Alcazar ಎಸ್‍ಯುವಿಯ ಹೊಸ ಟಿವಿಸಿ ಬಿಡುಗಡೆಗೊಳಿಸಿದ Hyundai

ಭಾರತದ ಎರಡನೇ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಇಂಡಿಯಾ ತನ್ನ ಎಸ್‍ಯುವಿ ಪೋರ್ಟ್ಫೋಲಿಯೊವನ್ನು ಮತ್ತಷ್ಟು ಬಲಪಡಿಸಲು 7-ಸೀಟರ್ ಅಲ್ಕಾಜರ್ ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿತು, ಈ ಹೊಸ ಹ್ಯುಂಡೈ ಅಲ್ಕಾಜರ್ 7-ಸೀಟರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ.

Alcazar ಎಸ್‍ಯುವಿಯ ಹೊಸ ಟಿವಿಸಿ ಬಿಡುಗಡೆಗೊಳಿಸಿದ Hyundai

ಹೊಸ ಹ್ಯುಂಡೈ ಅಲ್ಕಾಜರ್ 7-ಸೀಟರ್ ಮಾದರಿಯು ಪ್ರಸ್ತುತ ತಲೆಮಾರಿನ ಹ್ಯುಂಡೈ ಕ್ರೆಟಾವನ್ನು ಆಧರಿಸಿದೆ, ಇದು ಆಯಾ ವಿಭಾಗದಲ್ಲಿ ಜನಪ್ರಿಯ ಮಾದರಿಯಾಗಿದೆ. ಇನ್ನು ಈ ಹ್ಯುಂಡೈ ಈಗ ಅಲ್ಕಾಜಾರ್ ಎಸ್‌ಯುವಿಗಾಗಿ ಹೊಸ ಟಿವಿಸಿಯನ್ನು ಹೊರ ಮತ್ತು ಒಳಾಂಗಣ ವೈಶಿಷ್ಟ್ಯಗಳನ್ನು ಪ್ರದರ್ಶಿಸಿದೆ. ಇನ್ನು ಈ ಹ್ಯುಂಡೈ ಅಲ್ಕಾಜಾರ್‌ನ ಒಳಭಾಗದಲ್ಲಿ ಉತ್ತಮ ಸ್ಪೇಸ್ ಅನ್ನು ಹೊಂದಿದ್ದು, 7 ಜನರು ಉತ್ತಮವಾಗಿ ಕುಳಿತು ಪ್ರಯಾಣಿಸಬಹುದು. ಈ ಹ್ಯುಂಡೈ ಅಲ್ಕಾಜರ್ 7-ಸೀಟರ್ ಆಕರ್ಷಕ ವಿನ್ಯಾಸ, ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ.

Alcazar ಎಸ್‍ಯುವಿಯ ಹೊಸ ಟಿವಿಸಿ ಬಿಡುಗಡೆಗೊಳಿಸಿದ Hyundai

ಹ್ಯುಂಡೈ ಕಂಪನಿಯು ಟಿವಿಸಿಯನ್ನು ವೀಡಿಯೊವನ್ನು ಹ್ಯುಂಡೈ ಇಂಡಿಯಾ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದೆ.ಈ ಹೊಸ ಟಿವಿಸಿಯಲ್ಲಿ ಅಲ್ಕಾಜಾರ್ ಎಷ್ಟು ವಿಶಾಲ ಮತ್ತು ಆರಾಮದಾಯಕವಾಗಿದೆ ಎಂಬುದನ್ನು ತೋರಿಸುತ್ತದೆ. ಮೇಲೆ ಹೇಳಿದಂತೆ ಹ್ಯುಂಡೈ ಅಲ್ಕಾಜಾರ್ ಕ್ರೆಟಾವನ್ನು ಆಧರಿಸಿದೆ ಆದರೆ, ಅದರ ಕೆಲವು ಸ್ಪರ್ಧಿಗಳಿಗಿಂತ ಭಿನ್ನವಾಗಿ, ಹ್ಯುಂಡೈ ಎರಡೂ ಎಸ್‌ಯುವಿಗಳನ್ನು ಪ್ರತ್ಯೇಕಿಸಲು ಕಾರಿನಲ್ಲಿ ಕೆಲವು ಕಾಸ್ಮೆಟಿಕ್ ಮತ್ತು ಯಾಂತ್ರಿಕ ಬದಲಾವಣೆಗಳನ್ನು ಮಾಡಿದೆ.

Alcazar ಎಸ್‍ಯುವಿಯ ಹೊಸ ಟಿವಿಸಿ ಬಿಡುಗಡೆಗೊಳಿಸಿದ Hyundai

ಈ ಹ್ಯುಂಡೈ ಅಲ್ಕಾಜರ್ 7-ಸೀಟರ್ ಮಾದರಿಯನ್ನು 6 ಮತ್ತು 7 ಆಸನಗಳ ಸಂರಚನೆಗಳಲ್ಲಿ ಅನ್ನು ನೀಡುತ್ತದೆ. ಈ ಅಲ್ಕಾಜಾರ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಸೀಟುಗಳನ್ನು ಸೆಂಟರ್ ಕನ್ಸೋಲ್‌ನೊಂದಿಗೆ ಪಡೆಯುತ್ತದೆ, ಇದರಲ್ಲಿ ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಕಪ್‌ಹೋಲ್ಡರ್‌ಗಳಿವೆ. ಎಲ್ಲಾ ಮೂರು ಸಾಲುಗಳ ಸೀಟುಗಳೊಂದಿಗೆ 180 ಲೀಟರ್ ಬೂಟ್ ಸ್ಪೇಸ್ ನೀಡುತ್ತದೆ.

Alcazar ಎಸ್‍ಯುವಿಯ ಹೊಸ ಟಿವಿಸಿ ಬಿಡುಗಡೆಗೊಳಿಸಿದ Hyundai

ಹೊಸ ಹ್ಯುಂಡೈ ಅಲ್ಕಾಜರ್ 7-ಸೀಟರ್ ಮಾದರಿಯಲ್ಲಿ 579 ಲೀಟರ್ ನಷ್ಟು ಬೂಟ್ ಸ್ಪೇಸ್ ಅನ್ನು ಹೊಂದಿದೆ. ಇದನ್ನು 1051 ಲೀಟರ್'ಗೆ ಹೆಚ್ಚಿಸಬಹುದು. ಇನ್ನು ಈ ಎಸ್‍ಯುವಿಯ ಡೈವಿಂಗ್ ಸೀಟ್ ಎಲೆಕ್ಟ್ರಿಕ್ ಆಗಿ ಅಡೆಜಸ್ಟ್ ಮಾಡಿಕೊಳ್ಳಬಹುದು. ಇದರ ಎರಡನೇ ಸಾಲಿನ ಸೀಟನ್ನು ಮಡಿಚುವ ಮೂಲಕ ಮೂರನೇ ಸಾಲಿನ ಸೀಟನ್ನು ಸುಲಭವಾಗಿ ಪ್ರವೇಶಿಸಬಹುದಾಗಿದೆ.

Alcazar ಎಸ್‍ಯುವಿಯ ಹೊಸ ಟಿವಿಸಿ ಬಿಡುಗಡೆಗೊಳಿಸಿದ Hyundai

ಎರಡನೇ ಸಾಲಿನ ಅಥವಾ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚು ಲೆಗ್ ರೂಂ ರಚಿಸಲು ಎರಡನೇ ಸಾಲಿನ ಸೀಟುಗಳನ್ನು ಸರಿಹೊಂದಿಸಬಹುದು. ಅಲ್ಕಾಜಾರ್ ಎಸ್‍ಯುವಿ ನೀಡುತ್ತಿರುವ ಮತ್ತೊಂದು ಆರಾಮದಾಯಕ ವೈಶಿಷ್ಟ್ಯವೆಂದರೆ ಎರಡನೇ ಸಾಲಿನ ಪ್ರಯಾಣಿಕರಿಗೆ ಟ್ರೇ ಟೇಬಲ್ ಲಭ್ಯವಿರುತ್ತದೆ, ಪ್ರಯಾಣಿಕರಿಗೆ ಹುಂಡೈ ಎಸಿ ವೆಂಟ್‌ಗಳನ್ನು ನೀಡುತ್ತಿದ್ದು, ಕಾರಿನಲ್ಲಿ ಇಂಟಿಗ್ರೇಟೆಡ್ ಏರ್ ಪ್ಯೂರಿಫೈಯರ್ ಅನ್ನು ಸಹ ಅಳವಡಿಸಲಾಗಿದೆ.

Alcazar ಎಸ್‍ಯುವಿಯ ಹೊಸ ಟಿವಿಸಿ ಬಿಡುಗಡೆಗೊಳಿಸಿದ Hyundai

ಹೊಸ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯು ಸ್ಪ್ಲಿಟ್-ಶೈಲಿಯ ಎಲ್ಇಡಿ ಹೆಡ್‌ಲ್ಯಾಂಪ್‌, 3ಡಿ ಹನಿಕೊಂಬ್ ಗ್ರಿಲ್, ಹೊಸ ವಿನ್ಯಾಸದ ಬಂಪರ್ ವಿನ್ಯಾಸ, ಎಲ್ಇಡಿ ಟೈಲ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್, ವಿವಿಧ ಮಾದರಿಗಳಿಗೆ ಅನುಗುಣವಾಗಿ 17 ಮತ್ತು 18-ಇಂಚಿನ ಅಲಾಯ್ ವೀಲ್ಹ್, ರೂಫ್ ರೈಲ್ಸ್, ಫ್ಲಕ್ಸ್ ಸ್ಕಫ್ ಪ್ಲೇಟ್, ಶಾರ್ಕ್ ಫಿನ್ ಅಂಟೆನಾ ಮತ್ತು ಬಾಡಿ ಕ್ಲ್ಯಾಡಿಂಗ್ ಅನ್ನು ಒಳಗೊಂಡಿದೆ.

Alcazar ಎಸ್‍ಯುವಿಯ ಹೊಸ ಟಿವಿಸಿ ಬಿಡುಗಡೆಗೊಳಿಸಿದ Hyundai

ಇದರೊಂದಿಗೆ ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ, 10.25 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 10.25 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಬ್ಲ್ಯೂ ಲಿಂಕ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಕಮಾಂಡರ್, ಮೂರು ಸಾಲಿಗೂ ಎಸಿ ವೆಂಟ್ಸ್, ಬ್ಲೈಂಡ್ ವಿಂಡೋ ಮಾನಿಟರ್ ಮತ್ತು ಆ್ಯಂಬಿಯೆಂಟ್ ಲೈಟಿಂಗ್ ಅನ್ನು ಕೂಡ ಹೊಂದಿದೆ. ಇನ್ನು ಸೀಟ್ ಬ್ಲ್ಯಾಟ್ ಟೇಬಲ್, ಆಟೋ ಏರ್ ಪ್ಯೂರಿಫೈರ್, ರಿಮೋಟ್ ಎಂಜಿನ್ ಸ್ಟಾರ್ಟ್, ಕ್ಲೈಮೆಟ್ ಕಂಟ್ರೋಲ್, ಪನೊರಮಿಕ್ ಸನ್‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಪೀಚರ್ಸ್ ಗಳನ್ನು ಕೂಡ ಒಳಗೊಂಡಿವೆ.

ಇನ್ನು ಈ ಹೊಸ ಎಸ್‍ಯುವಿಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಗಳನ್ನು ಹೊಂದಿವೆ. ಈ ಅಲ್ಕಾಜರ್ ಎಸ್‍ಯುವಿಯಲ್ಲಿರುವ 2.0 ಲೀಟರ್ ಎಂಜಿನ್ 159 ಬಿಹೆಚ್‍ಪಿ ಪವರ್ ಮತ್ತು 191 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Alcazar ಎಸ್‍ಯುವಿಯ ಹೊಸ ಟಿವಿಸಿ ಬಿಡುಗಡೆಗೊಳಿಸಿದ Hyundai

ಈ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಗಳೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ನೀಡಲಾಗಿದೆ. ಈ ಹೊಸ ಎಸ್‍ಯುವಿ ಟೈಪೂನ್ ಸಿಲ್ವರ್, ಟೈಟಾನ್ ಗ್ರೇ, ಟೈಗಾ ಬ್ರೌನ್, ಸ್ಟೇರಿ ನೈಟ್, ಪೊಲಾರ್ ವೈಟ್ ಮತ್ತು ಪ್ಯಾಂಥಮ್ ಬ್ಲ್ಯಾಕ್ ಬಣ್ಣಗಳು ಸೇರಿ ಎರಡು ಡ್ಯುಯಲ್ ಟೋನ್ ಮಾದರಿಗಳು ಖರೀದಿಗೆ ಲಭ್ಯವಿದೆ.

Alcazar ಎಸ್‍ಯುವಿಯ ಹೊಸ ಟಿವಿಸಿ ಬಿಡುಗಡೆಗೊಳಿಸಿದ Hyundai

ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯಲ್ಲಿ ಕ್ರೂಸ್ ಕಂಟ್ರೋಲ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಬ್ಲೈಂಡ್ ವ್ಯೂ ಮಾನಿಟರ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಹಿಲ್ ಅಸಿಸ್ಟ್ ಕಂಟ್ರೋಲ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಹಲವಾರು ಫೀಚರ್ಸ್ ಗಳನ್ನು ಒಳಗೊಂಡಿವೆ.

Alcazar ಎಸ್‍ಯುವಿಯ ಹೊಸ ಟಿವಿಸಿ ಬಿಡುಗಡೆಗೊಳಿಸಿದ Hyundai

ಈ ಹ್ಯುಂಡೈ ಅಲ್ಕಾಜರ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಎಂಜಿ ಹೆಕ್ಟರ್, ಟಾಟಾ ಸಫಾರಿ ಮತ್ತು ಇತ್ತೀಚೆಗೆ ಬಿಡುಗಡೆಯಾದ ಮಹೀಂದ್ರಾ XUV700 ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತಿದೆ. ಇನ್ನು 2020ರ ಸೆಪ್ಟೆಂಬರ್ ಅವಧಿಯಲ್ಲಿ ಸುಮಾರು 59,913 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಹ್ಯುಂಡೈ ಕಂಪನಿಯು ಈ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ ಶೇ 35 ರಷ್ಟು ಮಾರಾಟದಲ್ಲಿ ಇಳಿಕೆಯಾಗಿದೆ. ಆದರೆ ಹಬ್ಬದ ಸೀಸನ್ ನಲ್ಲಿ ಹ್ಯುಂಡೈ ಕಾರುಗಳು ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗಿ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಬಹುದು.

Article Published On: Saturday, October 16, 2021, 12:38 [IST]
English summary
Hyundai alcazar new tvc released engine features details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+