ಬಿಡುಗಡೆಗೂ ಮುನ್ನ ಅಲ್ಕಾಜರ್ ಕಾರಿನ ಹೊಸ ಪ್ರೊಮೊ ಅನಾವರಣಗೊಳಿಸಿದ ಹ್ಯುಂಡೈ
ಹ್ಯುಂಡೈ ಇಂಡಿಯಾ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಕೋವಿಡ್ ಪರಿಣಾಮ ತಾತ್ಕಾಲಿಕವಾಗಿ ಬಿಡುಗಡೆ ಮುಂದೂಡಿರುವ ಕಂಪನಿಯು ಜೂನ್ ಕೊನೆಯಲ್ಲಿ ಬಿಡುಗಡೆ ಮಾಡಲಿದೆ.

ಹೊಸ ಅಲ್ಕಾಜರ್ ಕಾರನ್ನು ಈ ತಿಂಗಳ ಮೊದಲ ವಾರದಲ್ಲೇ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದ ಹ್ಯುಂಡೈ ಕಂಪನಿಯು ಕೋವಿಡ್ ಪರಿಣಾಮ ಬಿಡುಗಡೆ ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಿದ್ದು, ಇದೀಗ ಕೋವಿಡ್ ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ಹೊಸ ಪ್ರೊಮೊ ಬಿಡುಗಡೆಯೊಂದಿಗೆ ಜೂನ್ ಕೊನೆಯಲ್ಲಿ ಅಲ್ಕಾಜರ್ ಮಾರಾಟ ಆರಂಭಿಸುವ ಸಿದ್ದತೆಯಲ್ಲಿದೆ.

ಹೊಸ ಪ್ರೊಮೊ ಮೂಲಕ ತನ್ನ ಎಸ್‌ಯುವಿ ಸರಣಿ ಕಾರುಗಳ ಮೂಲಕ ಹೊಸ ಕಾರಿಗೆ ವಿಭಿನ್ನವಾಗಿ ಸ್ವಾಗತ ಕೋರಲಾಗಿದ್ದು, ಎಸ್‌ಯುವಿ ಸರಣಿಯಲ್ಲಿರುವ ವೆನ್ಯೂ, ಕ್ರೆಟಾ, ಟಕ್ಸನ್ ಮತ್ತು ಕೊನಾ ಇವಿ ಮಾದರಿಗಳಂತೆ ಅಲ್ಕಾಜರ್ ಕೂಡಾ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದೆ.
ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿ ನಿರ್ಮಾಣವಾಗಿರುವ ಹೊಸ ಅಲ್ಕಾಜರ್ ಕಾರು ಮಾದರಿಯು ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಹೊಂದಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಮಾದರಿಯಲ್ಲಿ ಖರೀದಿಗೆ ಲಭ್ಯವಿರಲಿದೆ.

ವಿಸ್ತರಿತ ಕ್ಯಾಬಿನ್ ಮೂಲಕ ಮೂರು ಸಾಲಿನ ಆಸನ ಸೌಲಭ್ಯವನ್ನು ಅಚ್ಚುಕಟ್ಟಾದ ಜೋಡಣೆ ಹೊಂದಿದ್ದು, ಹೊಸ ಕಾರಿನಲ್ಲಿ ಪ್ರತ್ಯೇಕ ಆಸನ ಸೌಲಭ್ಯ ಹೊಂದಿರುವ 6 ಸೀಟರ್ ಮಾದರಿಯೇ ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ.

ಹೈ ಎಂಡ್ ಮಾದರಿಯ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದ್ದು, ಹಿಂಬದಿಯ ಸವಾರರಿಗೂ ಆರಾಮದಾಯಕ ಪ್ರಯಾಣಕ್ಕಾಗಿ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳನ್ನು ನೀಡಲಾಗಿದೆ.
MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಅಲ್ಕಾಜರ್ ಕಾರಿನ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದ್ದು, ವಿವಿಧ ಮಾದರಿಗಳಿಗೆ ಅನುಗುಣವಾಗಿ ಎರಡು ಎಂಜಿನ್ ಆಯ್ಕೆ ನೀಡಲಾಗುತ್ತಿದೆ.

ಹ್ಯುಂಡೈ ಕಂಪನಿಯು ಹೊಸ ಅಲ್ಕಾಜರ್ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಎಂಜಿನ್ ಮತ್ತು ಆರಂಭಿಕ ಮಾದರಿಗಳಲ್ಲಿ 1.5-ಲೀಟರ್ ಎಂಜಿನ್ ಜೋಡಣೆ ಮಾಡಲಾಗಿದ್ದು, 2.0-ಲೀಟರ್ ಎಂಜಿನ್ ಮಾದರಿಯನ್ನು ಟ್ಯುಸಾನ್ ಮತ್ತು ಎಲಾಂಟ್ರಾ ಮಾದರಿಗಳಲ್ಲಿ ಈಗಾಗಲೇ ಬಳಕೆ ಮಾಡಲಾಗುತ್ತಿದೆ.
MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಹೊಸ ಅಲ್ಕಾಜರ್ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಎಂಜಿನ್ ಆಯ್ಕೆಯೊಂದಿಗೆ ಫುಲ್ ಸೈಜ್ ಎಸ್‌ಯುವಿ ಕಾರು ಖರೀದಿದಾರರನ್ನು ಮಾತ್ರವಲ್ಲ ಎಂಪಿವಿ ಖರೀದಿದಾರರನ್ನು ಸಹ ಸೆಳೆಯಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14 ಲಕ್ಷದಿಂದ ರೂ.19 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.


Click it and Unblock the Notifications