ಬಿಡುಗಡೆ ಮುನ್ನವೇ 1,360 ಯುನಿಟ್ ಅಲ್ಕಾಜರ್ ನೋಂದಣಿ ಮಾಡಿದ ಹ್ಯುಂಡೈ
ಹ್ಯುಂಡೈ ಇಂಡಿಯಾ ಕಂಪನಿಯು ಹೊಚ್ಚ ಹೊಸ ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಕಂಪನಿಯು ಹೊಸ ಕಾರು ಬಿಡುಗಡೆಗೂ ಮುನ್ನವೇ ಕಂಪನಿಯು 1,360 ಯುನಿಟ್ ಅಲ್ಕಾಜರ್ ಕಾರುಗಳನ್ನು ನೋಂದಣಿ ಮಾಡಿದೆ.

ಹೊಸ ಕಾರು ಬಿಡುಗಡೆ ಮುನ್ನ ಈಗಾಗಲೇ ಪ್ರಮುಖ ಡೀಲರ್ಸ್ ಯಾರ್ಡ್‌ಗಳಲ್ಲಿ ಪ್ರದರ್ಶನಕ್ಕಾಗಿ ಅಲ್ಕಾಜರ್ ಮಾದರಿಯನ್ನು ನೋಂದಣಿ ಮಾಡಿಸಿರುವ ಹ್ಯುಂಡೈ ಕಂಪನಿಯು ಮುಂದಿನ ಲಾಕ್‌ಡೌನ್ ಸಡಿಲಿಕೆ ನಂತರ ಆಸಕ್ತ ಗ್ರಾಹಕರಿಗಾಗಿ ಟೆಸ್ಟ್ ಡ್ರೈವ್ ಆರಂಭಿಸಲಾಗುತ್ತಿದ್ದು, ಹೊಸ ಕಾರು ಟಾಟಾ ಸಫಾರಿ ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿ ನಿರ್ಮಾಣವಾಗಿರುವ ಹೊಸ ಅಲ್ಕಾಜರ್ ಕಾರು ಮಾದರಿಯು ವಿವಿಧ ಆರು ವೆರಿಯೆಂಟ್‌ಗಳೊಂದಿಗೆ ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಮಾದರಿಯಲ್ಲಿ ಖರೀದಿಗೆ ಲಭ್ಯವಿರಲಿದೆ.

ಎಸ್‌ಯುವಿ ಸರಣಿಯಲ್ಲಿರುವ ತನ್ನ ವೆನ್ಯೂ, ಕ್ರೆಟಾ, ಟಕ್ಸನ್ ಮತ್ತು ಕೊನಾ ಇವಿ ಮಾದರಿಗಳಂತೆ ಅಲ್ಕಾಜರ್ ಮಾದರಿಯ ಮಾರಾಟದಲ್ಲೂ ಕೂಡಾ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿರುವ ಹ್ಯುಂಡೈ ಕಂಪನಿಯು ಹೊಸ ಕಾರನ್ನು ವಿವಿಧ ಆರು ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡುತ್ತಿದೆ.

ಹೊಸ ಕಾರು ಪ್ಲ್ಯಾಟಿನಂ, ಪ್ರೆಸ್ಟಿಜ್, ಸಿಗ್ನಿಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟಿಜ್ ಆಪ್ಷನ್ ಮತ್ತು ಸಿಗ್ನಿಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್‌ಗಳೊಂದಿಗೆ ಟೈಪೂನ್ ಸಿಲ್ವರ್, ಟೈಟಾನ್ ಗ್ರೇ, ಟೈಗಾ ಬ್ರೌನ್, ಸ್ಟೇರಿ ನೈಟ್, ಪೊಲಾರ್ ವೈಟ್ ಮತ್ತು ಪ್ಯಾಂಥಮ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿವೆ.

ಇನ್ನು ವಿಸ್ತರಿತ ಕ್ಯಾಬಿನ್ ಮೂಲಕ ಮೂರು ಸಾಲಿನ ಆಸನ ಸೌಲಭ್ಯವನ್ನು ಅಚ್ಚುಕಟ್ಟಾದ ಜೋಡಣೆ ಹೊಂದಿದ್ದು, ಹೊಸ ಕಾರಿನಲ್ಲಿ ಪ್ರತ್ಯೇಕ ಆಸನ ಸೌಲಭ್ಯ ಹೊಂದಿರುವ 6 ಸೀಟರ್ ಮಾದರಿಯೇ ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ.

ಹೈ ಎಂಡ್ ಮಾದರಿಯ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದ್ದು, ಹಿಂಬದಿಯ ಸವಾರರಿಗೂ ಆರಾಮದಾಯಕ ಪ್ರಯಾಣಕ್ಕಾಗಿ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳನ್ನು ನೀಡಲಾಗಿದೆ.
MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಅಲ್ಕಾಜರ್ ಕಾರಿನ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದ್ದು, ವಿವಿಧ ಮಾದರಿಗಳಿಗೆ ಅನುಗುಣವಾಗಿ ಎರಡು ಎಂಜಿನ್ ಆಯ್ಕೆ ನೀಡಲಾಗುತ್ತಿದೆ.

ಹ್ಯುಂಡೈ ಕಂಪನಿಯು ಹೊಸ ಅಲ್ಕಾಜರ್ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಎಂಜಿನ್ ಮತ್ತು ಆರಂಭಿಕ ಮಾದರಿಗಳಲ್ಲಿ 1.5-ಲೀಟರ್ ಎಂಜಿನ್ ಜೋಡಣೆ ಮಾಡಲಾಗಿದ್ದು, 2.0-ಲೀಟರ್ ಎಂಜಿನ್ ಮಾದರಿಯನ್ನು ಟ್ಯುಸಾನ್ ಮತ್ತು ಎಲಾಂಟ್ರಾ ಮಾದರಿಗಳಲ್ಲಿ ಈಗಾಗಲೇ ಬಳಕೆ ಮಾಡಲಾಗುತ್ತಿದೆ.
MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಹೊಸ ಅಲ್ಕಾಜರ್ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಎಂಜಿನ್ ಆಯ್ಕೆಯೊಂದಿಗೆ ಫುಲ್ ಸೈಜ್ ಎಸ್‌ಯುವಿ ಕಾರು ಖರೀದಿದಾರರನ್ನು ಮಾತ್ರವಲ್ಲ ಎಂಪಿವಿ ಖರೀದಿದಾರರನ್ನು ಸಹ ಸೆಳೆಯಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14 ಲಕ್ಷದಿಂದ ರೂ.19 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.


Click it and Unblock the Notifications








