7 ಸೀಟರ್ ಸೌಲಭ್ಯದ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ವಿಡಿಯೋ ರಿವ್ಯೂ

ಹೊಸ ವಾಹನಗಳ ಉತ್ಪಾದನೆ, ಮಾರಾಟದಲ್ಲಿ ಸಾಕಷ್ಟು ಸುಧಾರಣೆ ಕಂಡಿರುವ ಭಾರತೀಯ ಆಟೋ ಉದ್ಯಮದಲ್ಲಿ ಎಸ್‌ಯುವಿ ಸೆಗ್ಮೆಂಟ್ ತೀವ್ರವಾಗಿ ಬೆಳವಣಿಗೆ ಕಾಣುತ್ತಿದ್ದು, ದೇಶದ ಎರಡನೇ ಅತಿ ದೊಡ್ಡ ಕಾರು ಉತ್ಪಾದನಾ ಕಂಪನಿಯಾದ ಹ್ಯುಂಡೈ ಮೋಟಾರ್ಸ್ ಕಂಪನಿಯು ತನ್ನ ಹೊಚ್ಚ ಹೊಸ ಅಲ್ಕಾಜರ್ ಕಾರು ಮಾದರಿಯನ್ನು ಬಿಡುಗಡೆಗೊಳಿಸುವ ಮೂಲಕ ಎಸ್‌‌ಯುವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಹೊಸ ಅಲ್ಕಾಜರ್ ಕಾರು ಮಾದರಿಯುು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯಗಳೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ತೀವ್ರ ಪೈಪೋಟಿ ನೀಡುವ ಸಿದ್ದತೆಯಲ್ಲಿದ್ದು, ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿ ನಿರ್ಮಾಣವಾಗಿರುವ ಹೊಸ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳೊಂದಿಗೆ ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್‍ಗಳನ್ನು ಹೊಂದಿದೆ.

2,760-ಎಂಎಂ ವ್ಹೀಲ್ ಬೆಸ್ ಹೊಂದಿರುವ ಹೊಸ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಸ್ಥಳಾವಕಾಶದೊಂದಿಗೆ ಮೂರನೇ ಆಸನ ಸಾಲು ಹೊಂದಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಎಂಪಿಐ ಪೆಟ್ರೋಲ್ ಎಂಜಿನ್ ಮತ್ತು ಆರಂಭಿಕ ಮಾದರಿಗಳಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ವಿಡಿಯೋ ರಿವ್ಯೂ

2.0-ಲೀಟರ್(1,999 ಸಿಸಿ) ಎಂಪಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಮಾದರಿಗಳು ಉತ್ತಮ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದ್ದು, ಪೆಟ್ರೋಲ್ ಮಾದರಿಯು 157-ಬಿಎಚ್‌ಪಿ, 191-ಎನ್ಎಂ ಟಾರ್ಕ್ ಉತ್ಪಾದಿಸಿದ್ದಲ್ಲಿ ಡೀಸೆಲ್ ಮಾದರಿಯು 113.4-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಅಲ್ಕಾಜರ್ ಕಾರು ಪ್ಲ್ಯಾಟಿನಂ, ಪ್ರೆಸ್ಟೀಜ್, ಸಿಗ್ನೆಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟೀಜ್ ಆಪ್ಷನ್ ಮತ್ತು ಸಿಗ್ನೆಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.30 ಲಕ್ಷದಿಂದ ಟಾಪ್ ಎಂಡ್ ಮಾದರಿಯ ರೂ. 19.99 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Hyundai Alcazar SUV Review Video.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X