ಜುಲೈ ಅವಧಿಗಾಗಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಮಹೀಂದ್ರಾ

ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ವಿವಿಧ ಕಾರು ಕಂಪನಿಗಳು ತಮ್ಮ ಹೊಸ ವಾಹನಗಳ ಖರೀದಿ ಮೇಲೆ ಹಲವಾರು ಆಫರ್‌ಗಳನ್ನ ಘೋಷಿಸುತ್ತಿದ್ದು, ಮಹೀಂದ್ರಾ ಕಾರುಗಳ ಖರೀದಿ ಮೇಲೂ ಸಹ ಇದೀಗ ವಿಶೇಷ ರಿಯಾಯ್ತಿ ಘೋಷಣೆ ಮಾಡಲಾಗಿದೆ.

ಜುಲೈ ಅವಧಿಗಾಗಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಮಹೀಂದ್ರಾ

ಕೋವಿಡ್ ಕಾರಣಕ್ಕೆ ಸತತವಾಗಿ ಕುಸಿತ ಕಂಡಿರುವ ಕಾರು ಮಾರಾಟವನ್ನು ಸುಧಾರಿಸಲು ಮಹೀಂದ್ರಾ ಕಂಪನಿಯು ವಿವಿಧ ಕೊಡುಗೆಗಳೊಂದಿಗೆ ನಗದು ರಿಯಾಯಿತಿಗಳನ್ನು ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್ ಬ್ಲ್ಯಾಕ್ ಆಫರ್, ಎಕ್ಸ್‌ಚೆಂಜ್ ಬೋನಸ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಜುಲೈ ಅವಧಿಗಾಗಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಮಹೀಂದ್ರಾ

ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಅನ್ವಯವಾಗಲಿದ್ದು, ಆಯ್ದ ಡೀಲರ್ಸ್‌ಗಳಲ್ಲಿ ಪ್ರಮುಖ ಕಾರು ಮಾದರಿಗಳ ಮೇಲೆ ಇನ್ನು ಹೆಚ್ಚಿನ ಮಟ್ಟದ ಆಫರ್ ಪಡೆದುಕೊಳ್ಳಬಹುದಾಗಿದೆ.

ಜುಲೈ ಅವಧಿಗಾಗಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾದ ಎಕ್ಸ್‌ಯುವಿ500 ಖರೀದಿಯ ಮೇಲೆ ಮಹೀಂದ್ರಾ ಕಂಪನಿಯು ಗರಿಷ್ಠ ರೂ. 1.13 ಲಕ್ಷ ಆಫರ್ ನೀಡುತ್ತಿದ್ದು, ಇದರಲ್ಲಿ ರೂ.50 ಸಾವಿರ ಎಕ್ಸ್‌ಚೆಂಜ್ ಆಫರ್, ರೂ.36,500 ಕ್ಯಾಶ್‌ಬ್ಯಾಕ್ ಮತ್ತು ಇನ್ನುಳಿದಂತೆ ಕಾರ್ಪೊರೇಟ್ ಡಿಸ್ಕೌಂಟ್ ನೀಡುತ್ತಿದೆ.

ಜುಲೈ ಅವಧಿಗಾಗಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಮಹೀಂದ್ರಾ

ಎಂಪಿವಿ ಕಾರು ಮಾದರಿಯಾದ ಮರಾಜೋ ಆವೃತ್ತಿಯ ಮೇಲೂ ಮಹೀಂದ್ರಾ ಕಂಪನಿಯು ರೂ.20 ಸಾವಿರ ಕ್ಯಾಶ್‌ಬ್ಯಾಕ್, ರೂ. 5,200 ಎಕ್ಸ್‌ಚೆಂಜ್ ಆಫರ್ ಮತ್ತು ರೂ.40 ಸಾವಿರದಷ್ಟು ಕಾರ್ಪೊರೇಟ್ ಡಿಸ್ಕೌಂಟ್ ನೀಡುತ್ತಿದೆ.

ಜುಲೈ ಅವಧಿಗಾಗಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ ಕಾರು ಖರೀದಿಯ ಮೇಲೆ ರೂ.17 ಸಾವಿರ ಮೌಲ್ಯದ ಆಕ್ಸೆಸರಿಸ್ ಪ್ಯಾಕೇಜ್‌ನೊಂದಿಗೆ ರೂ. 15 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ. 4,500 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಜುಲೈ ಅವಧಿಗಾಗಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಮಹೀಂದ್ರಾ

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಎಕ್ಸ್‌ಯುವಿ300 ಕಾರು ಖರೀದಿಯ ಮೇಲೆ ಉಚಿತ ಆಕ್ಸೆಸರಿಸ್ ಒಳಗೊಂಡಂತೆ ರೂ.5 ಸಾವಿರ ಕ್ಯಾಶ್ ಡಿಸ್ಕೌಂಟ್ ಲಭ್ಯವಿದ್ದು, ಹೊಸ ಆಫರ್‌ನಲ್ಲಿ ರೂ. 25 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ. 5 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದೆ.

ಜುಲೈ ಅವಧಿಗಾಗಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಮಹೀಂದ್ರಾ

ಮಹೀಂದ್ರಾ ಜನಪ್ರಿಯ ಬೊಲೆರೊ ಕಾರು ಖರೀದಿ ಮೇಲೂ ಒಟ್ಟು ರೂ. 3,500 ಕ್ಯಾಶ್ ಡಿಸ್ಕೌಂಟ್ ಜೊತೆಗೆ ಉಚಿತವಾಗಿ ನಾಲ್ಕನೇ ವರ್ಷದ ವಾರಂಟಿ ಲಭ್ಯವಿದ್ದು, ಇನ್ನುಳಿದಂತೆ ರೂ.10 ಸಾವಿರ ಎಕ್ಸ್‌ಚೆಂಜ್ ಆಫರ್, ರೂ. 3 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಸಹ ಲಭ್ಯವಿರಲಿವೆ.

ಜುಲೈ ಅವಧಿಗಾಗಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಿಸಿದ ಮಹೀಂದ್ರಾ

ಇನ್ನು ಮಹೀಂದ್ರಾ ಕಂಪನಿಯ ಹೊಸ ಆಫರ್‌ಗಳನ್ನು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಕಂಪನಿಯು ಜುಲೈ ಅವಧಿಯಲ್ಲಿ ಮೇಲಿನ ಕಾರು ಮಾದರಿಗಳನ್ನು ಹೊರತುಪಡಿಸಿ ಕೆಯುವಿ100 ನೆಕ್ಸ್ಟ್, ಥಾರ್ ಮತ್ತು ಅಲ್ಟುರಾಸ್ ಜಿ4 ಮಾದರಿಯ ಮೇಲೆ ಯಾವುದೇ ಆಫರ್ ನೀಡುತ್ತಿಲ್ಲ.

Article Published On: Saturday, July 10, 2021, 11:01 [IST]
English summary
Mahindra Offering Huge Discounts And Benefits On Selected Models
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+