Just In
- 11 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 13 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 15 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 1 day ago
ಎಕ್ಸ್ಯುವಿ700 ಎಸ್ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- Sports
ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್
- News
ಕರ್ಫ್ಯೂ ನಡುವೆಯೂ ಮೋಜು ಮಸ್ತಿ! ಪಾರ್ಟಿ ಮಾಡುತ್ತಿದ್ದ ಗ್ಯಾಂಗ್ ಕಂಬಿ ಹಿಂದೆ..!
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್ಯುವಿ ಬಿಡುಗಡೆ ಮಾಹಿತಿ ಬಹಿರಂಗ
ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಕಾರು ಮಾದರಿಗಳ ಮಾರಾಟದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಹ್ಯುಂಡೈ ಕಂಪನಿಯು ಕ್ರೆಟಾ ಎಸ್ಯುವಿ ಆಧರಿಸಿ ಮತ್ತೊಂದು ಎಸ್ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು 7 ಸೀಟರ್ ಸೌಲಭ್ಯದೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಅಲ್ಕಾಜರ್ ಹೆಸರಿನೊಂದಿಗೆ ಬಿಡುಗಡೆಯಾಗಲಿರುವ ಹ್ಯುಂಡೈ ಹೊಸ 7 ಸೀಟರ್ ಎಸ್ಯುವಿ ಕಾರು ಮಾದರಿಯು ಮಧ್ಯಮ ಗಾತ್ರದ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ. ಉತ್ಪಾದನಾ ಆವೃತ್ತಿ ಅನಾವರಣಗೊಂಡ ನಂತರವಷ್ಟೇ ಮಾರುಕಟ್ಟೆ ಪ್ರವೇಶಿಸಲಿರುವ ಹೊಸ ಕಾರು ಇತ್ತೀಚೆಗೆ ಬಿಡುಗಡೆಯಾಗಲಿರುವ 7 ಸೀಟರ್ ಸೌಲಭ್ಯದ ಎಂಜಿ ಹೆಕ್ಟರ್ ಪ್ಲಸ್ ಮತ್ತು ಟಾಟಾ ಸಫಾರಿ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿದೆ.

ಕ್ರೆಟಾ ಕಾರು ಮಾದರಿಯ ಪ್ಲ್ಯಾಟ್ಫಾರ್ಮ್ ಆಧರಿಸಿ ಮೂರನೇ ಸಾಲಿನ ಆಸನ ಹೊಂದಿರುವ ಅಲ್ಕಾಜರ್ ಕಾರಿನಲ್ಲಿ 7 ಸೀಟರ್ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜೋಡಣೆ ಮಾಡಿದ್ದು, ಗ್ರಾಹಕರು ಹೊಸ ಕಾರಿನಲ್ಲಿ ತಮ್ಮ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಖರೀದಿಸಬಹುದಾಗಿದೆ.

ಅಲ್ಕಾಜರ್ ಕಾರು ಮಾದರಿಯ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದ್ದು, ಹಿಂಬದಿಯ ಸವಾರರಿಗೂ ಹೆಡ್ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳಿವೆ.

ಹೊಸ ಅಲ್ಕಾಜರ್ ಎಸ್ಯುವಿ ಕಾರು ಮಾದರಿಯು ಹೊಸ ವೈಶಿಷ್ಟ್ಯತೆಗಳೊಂದಿಗೆ ಎಸ್ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯಲಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ತಮ್ಮ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯವನ್ನ ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ 6 ಸೀಟರ್ ಮಾದರಿಯು 2+2+2 ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿರಲಿದೆ.

ಹೊಸ ಕಾರನ್ನು ಈ ವರ್ಷದ ಎರಡನೇ ತ್ರೈಮಾಸಿಕ ಅವಧಿಯ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಟಾಟಾ ನ್ಯೂ ಜನರೇಷನ್ ಸಫಾರಿ, ಮಹೀಂದ್ರಾ ಎಕ್ಸ್ಯುವಿ500 ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವುದರಲ್ಲಿ ಅನುಮಾನವೇ ಇಲ್ಲ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಬೆಲೆಯಲ್ಲೂ ದುಬಾರಿಯಾಗಿರಲಿದ್ದು, ಸ್ಟ್ಯಾಂಡರ್ಡ್ ಕ್ರೆಟಾ ಕಾರು ಮಾದರಿಗಿಂತ ರೂ. 1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.

ಹೊಸ ಕಾರಿಗಾಗಿ ಸದ್ಯ ಕ್ರೆಟಾ ಮಾದರಿಯಲ್ಲಿ ಜೋಡಿಸಲಾಗಿರುವ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಅನ್ನೇ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯದ ಹೊರತಾಗಿ ಇನ್ನುಳಿದ ತಾಂತ್ರಿಕ ಅಂಶಗಳನ್ನು ಸಾಮಾನ್ಯ ಕ್ರೆಟಾ ಕಾರಿನಿಂದಲೇ ಎರವಲು ಪಡೆದುಕೊಳ್ಳಲಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಇನ್ನು ಹೆಚ್ಚುವರಿ ಆಸನ ಸೌಲಭ್ಯವನ್ನು ಹೊರತುಪಡಿಸಿ ಇನ್ನುಳಿದ ಬಹುತೇಕ ತಾಂತ್ರಿಕ ಅಂಶಗಳು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಜೋಡಣೆ ಮಾಡಲಾಗುತ್ತಿದ್ದು, ಕ್ರೆಟಾ ಮಾದರಿಯಂತೆ ವೀಲ್ಹ್ ಬೆಸ್ನೊಂದಿಗೆ ಮೂರನೇ ಸಾಲಿನ ಪ್ರಯಾಣಿಕರಿಗೆ ಸ್ಥಳಾವಕಾಶ ಒದಗಿಸಲು ಹೆಚ್ಚುವರಿ ಕ್ಯಾಬಿನ್ ಸೌಲಭ್ಯವನ್ನು ನೀಡಬಹುದಾಗಿದೆ.