Just In
Don't Miss!
- Lifestyle
ಭಾನುವಾರದ ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಫಲ ಹೇಗಿದೆ ನೋಡಿ
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಲ್ಕಾಜರ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ಹೊಸ 7 ಸೀಟರ್ ಎಸ್‌ಯುವಿ
ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಮಧ್ಯಮ ಕ್ರಮಾಂಕದ ಎಸ್‌ಯುವಿ ಸರಣಿ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಕ್ರೆಟಾ ಮಾದರಿಯನ್ನು ಆಧರಿಸಿ ಹೊಸ 7 ಸೀಟರ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಮುಂದಾಗಿದೆ.

ವಿವಿಧ ಕಾರು ಕಂಪನಿಗಳು ಮಧ್ಯಮ ಗಾತ್ರದ 5 ಸೀಟರ್ ಎಸ್‌ಯುವಿ ಆವೃತ್ತಿಗಳಲ್ಲೇ 7 ಸೀಟರ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಹ್ಯುಂಡೈ ಕೂಡಾ ಇದೇ ನಿಟ್ಟಿನಲ್ಲಿ ಕ್ರೆಟಾ ಕಾರು ಮಾದರಿಯ ಪ್ಲ್ಯಾಟ್‌ಫಾರ್ಮ್‌ನಲ್ಲಿಯೇ ಮೂರನೇ ಸಾಲಿನ ಆಸನ ಹೊಂದಿರುವ 7 ಸೀಟರ್ ಮಾದರಿಯನ್ನು ಅಭಿವೃದ್ದಿಗೊಳಿಸಿದೆ. ಹೊಸ ಕಾರನ್ನು ಅಲ್ಕಾಜರ್ ಎಂದು ಹೆಸರು ನೋಂದಾಯಿಸಿರುವ ಹ್ಯುಂಡೈ ಕಂಪನಿಯು ಶೀಘ್ರದಲ್ಲೇ ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಹೊಸ ಎಸ್‌ಯುವಿ ಕಾರು ಮಾದರಿಯು ಹೊಸ ವೈಶಿಷ್ಟ್ಯತೆಗಳೊಂದಿಗೆ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯಲಿದ್ದು, ಕಾರಿನ ಕಾರ್ಯಕ್ಷಮತೆ ಕುರಿತಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಹೊಸ ಕಾರನ್ನು ಈ ವರ್ಷದ ಎರಡನೇ ತ್ರೈಮಾಸಿಕ ಅವಧಿಯ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಟಾಟಾ ನ್ಯೂ ಜನರೇಷನ್ ಸಫಾರಿ, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಬೆಲೆಯಲ್ಲೂ ದುಬಾರಿಯಾಗಿರಲಿದ್ದು, ಸ್ಟ್ಯಾಂಡರ್ಡ್ ಕ್ರೆಟಾ ಕಾರು ಮಾದರಿಗಿಂತ ರೂ. 1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ. ಹೊಸ ಕಾರಿನಲ್ಲಿ ಗ್ರಾಹಕರ ತಮ್ಮ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯವನ್ನ ಪಡೆದುಕೊಳ್ಳಬಹುದಾಗಿದ್ದು, 6 ಸೀಟರ್ ಮಾದರಿಯು 2+2+2 ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿರಲಿದೆ.

ಇನ್ನು ಹೊಸ ಕಾರಿನಲ್ಲಿ ಸದ್ಯ ಮಾರುಕಟ್ಟೆಯಲ್ಲಿರುವ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯದ ಹೊರತಾಗಿ ಇನ್ನುಳಿದ ತಾಂತ್ರಿಕ ಅಂಶಗಳನ್ನು ಸಾಮಾನ್ಯ ಕ್ರೆಟಾ ಕಾರಿನಿಂದಲೇ ಎರವಲು ಪಡೆದುಕೊಳ್ಳಲಿದೆ.

ಸದ್ಯ ಹ್ಯುಂಡೈ ನ್ಯೂ ಜನರೇಷನ್ ಕ್ರೆಟಾ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 17.53 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದ್ದು, 7 ಸೀಟರ್ ಮಾದರಿಯು ಇನ್ನಷ್ಟು ದುಬಾರಿಯಾಗಿರಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಕ್ರೆಟಾ ಕಾರು ಸದ್ಯ 5 ಸೀಟರ್ ಸೌಲಭ್ಯದೊಂದಿಗೆ ಗ್ರಾಹಕರ ಬೇಡಿಕೆಯೆಂತೆ ಐದು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯೊಂದಿಗೆ ಮಾರಾಟಗೊಳ್ಳುತ್ತಿದೆ.

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇದೀಗ ಬಿಡುಗಡೆಗೆ ಸಿದ್ದವಾಗಿರುವ 7 ಸೀಟರ್ ಸೌಲಭ್ಯದ ಅಲ್ಕಾಜರ್ ಕಾರು ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಆಾಯ್ಕೆ ಮಾತ್ರ ನೀಡಬಹುದಾಗಿದ್ದು, 1.4-ಲೀಟರ್ ಟರ್ಬೊ ಮಾದರಿಯನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿಲ್ಲ. ಇನ್ನು ಹೆಚ್ಚುವರಿ ಆಸನ ಸೌಲಭ್ಯವನ್ನು ಹೊರತುಪಡಿಸಿ ಇನ್ನುಳಿದ ಬಹುತೇಕ ತಾಂತ್ರಿಕ ಅಂಶಗಳು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಜೋಡಣೆ ಮಾಡಲಾಗುತ್ತಿದ್ದು, ಕ್ರೆಟಾ ಮಾದರಿಯಂತೆ ವೀಲ್ಹ್ ಬೆಸ್‌ನೊಂದಿಗೆ ಮೂರನೇ ಸಾಲಿನ ಪ್ರಯಾಣಿಕರಿಗೆ ಸ್ಥಳಾವಕಾಶ ಒದಗಿಸಲು ಹೆಚ್ಚುವರಿ ಕ್ಯಾಬಿನ್ ಸೌಲಭ್ಯವನ್ನು ನೀಡಬಹುದಾಗಿದೆ.