Just In
- 7 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 8 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 9 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 10 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಹ್ಯುಂಡೈ ಅಲ್ಕಾಜರ್
ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲಿ ತನ್ನ ಬಹುನೀರಿಕ್ಷಿತ ಅಲ್ಕಾಜರ್ 7 ಸೀಟರ್ ಎಸ್ಯುವಿ ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ.
ಹೊಸ ಅಲ್ಕಾಜರ್ ಕಾರು ಮಾದರಿಯನ್ನು ಇದೇ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡಬೇಕಿದ್ದ ಹ್ಯುಂಡೈ ಕಂಪನಿಯು ಕೋವಿಡ್ 2ನೇ ಪರಿಣಾಮ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಹೊಸ ಕಾರಿನ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದು, ಹೊಸ ಕಾರು ಬಿಡುಗಡೆಯನ್ನು ಮುಂದೂಡಿಕೆ ಮಾಡಿದರೂ ಕಾರಿನ ಕಾರ್ಯಕ್ಷಮತೆ ಕುರಿತಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಮಾತ್ರ ಮುಂದುವರಿಸಿದೆ.
ಹ್ಯುಂಡೈ ಕಂಪನಿಯು ಕ್ರೆಟಾ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಆಧರಿಸಿ ಹೊಸ ಅಲ್ಕಾಜರ್ ಕಾರು ಮಾದರಿಯನ್ನು ಅಭಿವೃದ್ದಿಗೊಳಿಸಿದ್ದು, ಅಲ್ಕಾಜರ್ ಕಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಮಾರಾಟಗೊಳ್ಳಲು ಸಜ್ಜಾಗಿದೆ.
ಹೊಸ ಅಲ್ಕಾಜರ್ ಕಾರು ಮಾದರಿಯು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಖರೀದಿಗೆ ಲಭ್ಯವಾಗಲಿದ್ದು, ವಿಸ್ತರಿತ ಕ್ಯಾಬಿನ್ ಮೂಲಕ ಮೂರು ಸಾಲಿನ ಆಸನಗಳೊಂದಿಗೆ 7 ಸೀಟರ್ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜೋಡಣೆ ಮಾಡಲಾಗಿದೆ.
ಹೈ ಎಂಡ್ ಮಾದರಿಯಾಗಿ 6 ಸೀಟರ್ ಆವೃತ್ತಿಯು ಮಾರಾಟಗೊಳ್ಳಲಿದ್ದು, ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದೆ. ಅಲ್ಕಾಜರ್ ಕಾರಿನ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದ್ದು, ಹಿಂಬದಿಯ ಸವಾರರಿಗೂ ಆರಾಮದಾಯಕ ಪ್ರಯಾಣಕ್ಕಾಗಿ ಹೆಡ್ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳನ್ನು ನೀಡಲಾಗಿದೆ.
ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಇತ್ತೀಚೆಗೆ ಪ್ರಮುಖ ಕಾರು ಕಂಪನಿಗಳು 5 ಸೀಟರ್ ಮಧ್ಯಮ ಕ್ರಮಾಂಕದ ಎಸ್ಯುವಿ ಕಾರುಗಳಲ್ಲಿ 5 ಸೀಟರ್ ಜೊತೆಗೆ 7 ಸೀಟರ್ ಮಾದರಿಯನ್ನು ಪರಿಚಯಿಸುತ್ತಿರುವ ಅಲ್ಕಾಜರ್ ಬಿಡುಗಡೆಗೆ ಪ್ರಮುಖ ಕಾರಣವಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!
ಹ್ಯುಂಡೈ ಕಂಪನಿಯು ಹೊಸ ಅಲ್ಕಾಜರ್ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ನೀಡುತ್ತಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಎಂಜಿನ್ ಮತ್ತು 1.5-ಲೀಟರ್ ಎಂಜಿನ್ ಜೋಡಣೆ ಮಾಡಲಾಗಿದ್ದು, 2.0-ಲೀಟರ್ ಎಂಜಿನ್ ಮಾದರಿಯನ್ನು ಟ್ಯುಸಾನ್ ಮತ್ತು ಎಲಾಂಟ್ರಾ ಮಾದರಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.
1.5-ಲೀಟರ್ ಪೆಟ್ರೋಲ್ ಮಾದರಿಯನ್ನು ಕ್ರೆಟಾ ಮಾದರಿಯಿಂದ ಪಡೆದುಕೊಳ್ಳಲಾಗಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 2.0-ಲೀಟರ್ ಮಾದರಿಯು 159-ಬಿಎಚ್ಪಿ, 192-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಎಂಜಿನ್ ಮಾದರಿಯು 115-ಬಿಎಚ್ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಸದ್ಯ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಂಡಿರುವ ಹೊಸ ಕೋವಿಡ್ ಪರಿಣಾಮ ಉಂಟಾಗಿರುವ ಆರ್ಥಿಕ ಬಿಕ್ಕಟ್ಟು ತುಸು ಸುಧಾರಣೆಗೊಂಡ ನಂತರವಷ್ಟೇ ಖರೀದಿಗೆ ಲಭ್ಯವಾಗಲಿದ್ದು, ಹೊಸ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚುವರಿಯಾಗಿ ರೂ. 1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.