ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಅಲ್ಕಾಜರ್

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಹೊಸ ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಇದೇ ತಿಂಗಳು 18ರಂದು ಅಧಿಕೃತವಾಗಿ ಬಿಡುಗಡೆಗೊಳಿಸುವ ಮಾಹಿತಿ ನೀಡಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಪ್ರಮುಖ ತಾಂತ್ರಿಕ ಮಾಹಿತಿಗಳು ಸೋರಿಕೆಯಾಗಿವೆ.

ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಅಲ್ಕಾಜರ್

ಹೊಚ್ಚ ಹೊಸ ಅಲ್ಕಾಜರ್ ಕಾರು ಮಾದರಿಯು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಅತ್ಯುತ್ತಮ ಫೀಚರ್ಸ್‌ಗಳು, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆಯೊಂದಿಗೆ ಟಾಟಾ ಸಫಾರಿ ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು ಖರೀದಿಗೆ ಹ್ಯುಂಡೈ ಕಂಪನಿಯು ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಅಲ್ಕಾಜರ್

ಅಲ್ಕಾಜರ್ ಕಾರು ಹ್ಯುಂಡೈ ಕಂಪನಿಯ ಜನಪ್ರಿಯ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿದ್ದು, ಕ್ರೆಟಾ ಕಾರಿಗಿಂತಲೂ 150 ಎಂಎಂ ಹೆಚ್ಚುವರಿ ವೀಲ್ಹ್‌ಬೆಸ್‌ನೊಂದಿಗೆ ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ಹೊಂದಿದೆ.

ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಅಲ್ಕಾಜರ್

ಹ್ಯುಂಡೈ ಎಸ್‌ಯುವಿ ಸರಣಿಯಲ್ಲಿರುವ ವೆನ್ಯೂ, ಕ್ರೆಟಾ, ಟಕ್ಸನ್ ಮತ್ತು ಕೊನಾ ಇವಿ ಮಾದರಿಗಳಂತೆ ಅಲ್ಕಾಜರ್ ಮಾದರಿಯು ಕೂಡಾ ಮಾರಾಟದಲ್ಲೂ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದ್ದು, ಕಂಪನಿಯು ಹೊಸ ಅಲ್ಕಾಜರ್ ಕಾರನ್ನು ವಿವಿಧ ಆರು ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡುತ್ತಿದೆ.

ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಅಲ್ಕಾಜರ್

ಹೊಸ ಕಾರು ಪ್ಲ್ಯಾಟಿನಂ, ಪ್ರೆಸ್ಟಿಜ್, ಸಿಗ್ನಿಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟಿಜ್ ಆಪ್ಷನ್ ಮತ್ತು ಸಿಗ್ನಿಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್‌ಗಳೊಂದಿಗೆ ಟೈಪೂನ್ ಸಿಲ್ವರ್, ಟೈಟಾನ್ ಗ್ರೇ, ಟೈಗಾ ಬ್ರೌನ್, ಸ್ಟೇರಿ ನೈಟ್, ಪೊಲಾರ್ ವೈಟ್ ಮತ್ತು ಪ್ಯಾಂಥಮ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿವೆ.

ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಅಲ್ಕಾಜರ್

ಇನ್ನು ವಿಸ್ತರಿತ ಕ್ಯಾಬಿನ್‌ ಮೂಲಕ ಮೂರು ಸಾಲಿನ ಆಸನಗಳ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜೋಡಣೆ ಹೊಂದಿದ್ದು, ಹೊಸ ಕಾರಿನಲ್ಲಿ ಪ್ರತ್ಯೇಕ ಆಸನ ಸೌಲಭ್ಯ ಹೊಂದಿರುವ 6 ಸೀಟರ್ ಮಾದರಿಯೇ ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ.

ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಅಲ್ಕಾಜರ್

ಹೈ ಎಂಡ್ ಮಾದರಿಯ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದ್ದು, ಹಿಂಬದಿಯ ಸವಾರರಿಗೂ ಆರಾಮದಾಯಕ ಪ್ರಯಾಣಕ್ಕಾಗಿ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳನ್ನು ನೀಡಲಾಗಿದೆ.

ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಅಲ್ಕಾಜರ್

ಅಲ್ಕಾಜರ್ ಕಾರಿನ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದ್ದು, ಕನೆಕ್ಟೆಡ್ ಫೀಚರ್ಸ್‌ನೊಂದಿಗೆ ಎರಡು ಪ್ರಮುಖ ಎಂಜಿನ್ ಆಯ್ಕೆ ನೀಡಲಿದೆ.

ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಅಲ್ಕಾಜರ್

ಎಂಜಿನ್ ಮತ್ತು ಪರ್ಫಾಮೆನ್ಸ್

ಹ್ಯುಂಡೈ ಕಂಪನಿಯು ಹೊಸ ಅಲ್ಕಾಜರ್ ಕಾರಿನಲ್ಲಿ ಎರಡು ಎಂಜಿನ್ ಆಯ್ಕೆ ನೀಡುತ್ತಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಆರಂಭಿಕ ಮಾದರಿಗಳಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿರುವ ಮಾಹಿತಿ ಲಭ್ಯವಾಗಿದೆ.

ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಅಲ್ಕಾಜರ್

ಎಲಾಂಟ್ರಾ ಕಾರಿನಲ್ಲಿ ಬಳಕೆ ಮಾಡಿರುವ 2.0-ಲೀಟರ್ ಎಂಪಿಐ ಪೆಟ್ರೋಲ್ ಎಂಜಿನ್ ಮಾದರಿಯನ್ನು ಮತ್ತು ಕ್ರೆಟಾ ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಬಳಕೆ ಮಾಡಲಾಗುತ್ತಿದ್ದು, ಪೆಟ್ರೋಲ್ ಮಾದರಿಯು 159-ಬಿಎಚ್‌ಪಿ ಉತ್ಪಾದಿಸಿದ್ದಲ್ಲಿ ಡೀಸೆಲ್ ಮಾದರಿಯು 115-ಬಿಎಚ್‌ಪಿ ಉತ್ಪಾದನೆಯೊಂದಿಗೆ ಉತ್ತಮ ಇಂಧನ ದಕ್ಷತೆ ಹೊಂದಿವೆ.

ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಅಲ್ಕಾಜರ್

ಇನ್ನು ಹೊಸ ಅಲ್ಕಾಜರ್ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಎಂಜಿನ್ ಆಯ್ಕೆಯೊಂದಿಗೆ ಫುಲ್ ಸೈಜ್ ಎಸ್‌ಯುವಿ ಕಾರು ಖರೀದಿದಾರರನ್ನು ಮಾತ್ರವಲ್ಲ ಎಂಪಿವಿ ಖರೀದಿದಾರರನ್ನು ಸಹ ಸೆಳೆಯಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14 ಲಕ್ಷದಿಂದ ರೂ.19 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.

Most Read Articles

Kannada
English summary
Hyundai Alcazar brochure leaked ahead of launch. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X