್

ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಹೋಂಡಾ ತನ್ನ 2022ರ ಸಿವಿಕ್ ಸೆಡಾನ್ ಅನ್ನು ಅಂತಿಮವಾಗಿ ಜಾಗತಿಕ ಮಟ್ಟದಲ್ಲಿ ಅನಾವರಣಗೊಳಿಸಿದೆ. ಈ ಹೊಸ ಹೋಂಡಾ ಸಿವಿಕ್ ಕಾರು ಅಮೆರಿಕಾ ಮಾರುಕಟ್ಟೆಯಲ್ಲಿ ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆ.

ಆಕರ್ಷಕ ವಿನ್ಯಾಸ, ಹೊಸ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ 2022ರ ಹೋಂಡಾ ಸಿವಿಕ್

ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಸಿವಿಕ್ ಕಾರಿನ ಬಿಡುಗಡೆಯ ಬಗ್ಗೆ ಕಂಪನಿಯು ಯಾವುದೇ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಇನ್ನು ಈ ಹೊಸ ಸಿವಿಕ್ ಕಾರು ಚೀನಾ ಮಾರುಕಟ್ಟೆಯಲ್ಲಿ ಮೊದಲಿಗೆ ಬಿಡುಗಡೆಯಾಗಲಿದೆ. ನಂತರ ಜಪಾನ್ ಮತ್ತು ಅಮೆರಿಕಾ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ. 2022ರ ಹೋಂಡಾ ಸಿವಿಕ್ ಇದರ ಮೂಲಮಾದರಿಯೊಂದಿಗೆ ಹೋಲುತ್ತದೆ, 2020ರ ನವೆಂಬರ್ ತಿಂಗಳಿನಲ್ಲಿ ಪ್ರದರ್ಶಿಸಲಾಯಿತು.

ಆಕರ್ಷಕ ವಿನ್ಯಾಸ, ಹೊಸ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ 2022ರ ಹೋಂಡಾ ಸಿವಿಕ್

2022ರ ಹೋಂಡಾ ಸಿವಿಕ್ ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಕಡಿಮೆ ಬಾಡಿ ಕ್ರೀಸ್‌ಗಳು ಮತ್ತು ಸ್ಪೋರ್ಟ್ಸ್ ಕ್ಲೀನರ್ ವಿನ್ಯಾಸದೊಂದಿಗೆ ಇದು ಹೆಚ್ಚು ಪ್ರಬುದ್ಧವಾಗಿ ಕಾಣುತ್ತದೆ, ಹೊಸ ಸಿವಿಕ್ ಸ್ಪೋರ್ಟಿ ಮತ್ತು ಆಕರ್ಷಕ ವಿನ್ಯಾಸವನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಆಕರ್ಷಕ ವಿನ್ಯಾಸ, ಹೊಸ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ 2022ರ ಹೋಂಡಾ ಸಿವಿಕ್

ಇದರ ಅಪ್‌ಫ್ರಂಟ್ ವಿಶಾಲವಾದ, ಅಡ್ಡಲಾಗಿ ಇರಿಸಿದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಇಂಟಿಗ್ರೇಟೆಡ್ ಎಲ್‌ಇಡಿ ಡಿಆರ್‌ಎಲ್‌ಗಳು (ಡೇಟೈಮ್ ರನ್ನಿಂಗ್ ಲ್ಯಾಂಪ್‌ಗಳು) ಮತ್ತು ಬಾಡಿ ಬಣ್ಣ ಗ್ರಿಲ್ ಅನ್ನು ಹೊಂದಿದೆ. ಮುಂಭಾಗದ ವಿನ್ಯಾಸವು ಹೊಸ ತಲೆಮಾರಿನ ಹೆಚ್‍ಆರ್-ವಿ ಮಾದರಿಯಿಂದ ಸ್ಫೂರ್ತಿ ಪಡೆದಿದೆ.

ಆಕರ್ಷಕ ವಿನ್ಯಾಸ, ಹೊಸ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ 2022ರ ಹೋಂಡಾ ಸಿವಿಕ್

ಮುಂಭಾಗದಲ್ಲಿ ಹೊಸ ಬಂಪರ್ ಅನ್ನು ಅಳವಡಿಸಲಾಗಿದೆ. ಇದು ದೊಡ್ಡದಾದ ಫಾಗ್ ಲ್ಯಾಂಪ್ ಬ್ಲ್ಯಾಕ್ ಹೌಸಿಂಗ್ ನಿಂದ ಕೂಡಿದೆ. ಈ ಕಾರಿನ ಹಿಂಭಾಗದಲ್ಲಿ ಸರಳವಾದ ಉದ್ದವಾಗಿ ಜೋಡಿಸಲಾದ ಎಲ್ಇಡಿ ಟೈಲ್-ಲ್ಯಾಂಪ್‌ಗಳು, ಹೊಸ ಬಂಪರ್ ಮತ್ತು ಹೊಸ ಟೈಲ್‌ಗೇಟ್ ಅನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಆಕರ್ಷಕ ವಿನ್ಯಾಸ, ಹೊಸ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ 2022ರ ಹೋಂಡಾ ಸಿವಿಕ್

ಈ ಹೊಸ ಮಾದರಿಯು ಸರಿಯಾದ ಸೆಡಾನ್ ತರಹದ ಹಿಂಭಾಗದ ಪ್ರೊಫೈಲ್ ಅನ್ನು ಹೊಂದಿದೆ. 2022ರ ಹೋಂಡಾ ಸಿವಿಕ್ ಕಾರು 4,673 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,414 ಎಂಎಂ ಎತ್ತರವನ್ನು ಹೊಂದಿದೆ. ಇನ್ನು 2,735 ಎಂಎಂ ವ್ಹೀಲ್ ಬೇಸ್ ಹೊಂದಿದೆ.

ಆಕರ್ಷಕ ವಿನ್ಯಾಸ, ಹೊಸ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ 2022ರ ಹೋಂಡಾ ಸಿವಿಕ್

ಈ ಹೊಸ ಸಿವಿಕ್ ಕಾರನ್ನು ಹಿಂದಿನ ಮಾದರಿಗೆ ಹೋಲಿಸಿದರೆ 32 ಎಂಎಂ ಉದ್ದ ಮತ್ತು 35 ಎಂಎಂ ನಷ್ಟು ವ್ಹೀಲ್‌ಬೇಸ್ ಅನ್ನು ಹೆಚ್ಚಿಸಲಾಗಿದೆ. ಈ ಹೊಸ ಸಿವಿಕ್ ಕಾರು 419-ಲೀಟರ್‌ ಬೂಟ್ ಸ್ಪೇಸ್ ಅನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಆಕರ್ಷಕ ವಿನ್ಯಾಸ, ಹೊಸ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ 2022ರ ಹೋಂಡಾ ಸಿವಿಕ್

ಹೊಸ ಹೋಂಡಾ ಸಿವಿಕ್ ಕಾರಿನ ಇಂಟಿರಿಯರ್ ನಲ್ಲಿ 7-ಇಂಚಿನಿಂದ 9-ಇಂಚಿನವರೆಗಿನ ಆಯ್ಕೆಯ ಫ್ಲೋಟಿಂಗ್ ಡಿಸ್ ಪ್ಲೇಯನ್ನು ಹೊಂದಿದೆ. ಇನ್ನು ಇದರ ಇನ್ಫೋಟೈನ್ಮೆಂಟ್ ಯುನಿಟ್ ವೈರ್ ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿಯನ್ನು ಹೊಂದಿದೆ.

ಆಕರ್ಷಕ ವಿನ್ಯಾಸ, ಹೊಸ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ 2022ರ ಹೋಂಡಾ ಸಿವಿಕ್

ಹೊಸ ಸಿವಿಕ್ ಟೂರಿಂಗ್ 10.2-ಇಂಚಿನ ಫುಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದ್ದು, ಇತರ ರೂಪಾಂತರಗಳು 7 ಇಂಚಿನ ಡಿಸ್ ಪ್ಲೇಯನ್ನು ಪಡೆಯುತ್ತದೆ. ಇನ್ನು ಸ್ಮಾರ್ಟ್‌ಫೋನ್‌ಗಳಿಗೆ ವೈರ್‌ಲೆಸ್ ಚಾರ್ಜರ್ ಮತ್ತು 12 ಸ್ಪೀಕರ್‌ಗಳನ್ನು ಹೊಂದಿರುವ ಬೋಸ್ ಸೌಂಡ್ ಸಿಸ್ಟಂನೊಂದಿಗೆ ಬರುತ್ತದೆ.

ಆಕರ್ಷಕ ವಿನ್ಯಾಸ, ಹೊಸ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ 2022ರ ಹೋಂಡಾ ಸಿವಿಕ್

2022ರ ಹೋಂಡಾ ಸಿವಿಕ್ ಕಾರಿನಲ್ಲಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 6,500 ಆರ್‌ಪಿಎಂನಲ್ಲಿ 160 ಬಿಹೆಚ್ಪಿ ಮತ್ತು 4,200 ಆರ್‌ಪಿಎಂನಲ್ಲಿ 186 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಆಕರ್ಷಕ ವಿನ್ಯಾಸ, ಹೊಸ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ 2022ರ ಹೋಂಡಾ ಸಿವಿಕ್

ಹೊಸ ಸಿವಿ ಹೈ-ಎಂಡ್ ರೂಪಾಂತರಗಳಲ್ಲಿ 1.5-ಲೀಟರ್ 4-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ಇದು 6,000 ಆರ್‌ಪಿಎಂನಲ್ಲಿ 182 ಬಿಹೆಚ್‌ಪಿ ಮತ್ತು 1,700 ಆರ್‌ಪಿಎಂನಲ್ಲಿ 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎರಡು ಎಂಜಿನ್‌ಗಳನ್ನು ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

Article Published On: Thursday, April 29, 2021, 17:19 [IST]
English summary
2022 Honda Civic Sedan Fully Revealed. Read In Kananda.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+