Just In
- 11 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 12 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 13 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 13 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
40 ದಿನಗಳಲ್ಲಿ 14 ಸಾವಿರ ಬುಕ್ಕಿಂಗ್ ಪಡೆದುಕೊಂಡ ಹ್ಯುಂಡೈ ಅಲ್ಕಾಜರ್
ಮಧ್ಯಮ ಗಾತ್ರದ ಎಸ್ಯುವಿ ವಿಭಾಗದಲ್ಲಿ ಹೊಸದಾಗಿ ಬಿಡುಗಡೆಯಾಗಿರುವ ಹ್ಯುಂಡೈ ಅಲ್ಕಾಜರ್ ಕಾರು ಮಾದರಿಯು ಹಲವಾರು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಗೊಂಡ 40 ದಿನಗಳಲ್ಲಿ 14 ಸಾವಿರ ಬುಕ್ಕಿಂಗ್ ಪಡೆದುಕೊಂಡಿದೆ.
ದುಬಾರಿ ಬೆಲೆ ನಡುವೆಯೂ ಮಧ್ಯಮ ಗಾತ್ರದ ಎಸ್ಯುವಿ ವಿಭಾಗದಲ್ಲಿ ಅತಿ ಕಡಿಮೆ ಅವಧಿಗೆ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿರುವ ಅಲ್ಕಾಜರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಕಂಪನಿಯು ಇದುವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಯುನಿಟ್ಗಳನ್ನು ವಿತರಣೆ ಮಾಡಿದೆ.
ಹೊಸ ಅಲ್ಕಾಜರ್ ಕಾರು ಮಾದರಿಯು 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯದೊಂದಿಗೆ ಪ್ಲ್ಯಾಟಿನಂ, ಪ್ರೆಸ್ಟೀಜ್, ಸಿಗ್ನೆಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟೀಜ್ ಆಪ್ಷನ್ ಮತ್ತು ಸಿಗ್ನೆಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದೆ.
ಹೊಸ ಅಲ್ಕಾಜರ್ ಕಾರು ಮಾದರಿಯು 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯದೊಂದಿಗೆ ಪ್ಲ್ಯಾಟಿನಂ, ಪ್ರೆಸ್ಟೀಜ್, ಸಿಗ್ನೆಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟೀಜ್ ಆಪ್ಷನ್ ಮತ್ತು ಸಿಗ್ನೆಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದೆ.
ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.30 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.99 ಲಕ್ಷ ಬೆಲೆ ಹೊಂದಿದ್ದು, ಅತ್ಯುತ್ತಮ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಟಾಟಾ ಸಫಾರಿ ಮತ್ತು ಎಂಜಿ ಹೆಕ್ಟರ್ ಪ್ಲಸ್ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.
ಅಲ್ಕಾಜರ್ ಕಾರಿನಲ್ಲಿ ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಹೊಸ ಕಾರು 4,500 ಎಂಎಂ ಉದ್ದಳತೆಯೊಂದಿಗೆ 6 ಸೀಟರ್(2+2+2) ಮತ್ತು 7 ಸೀಟರ್(2+3+2) ಮಾದರಿಯ ಆಸನ ಸೌಲಭ್ಯವನ್ನು ಹೊಂದಿದೆ.
ಸ್ಪ್ಲಿಟ್-ಶೈಲಿಯ ಎಲ್ಇಡಿ ಹೆಡ್ಲ್ಯಾಂಪ್, 3ಡಿ ಹನಿಕೊಂಬ್ ಗ್ರಿಲ್, ಹೊಸ ವಿನ್ಯಾಸದ ಬಂಪರ್ ವಿನ್ಯಾಸ, ಎಲ್ಇಡಿ ಟೈಲ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್, ವಿವಿಧ ಮಾದರಿಗಳಿಗೆ ಅನುಗುಣವಾಗಿ 17 ಮತ್ತು 18-ಇಂಚಿನ ಅಲಾಯ್ ವೀಲ್ಹ್, ರೂಫ್ ರೈಲ್ಸ್, ಫ್ಲಕ್ಸ್ ಸ್ಕಫ್ ಪ್ಲೇಟ್, ಶಾರ್ಕ್ ಫಿನ್ ಅಂಟೆನಾ, ಬಾಡಿ ಕ್ಲ್ಯಾಡಿಂಗ್ ಹೊಂದಿದೆ.
ಹೊಸ ಕಾರಿನ ಕ್ಯಾಬಿನ್ ಕೂಡಾ ಆಕರ್ಷಕವಾಗಿದ್ದು, 10.25 ಇಂಚಿನ ಟಿಎಫ್ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, 10.25 ಇಂಚಿನ ಇನ್ಪೋಟೈನ್ಮೆಂಟ್ ಸಿಸ್ಟಂ, ಬ್ಲ್ಯೂ ಲಿಂಕ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಕಮಾಂಡರ್, ಮೂರು ಸಾಲಿಗೂ ಎಸಿ ವೆಂಟ್ಸ್, ಬ್ಲೈಂಡ್ ವಿಂಡೋ ಮಾನಿಟರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಸೀಟ್ ಬ್ಲ್ಯಾಟ್ ಟೇಬಲ್, ಆಟೋ ಏರ್ ಪ್ಯೂರಿಫೈರ್, ರಿಮೋಟ್ ಎಂಜಿನ್ ಸ್ಟಾರ್ಟ್, ಕ್ಲೈಮೆಟ್ ಕಂಟ್ರೋಲ್, ಪನೊರಮಿಕ್ ಸನ್ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳಿವೆ.
ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಕ್ರೂಸ್ ಕಂಟ್ರೋಲ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಬ್ಲೈಂಡ್ ವ್ಯೂ ಮಾನಿಟರ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಹಿಲ್ ಅಸಿಸ್ಟ್ ಕಂಟ್ರೋಲ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.
ಹೊಸ ಕಾರು ಟೈಪೂನ್ ಸಿಲ್ವರ್, ಟೈಟಾನ್ ಗ್ರೇ, ಟೈಗಾ ಬ್ರೌನ್, ಸ್ಟೇರಿ ನೈಟ್, ಪೊಲಾರ್ ವೈಟ್ ಮತ್ತು ಪ್ಯಾಂಥಮ್ ಬ್ಲ್ಯಾಕ್ ಬಣ್ಣಗಳು ಸೇರಿ ಎರಡು ಡ್ಯುಯಲ್ ಟೋನ್ ಮಾದರಿಗಳು ಖರೀದಿಗೆ ಲಭ್ಯವಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್ಯುವಿ ಕಾರುಗಳಿಗೆ ಮಾತ್ರವಲ್ಲ ಎಂಪಿವಿ ಕಾರಿಗಳೂ ಪೈಪೋಟಿ ನೀಡುತ್ತಿದೆ.