ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರಿನ ಮೊದಲ ಇಂಟಿರಿಯರ್ ಚಿತ್ರಗಳು ಬಹಿರಂಗ

ಹ್ಯುಂಡೈ ಇಂಡಿಯಾ ಕಂಪನಿಯು 7 ಸೀಟರ್ ಸೌಲಭ್ಯದ ಹೊಸ ಎಸ್‌ಯುವಿ ಮಾದರಿಯೊಂದನ್ನು ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಅಲ್ಕಾಜರ್ ಹೆಸರಿನೊಂದಿಗೆ ಬಿಡುಗಡೆಯಾಗಲಿರುವ ಹೊಸ ಕಾರು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರಿನ ಮೊದಲ ಇಂಟಿರಿಯರ್ ಚಿತ್ರಗಳು ಬಹಿರಂಗ

ಕ್ರೆಟಾ ಕಾರು ಮಾದರಿಯನ್ನು ಆಧರಿಸಿ ಹೊಸ 7 ಸೀಟರ್ ಅಲ್ಕಾಜರ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಮುಂದಾಗಿರುವ ಹ್ಯುಂಡೈ ಕಂಪನಿಯು ಹೊಸ ಕಾರನ್ನು ಮುಂದಿನ ಕೆಲವೇ ದಿನಗಳಲ್ಲಿ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುತ್ತಿದ್ದು, ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿರುವ ಹೊಸ ಕಾರಿನ ಮೊದಲ ಇಂಟಿರಿಯರ್ ಚಿತ್ರಗಳು ಬಹಿರಂಗವಾಗಿವೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರಿನ ಮೊದಲ ಇಂಟಿರಿಯರ್ ಚಿತ್ರಗಳು ಬಹಿರಂಗ

ಕ್ರೆಟಾ ಕಾರು ಮಾದರಿಯ ಪ್ಲ್ಯಾಟ್‌ಫಾರ್ಮ್ ಆಧರಿಸಿ ಮೂರನೇ ಸಾಲಿನ ಆಸನ ಹೊಂದಿರುವ ಅಲ್ಕಾಜರ್ ಕಾರಿನಲ್ಲಿ 7 ಸೀಟರ್ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜೋಡಣೆ ಮಾಡಿದ್ದು, ಗ್ರಾಹಕರು ಹೊಸ ಕಾರಿನಲ್ಲಿ ತಮ್ಮ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಖರೀದಿಸಬಹುದಾಗಿದೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರಿನ ಮೊದಲ ಇಂಟಿರಿಯರ್ ಚಿತ್ರಗಳು ಬಹಿರಂಗ

ರೋಡ್ ಟೆಸ್ಟಿಂಗ್ ವೇಳೆ ಕಂಡುಬಂದ ಅಲ್ಕಾಜರ್ ಕಾರು ಮಾದರಿಯು 6 ಸೀಟರ್ ಸೌಲಭ್ಯವನ್ನು ಹೊಂದಿದ್ದು, ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರಿನ ಮೊದಲ ಇಂಟಿರಿಯರ್ ಚಿತ್ರಗಳು ಬಹಿರಂಗ

ಹೊಸ ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಯು ಹೊಸ ವೈಶಿಷ್ಟ್ಯತೆಗಳೊಂದಿಗೆ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯಲಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ತಮ್ಮ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯವನ್ನ ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ 6 ಸೀಟರ್ ಮಾದರಿಯು 2+2+2 ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿರಲಿದೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರಿನ ಮೊದಲ ಇಂಟಿರಿಯರ್ ಚಿತ್ರಗಳು ಬಹಿರಂಗ

ಹೊಸ ಕಾರನ್ನು ಈ ವರ್ಷದ ಎರಡನೇ ತ್ರೈಮಾಸಿಕ ಅವಧಿಯ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಟಾಟಾ ನ್ಯೂ ಜನರೇಷನ್ ಸಫಾರಿ, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರಿನ ಮೊದಲ ಇಂಟಿರಿಯರ್ ಚಿತ್ರಗಳು ಬಹಿರಂಗ

ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಬೆಲೆಯಲ್ಲೂ ದುಬಾರಿಯಾಗಿರಲಿದ್ದು, ಸ್ಟ್ಯಾಂಡರ್ಡ್ ಕ್ರೆಟಾ ಕಾರು ಮಾದರಿಗಿಂತ ರೂ. 1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರಿನ ಮೊದಲ ಇಂಟಿರಿಯರ್ ಚಿತ್ರಗಳು ಬಹಿರಂಗ

ಹೊಸ ಕಾರಿಗಾಗಿ ಸದ್ಯ ಕ್ರೆಟಾ ಮಾದರಿಯಲ್ಲಿ ಜೋಡಿಸಲಾಗಿರುವ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ ಅನ್ನೇ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯದ ಹೊರತಾಗಿ ಇನ್ನುಳಿದ ತಾಂತ್ರಿಕ ಅಂಶಗಳನ್ನು ಸಾಮಾನ್ಯ ಕ್ರೆಟಾ ಕಾರಿನಿಂದಲೇ ಎರವಲು ಪಡೆದುಕೊಳ್ಳಲಿದೆ.

MOST READ: ಮುಖೇಶ್ ಅಂಬಾನಿ ಭದ್ರತೆಗಾಗಿಯೇ ಬಂತು ಮೂರು ಕೋಟಿ ಬೆಲೆಯ ಕಾರು

ಹ್ಯುಂಡೈ ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರಿನ ಮೊದಲ ಇಂಟಿರಿಯರ್ ಚಿತ್ರಗಳು ಬಹಿರಂಗ

ಇನ್ನು ಹೆಚ್ಚುವರಿ ಆಸನ ಸೌಲಭ್ಯವನ್ನು ಹೊರತುಪಡಿಸಿ ಇನ್ನುಳಿದ ಬಹುತೇಕ ತಾಂತ್ರಿಕ ಅಂಶಗಳು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಜೋಡಣೆ ಮಾಡಲಾಗುತ್ತಿದ್ದು, ಕ್ರೆಟಾ ಮಾದರಿಯಂತೆ ವೀಲ್ಹ್ ಬೆಸ್‌ನೊಂದಿಗೆ ಮೂರನೇ ಸಾಲಿನ ಪ್ರಯಾಣಿಕರಿಗೆ ಸ್ಥಳಾವಕಾಶ ಒದಗಿಸಲು ಹೆಚ್ಚುವರಿ ಕ್ಯಾಬಿನ್ ಸೌಲಭ್ಯವನ್ನು ನೀಡಬಹುದಾಗಿದೆ.

Article Published On: Thursday, February 25, 2021, 11:26 [IST]
English summary
Hyundai Alcazar Interiors Spied For The First Time Ahead Of Global Unveil. Read in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+