ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಯೋಜನೆಗೆ ಚಾಲನೆ ನೀಡಿದ ಹೆಚ್‌ಪಿಸಿಎಲ್

ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ಇವಿ ವಾಹನಗಳಿಗೆ ಪೂರಕವಾಗಿ ಅಗತ್ಯ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗುತ್ತಿದೆ.

ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಯೋಜನೆಗೆ ಚಾಲನೆ ನೀಡಿದ ಹೆಚ್‌ಪಿಸಿಎಲ್

ಇವಿ ವಾಹನಗಳ ಖರೀದಿಗೆ ಉತ್ತೇಜಿಸಲು ಹೆಚ್ಚಿನ ಸಂಖ್ಯೆಯ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗುತ್ತಿದ್ದು, ಚಾರ್ಜಿಂಗ್ ನಿಲ್ದಾಣಗಳ ಆಧಾರದ ಮೇಲೆ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಅವಲಂಬಿತವಾಗಿದೆ. ಹೀಗಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವ ಮೊದಲ ಹೆಚ್ಚಿನ ಸಂಖ್ಯೆಯ ಚಾರ್ಜಿಂಗ್ ನಿಲ್ದಾಣ ಅಭಿವೃದ್ದಿಗೆ ಒತ್ತುನೀಡಲಾಗುತ್ತಿದ್ದು, ದೇಶದ ಯಾವುದೇ ಪ್ರದೇಶಗಳಿಗೆ ತೆರಳಿದರೂ ಚಾರ್ಜಿಂಗ್ ಲಭ್ಯವಾಗುವಂತೆ ಯೋಜನೆ ರೂಪಿಸಲಾಗುತ್ತಿದೆ.

ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಯೋಜನೆಗೆ ಚಾಲನೆ ನೀಡಿದ ಹೆಚ್‌ಪಿಸಿಎಲ್

ಸದ್ಯ ದೇಶದ ಪ್ರಮುಖ ಮಾಹಾನಗರಗಳಲ್ಲಿ ಹಲವಾರು ಖಾಸಗಿ ಮತ್ತು ಸರ್ಕಾರಿ ಅನುದಾನಿತ ಸಂಸ್ಥೆಗಳು ಆಯ್ದ ಭಾಗಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದ್ದು, ಕೇವಲ ಮಾಹಾನಗರಗಳಿಗೆ ಸೀಮಿತವಾಗದೆ ಪ್ರತಿ ಹಳ್ಳಿ ಹಳ್ಳಿಗೂ ಚಾರ್ಜಿಂಗ್ ನಿಲ್ದಾಣಗಳನ್ನು ಪರಿಚಯಿಸುವ ಯೋಜನೆ ರೂಪಿಸಲಾಗಿದೆ.

ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಯೋಜನೆಗೆ ಚಾಲನೆ ನೀಡಿದ ಹೆಚ್‌ಪಿಸಿಎಲ್

ಈ ನಿಟ್ಟಿನಲ್ಲಿ ಹೊಸ ಪ್ರಯತ್ನಕ್ಕೆ ಕೈಹಾಕಿರುವ ಮಾಗ್ನೈಟಾ ಎನ್ನುವ ಕಂಪನಿಯೊಂದು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಹೆಚ್‌ಪಿಸಿಎಲ್) ಜೊತಗೂಡಿ ಬಿದಿದೀಪಗಳ ಕಂಬಗಳಲ್ಲೇ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲಾಗುತ್ತಿದೆ.

ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಯೋಜನೆಗೆ ಚಾಲನೆ ನೀಡಿದ ಹೆಚ್‌ಪಿಸಿಎಲ್

ಚಾರ್ಜಿಂಗ್ ಪಾಯಿಂಟ್‌ಗಳಿಗೆ ಪ್ರತ್ಯೇಕ ಸ್ಥಳ ನಿಗದಿಪಡಿಸದೆ ನಗರದ ಯಾವುದೇ ಭಾಗಕ್ಕೂ ತೆರಳಿದರೂ ಸುಲಭವಾಗಿ ಬಳಕೆ ಮಾಡಿಕೊಳ್ಳುವಂತೆ ವಿದ್ಯುತ್ ಕಂಗಳಲ್ಲೇ ಚಾರ್ಜಿಂಗ್ ಪಾಯಿಂಟ್ ತೆರೆಯಲಾಗುತ್ತಿದ್ದು, ಇವು ಬಳಕೆಗೆ ಸುಲಭವಾಗಿರುವುದಲ್ಲದೆ ಚಾರ್ಜಿಂಗ್ ನಿಲ್ದಾಣಕ್ಕಾಗಿ ಯಾವುದೇ ರೀತಿಯ ದೊಡ್ಡ ಸ್ಥಳದ ಅವಶ್ಯಕತೆ ಇರುವುದಿಲ್ಲ. ಎಲೆಕ್ಟ್ರಿಕ್ ಚಾರ್ಜಿಂಗ್ ಕಂಬಗಳನ್ನು ರಸ್ತೆ ಬದಿಯಲ್ಲಿ ಮಾತ್ರವಲ್ಲ ಪಾರ್ಕಿಂಗ್ ಸ್ಥಳಗಳಲ್ಲಿ, ಮಾಲ್ ಆವರಣಗಳಲ್ಲಿ, ವಸತಿ ಸಮುಚ್ಚಯಗಳಲ್ಲಿ ಇದನ್ನು ಸುಲಭವಾಗಿ ಅಳವಡಿಸಿಕೊಳ್ಳಬಹುದಾಗಿದೆ.

ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಯೋಜನೆಗೆ ಚಾಲನೆ ನೀಡಿದ ಹೆಚ್‌ಪಿಸಿಎಲ್

ಹೊಸ ಚಾರ್ಜಿಂಗ್ ಪಾಯಿಂಟ್ ಬಳಕೆಗೆ ಮೊಬೈಲ್ ಅಪ್ಲಿಕೇಷನ್ ಅಭಿವೃದ್ದಿಪಡಿಸಿರುವ ಮಾಗ್ನೈಟಾ ಕಂಪನಿಯು ಯಾವುದೇ ಸಿಬ್ಬಂದಿಯಿಲ್ಲದೆಯೇ ಮೊಬೈಲ್ ಅಪ್ಲಿಕೇಷನ್ ಮೂಲಕ ವ್ಯವಹರಿಸಲಿದ್ದು, ಆನ್‌ಲೈನ್ ಪೆಮೆಂಟ್ ಮೂಲಕವೇ ಅಗತ್ಯವಿರುವಷ್ಟು ಚಾರ್ಜಿಂಗ್ ಒದಗಿಸಲಿದೆ.

ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಯೋಜನೆಗೆ ಚಾಲನೆ ನೀಡಿದ ಹೆಚ್‌ಪಿಸಿಎಲ್

ಇನ್ನು ದೇಶಾದ್ಯಂತ ತೈಲ ಬೆಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಯೋಜನೆಗೆ ಚಾಲನೆ ನೀಡಿದ ಹೆಚ್‌ಪಿಸಿಎಲ್

ಎಲೆಕ್ಟ್ರಿಕ್ ವಾಹನಗಳ ಬಳಕೆ ಆಸಕ್ತಿ ಇದ್ದರೂ ಕೂಡಾ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಇವಿ ವಾಹನಗಳ ಬ್ಯಾಟರಿ ರೇಂಜ್ ಸಾಮಾರ್ಥ್ಯವು ಖರೀದಿಗೆ ಹಿಂದೇಟು ಹಾಕುವಂತೆ ಮಾಡಿದ್ದು, ಈ ಸಮಸ್ಯೆ ನಿವಾರಣೆಗಾಗಿ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸಹ ನಿರ್ಮಾಣ ಮಾಡುತ್ತಿವೆ.

ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಯೋಜನೆಗೆ ಚಾಲನೆ ನೀಡಿದ ಹೆಚ್‌ಪಿಸಿಎಲ್

ಬ್ಯಾಟರಿ ವಿನಿಯಮ ಕೇಂದ್ರಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ತ್ವರಿತವಾಗಿ ಬ್ಯಾಟರಿ ಸೌಲಭ್ಯಗಳನ್ನು ಒದಗಿಸಬಹುದಾಗಿದ್ದು, ಬ್ಯಾಟರಿ ರೇಂಜ್ ಆಧಾರದ ಮೇಲೆ ಇಂತಿಷ್ಟು ಪ್ರಮಾಣದ ದರ ಪಾವತಿಸಿಬೇಕಾಗುತ್ತದೆ.

MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಇವಿ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಒದಗಿಸಲು ಹೊಸ ಯೋಜನೆಗೆ ಚಾಲನೆ ನೀಡಿದ ಹೆಚ್‌ಪಿಸಿಎಲ್

ಬ್ಯಾಟರಿ ವಿನಿಮಯದ ವೇಳೆ ಗ್ರಾಹಕರು ತಮ್ಮ ಬಳಿಯಿರುವ ಚಾರ್ಜ್ ಖಾಲಿಯಾದ ಬ್ಯಾಟರಿಯನ್ನು ವಿನಿಮಯ ಕೇಂದ್ರಗಳಿಗೆ ಹಿಂದಿರುಗಿಸುವ ಮೂಲಕ ಚಾರ್ಜ್ ಮಾಡಲಾದ ಬ್ಯಾಟರಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದ್ದು, ಹೊಸ ಸೌಲಭ್ಯವು ಚಾರ್ಜಿಂಗ್ ಸಮಯವನ್ನು ಉಳಿಸುವ ಮೂಲಕ ಬ್ಯಾಟರಿ ಖಾಲಿಯಾದ ತಕ್ಷಣವೇ ಮತ್ತೊಂದು ಬ್ಯಾಟರಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.

Most Read Articles

Kannada
English summary
HPCL & Magenta Install Street-lamp Electric Vehicle Charger. Read in Kannada.
Story first published: Saturday, March 6, 2021, 0:49 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X