Just In
Don't Miss!
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
3ಡಿ ವಿನ್ಯಾಸದಲ್ಲಿ ಮೂಡಿಬಂದ ಹ್ಯುಂಡೈ 7 ಸೀಟರ್ ಅಲ್ಕಾಜರ್ ಎಸ್‌ಯುವಿ
ಹ್ಯುಂಡೈ ಇಂಡಿಯಾ ಕಂಪನಿಯು ಜಾಗತಿಕ ಮಾರುಕಟ್ಟೆಗಾಗಿ ಕ್ರೆಟಾ ಕಾರು ಮಾದರಿಯನ್ನು ಆಧರಿಸಿ ಹೊಚ್ಚ ಹೊಸ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಾರಿನ ವಿನ್ಯಾಸದ ಕುರಿತಾಗಿ ಸಾಮಾಜಿಕ ತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಅಲ್ಕಾಜರ್ ಕಾರಿನ ವಿನ್ಯಾಸಗಳ ಕುರಿತಾಗಿ ಹ್ಯುಂಡೈ ಇಂಡಿಯಾ ಕಂಪನಿಯು ಈಗಾಗಲೇ ಕೆಲವು ಮಾಹಿತಿಗಳ ಜೊತೆಗೆ ರೇಖಾಚಿತ್ರಗಳನ್ನು ಹಂಚಿಕೊಂಡಿದ್ದು, ಹೊಸ ಕಾರು ಮುಂದಿನ ತಿಂಗಳು ಏಪ್ರಿಲ್ 6ರಂದು ಅನಾವರಣಗೊಳ್ಳಲಿದೆ. ಹೊಸ ಕಾರಿನ ಹೊರ ವಿನ್ಯಾಸದ ಕುರಿತಾಗಿ ಬಿಡುಗಡೆಗೊಳಿಸಲಾದ ಕೆಲವು ಮಾಹಿತಿಗಳು ಮತ್ತು ರೇಖಾಚಿತ್ರಗಳನ್ನು ಆಧರಿಸಿ ಹಮ್3ಡಿ ಕಂಪನಿಯು ಹೊಸ ಕಾರಿನ 3ಡಿ ಚಿತ್ರವನ್ನು ಸಿದ್ದಪಡಿಸಿದ್ದು, ಉತ್ಪಾದನಾ ಆವೃತ್ತಿಯು ಹೀಗಿರಬಹೆಂದು ಉಹಿಸಲಾಗಿದೆ.

ಬಹುನೀರಿಕ್ಷಿತ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಯೆಂತೆ ಹಲವಾರು ಹೊಸ ಸೌಲಭ್ಯಗಳೊಂದಿಗೆ 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಬಿಡುಗಡೆಯಾಗುತ್ತಿದ್ದು, ಕ್ರೆಟಾ ಮಾದರಿಯನ್ನು ಆಧರಿಸಿ ಉತ್ಪಾದನೆಗೊಂಡಿರುವ ಹೊಸ ಕಾರು ಎಸ್‌ಯುವಿ ಕಾರಿನ 3ಡಿ ಚಿತ್ರಗಳು ಉತ್ಪಾದನಾ ಮಾದರಿಯಲ್ಲೇ ಹೋಲಿಕೆ ಪಡೆದುಕೊಂಡಿದೆ.

ಅಲ್ಕಾಜರ್ ಕಾರಿನಲ್ಲಿ ವಿಸ್ತರಿತ ಕ್ಯಾಬಿನ್‌ನೊಂದಿಗೆ ಮೂರು ಸಾಲಿನ ಆಸನಗಳೊಂದಿಗೆ 7 ಸೀಟರ್ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜೋಡಣೆ ಮಾಡಲಾಗಿದ್ದು, ಗ್ರಾಹಕರು ಹೊಸ ಕಾರಿನಲ್ಲಿ ತಮ್ಮ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಮಾದರಿಗಳನ್ನು ಆಯ್ಕೆ ಮಾಡಬಹುದಾಗಿದೆ.

ಹೊಸ ಕಾರಿನ 6 ಸೀಟರ್ ಮಾದರಿಯಲ್ಲಿ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದ್ದು, ಹಿಂಬದಿಯ ಸವಾರರಿಗೂ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳಿವೆ. ಹೊಸ ವೈಶಿಷ್ಟ್ಯತೆಗಳಿವೆ. 6 ಸೀಟರ್ ಮಾದರಿಯು 2+2+2 ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿರಲಿದ್ದು, ಕ್ರೆಟಾ ಮಾದರಿಯಂತೆ ವೀಲ್ಹ್ ಬೆಸ್‌ನೊಂದಿಗೆ ಮೂರನೇ ಸಾಲಿನ ಪ್ರಯಾಣಿಕರಿಗೆ ಸ್ಥಳಾವಕಾಶ ಒದಗಿಸಲು ಕ್ಯಾಬಿನ್ ಸೌಲಭ್ಯವನ್ನು ವಿಸ್ತರಿಸಲಾಗಿದೆ.

ಈ ಮೂಲಕ ಮಧ್ಯಮ ಕ್ರಮಾಂಕದಲ್ಲೇ 7 ಸೀಟರ್ ಕಾರು ಮಾದರಿಗಳನ್ನು ಖರೀದಿಸುವ ಗ್ರಾಹಕರನ್ನು ಸೆಳೆಯುತ್ತಿರುವ ಕಂಪನಿಯು ಹೊಸ ಕಾರನ್ನು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ.

ಇನ್ನು ಹೊಸ ಅಲ್ಕಾಜರ್ ಕಾರು ಟಾಟಾ ನ್ಯೂ ಜನರೇಷನ್ ಸಫಾರಿ, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಸ್ಟ್ಯಾಂಡರ್ಡ್ ಕ್ರೆಟಾ ಕಾರು ಮಾದರಿಗಿಂತ ರೂ. 1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಕಾರಿಗಾಗಿ ಸದ್ಯ ಕ್ರೆಟಾ ಮಾದರಿಯಲ್ಲಿ ಜೋಡಿಸಲಾಗಿರುವ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಅನ್ನೇ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯದ ಹೊರತಾಗಿ ಇನ್ನುಳಿದ ತಾಂತ್ರಿಕ ಅಂಶಗಳನ್ನು ಸಾಮಾನ್ಯ ಕ್ರೆಟಾ ಕಾರಿನಿಂದಲೇ ಎರವಲು ಪಡೆದುಕೊಳ್ಳಲಿದೆ.

ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಇತ್ತೀಚೆಗೆ ಪ್ರಮುಖ ಕಾರು ಕಂಪನಿಯು 5 ಸೀಟರ್ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲಿ 5 ಸೀಟರ್ ಜೊತೆಗೆ 7 ಸೀಟರ್ ಮಾದರಿಯನ್ನು ಪರಿಚಯಿಸುತ್ತಿರುವ ಅಲ್ಕಾಜರ್ ಬಿಡುಗಡೆಗೆ ಪ್ರಮುಖ ಕಾರಣವಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಈ ಮೂಲಕ ಎಂಪಿವಿ ಮಾದರಿಯಲ್ಲಿ ಸದ್ಯ ಜನಪ್ರಿಯವಾಗಿರುವ ಇನೋವಾ ಕ್ರಿಸ್ಟಾ ಗ್ರಾಹಕರನ್ನು ಸಹ ಸೆಳೆಯಲು ಯತ್ನಿಸುತ್ತಿಸುರುವ ಹ್ಯುಂಡೈ ಕಂಪನಿಯು ಬೃಹತ್ ಯೋಜನೆ ರೂಪಿಸಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ.