ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಕಾರು ಮಾದರಿಗಳ ಮಾರಾಟದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಹ್ಯುಂಡೈ ಕಂಪನಿಯು ಕ್ರೆಟಾ ಎಸ್‌ಯುವಿ ಆಧರಿಸಿ ಮತ್ತೊಂದು ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು 7 ಸೀಟರ್ ಸೌಲಭ್ಯದೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಅಲ್ಕಾಜರ್ ಹೆಸರಿನೊಂದಿಗೆ ಬಿಡುಗಡೆಯಾಗಲಿರುವ ಹ್ಯುಂಡೈ ಹೊಸ 7 ಸೀಟರ್ ಎಸ್‌‌ಯುವಿ ಕಾರು ಮಾದರಿಯು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ. ಉತ್ಪಾದನಾ ಆವೃತ್ತಿ ಅನಾವರಣಗೊಂಡ ನಂತರವಷ್ಟೇ ಮಾರುಕಟ್ಟೆ ಪ್ರವೇಶಿಸಲಿರುವ ಹೊಸ ಕಾರು ಇತ್ತೀಚೆಗೆ ಬಿಡುಗಡೆಯಾಗಲಿರುವ 7 ಸೀಟರ್ ಸೌಲಭ್ಯದ ಎಂಜಿ ಹೆಕ್ಟರ್ ಪ್ಲಸ್ ಮತ್ತು ಟಾಟಾ ಸಫಾರಿ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿದೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಕ್ರೆಟಾ ಕಾರು ಮಾದರಿಯ ಪ್ಲ್ಯಾಟ್‌ಫಾರ್ಮ್ ಆಧರಿಸಿ ಮೂರನೇ ಸಾಲಿನ ಆಸನ ಹೊಂದಿರುವ ಅಲ್ಕಾಜರ್ ಕಾರಿನಲ್ಲಿ 7 ಸೀಟರ್ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜೋಡಣೆ ಮಾಡಿದ್ದು, ಗ್ರಾಹಕರು ಹೊಸ ಕಾರಿನಲ್ಲಿ ತಮ್ಮ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಖರೀದಿಸಬಹುದಾಗಿದೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಅಲ್ಕಾಜರ್ ಕಾರು ಮಾದರಿಯ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದ್ದು, ಹಿಂಬದಿಯ ಸವಾರರಿಗೂ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳಿವೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಯು ಹೊಸ ವೈಶಿಷ್ಟ್ಯತೆಗಳೊಂದಿಗೆ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯಲಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ತಮ್ಮ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯವನ್ನ ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ 6 ಸೀಟರ್ ಮಾದರಿಯು 2+2+2 ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿರಲಿದೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರನ್ನು ಈ ವರ್ಷದ ಎರಡನೇ ತ್ರೈಮಾಸಿಕ ಅವಧಿಯ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಟಾಟಾ ನ್ಯೂ ಜನರೇಷನ್ ಸಫಾರಿ, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವುದರಲ್ಲಿ ಅನುಮಾನವೇ ಇಲ್ಲ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಬೆಲೆಯಲ್ಲೂ ದುಬಾರಿಯಾಗಿರಲಿದ್ದು, ಸ್ಟ್ಯಾಂಡರ್ಡ್ ಕ್ರೆಟಾ ಕಾರು ಮಾದರಿಗಿಂತ ರೂ. 1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿಗಾಗಿ ಸದ್ಯ ಕ್ರೆಟಾ ಮಾದರಿಯಲ್ಲಿ ಜೋಡಿಸಲಾಗಿರುವ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ ಅನ್ನೇ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯದ ಹೊರತಾಗಿ ಇನ್ನುಳಿದ ತಾಂತ್ರಿಕ ಅಂಶಗಳನ್ನು ಸಾಮಾನ್ಯ ಕ್ರೆಟಾ ಕಾರಿನಿಂದಲೇ ಎರವಲು ಪಡೆದುಕೊಳ್ಳಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಇನ್ನು ಹೆಚ್ಚುವರಿ ಆಸನ ಸೌಲಭ್ಯವನ್ನು ಹೊರತುಪಡಿಸಿ ಇನ್ನುಳಿದ ಬಹುತೇಕ ತಾಂತ್ರಿಕ ಅಂಶಗಳು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಜೋಡಣೆ ಮಾಡಲಾಗುತ್ತಿದ್ದು, ಕ್ರೆಟಾ ಮಾದರಿಯಂತೆ ವೀಲ್ಹ್ ಬೆಸ್‌ನೊಂದಿಗೆ ಮೂರನೇ ಸಾಲಿನ ಪ್ರಯಾಣಿಕರಿಗೆ ಸ್ಥಳಾವಕಾಶ ಒದಗಿಸಲು ಹೆಚ್ಚುವರಿ ಕ್ಯಾಬಿನ್ ಸೌಲಭ್ಯವನ್ನು ನೀಡಬಹುದಾಗಿದೆ.

Most Read Articles

Kannada
English summary
Hyundai is planning to launch new Alcazar 7 seater SUV by June 2021. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X