ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಅಲ್ಕಾಜರ್ ಎಸ್‌ಯುವಿ ಕಾರಿನ ಉತ್ಪಾದನಾ ಮಾದರಿಯನ್ನು ಅನಾರವಣಗೊಳಿಸಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಎಂಜಿನ್ ಆಯ್ಕೆ ಮತ್ತು ಫೀಚರ್ಸ್‌ಗಳನ್ನು ಹೊಂದಿರಲಿದೆ.

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿ ಉತ್ಪಾದನೆಗೊಂಡಿರುವ ಹೊಸ ಅಲ್ಕಾಜರ್ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಮಾರಾಟಗೊಳ್ಳಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟಗೊಳ್ಳಲಿದೆ.

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಹೊಸ ಅಲ್ಕಾಜರ್ ಕಾರು ಮಾದರಿಯು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಖರೀದಿಗೆ ಲಭ್ಯವಾಗಲಿದ್ದು, ವಿಸ್ತರಿತ ಕ್ಯಾಬಿನ್‌ ಮೂಲಕ ಮೂರು ಸಾಲಿನ ಆಸನಗಳೊಂದಿಗೆ 7 ಸೀಟರ್ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜೋಡಣೆ ಮಾಡಲಾಗಿದೆ.

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಹೊಸ ಕಾರಿನಲ್ಲಿ ಹೈ ಎಂಡ್ ಮಾದರಿಯಾಗಿ 6 ಸೀಟರ್ ಆವೃತ್ತಿಯು ಮಾರಾಟಗೊಳ್ಳಲಿದ್ದು, ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದೆ.

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಅಲ್ಕಾಜರ್ ಕಾರಿನ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದ್ದು, ಹಿಂಬದಿಯ ಸವಾರರಿಗೂ ಆರಾಮದಾಯಕ ಪ್ರಯಾಣಕ್ಕಾಗಿ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳನ್ನು ನೀಡಲಾಗಿದೆ.

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಇತ್ತೀಚೆಗೆ ಪ್ರಮುಖ ಕಾರು ಕಂಪನಿಗಳು 5 ಸೀಟರ್ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲಿ 5 ಸೀಟರ್ ಜೊತೆಗೆ 7 ಸೀಟರ್ ಮಾದರಿಯನ್ನು ಪರಿಚಯಿಸುತ್ತಿರುವ ಅಲ್ಕಾಜರ್ ಬಿಡುಗಡೆಗೆ ಪ್ರಮುಖ ಕಾರಣವಾಗಿದೆ.

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಅಲ್ಕಾಜರ್ 7 ಸೀಟರ್ ಆವೃತ್ತಿಗಾಗಿ ಹ್ಯುಂಡೈ ಕಂಪನಿಯು ಬೆಸ್ಟ್ ಇನ್ ಸೆಗ್ಮೆಂಟ್ ವೀಲ್ಹ್‌ಬೆಸ್ ಜೋಡಣೆ ಮಾಡಿದ್ದು, 2,760 ಎಂಎಂ ವೀಲ್ಹ್‌ಬೆಸ್ ಹೊಂದಿರುವ ಅಲ್ಕಾಜರ್ ಕಾರು ಕ್ರೆಟಾ ಕಾರಿಗಿಂತಲೂ 150 ಎಂಎಂ ಹೆಚ್ಚುವರಿ ವೀಲ್ಹ್‌ಬೆಸ್ ಪಡೆದುಕೊಂಡಿದೆ.

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಈ ಮೂಲಕ ಎರಡನೇ ಮತ್ತು ಮೂರನೇ ಸಾಲಿನ ಪ್ರಯಾಣಿಕರಿಗೂ ಉತ್ತಮ ಸ್ಥಳಾವಕಾಶ ಒದಗಿಸಲಾಗಿದ್ದು, ಡೈಮಂಡ್ ಕಟ್ ಗ್ರಿಲ್, ಸ್ಪೋರ್ಟಿ ಬಂಪರ್, ಹೊಸ ವಿನ್ಯಾಸದ ಅಲಾಯ್ ವೀಲ್ಹ್, ಫ್ಲಕ್ಸ್ ಡ್ಯುಯಲ್ ಎಕ್ಸಾಸ್ಟ್, ಸ್ಕೀಡ್ ಪ್ಲೇಟ್ ಹೊಂದಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಹಾಗೆಯೇ ಹೊಸ ಕಾರಿನಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಕಾರ್ ಕನೆಕ್ಟ್ ಟೆಕ್ನಾಲಜಿ ಬಳಕೆ ಮಾಡಲಾಗಿದ್ದು, 10.25 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಪನೊರಮಿಕ್ ಸನ್‌ರೂಫ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ವೈರ್‌ಲೆಸ್ ಚಾರ್ಜರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೇರಿದಂತೆ ಹಲವಾರು ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ.

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಎಂಜಿನ್ ಮತ್ತು ಪರ್ಫಾಮೆನ್ಸ್

ಹ್ಯುಂಡೈ ಕಂಪನಿಯು ಹೊಸ ಅಲ್ಕಾಜರ್ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ನೀಡುತ್ತಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಎಂಜಿನ್ ಮತ್ತು 1.5-ಲೀಟರ್ ಎಂಜಿನ್ ಜೋಡಣೆ ಮಾಡಲಾಗಿದ್ದು, 2.0-ಲೀಟರ್ ಎಂಜಿನ್ ಮಾದರಿಯನ್ನು ಟ್ಯುಸಾನ್ ಮತ್ತು ಎಲಾಂಟ್ರಾ ಮಾದರಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

1.5-ಲೀಟರ್ ಪೆಟ್ರೋಲ್ ಮಾದರಿಯನ್ನು ಕ್ರೆಟಾ ಮಾದರಿಯಿಂದ ಪಡೆದುಕೊಳ್ಳಲಾಗಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 2.0-ಲೀಟರ್ ಮಾದರಿಯು 159-ಬಿಎಚ್‌ಪಿ, 192-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಎಂಜಿನ್ ಮಾದರಿಯು 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಸದ್ಯ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಂಡಿರುವ ಹೊಸ ಕಾರು ಮುಂಬರುವ ಕೆಲವೇ ವಾರಗಳಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದ್ದು, ಹೊಸ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚುವರಿಯಾಗಿ ರೂ. 1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.

ಅಲ್ಕಾಜರ್ 7 ಸೀಟರ್ ಎಸ್‌ಯುವಿ ಕಾರು ಅನಾವರಣಗೊಳಿಸಿದ ಹ್ಯುಂಡೈ

ಈ ಮೂಲಕ ಹ್ಯುಂಡೈ ಕಂಪನಿಯು ಪ್ರತಿಸ್ಪರ್ಧಿ ಮಾದರಿಗಳಾದ ಮಹೀಂದ್ರಾ ಎಕ್ಸ್‌ಯುವಿ500, ಟಾಟಾ ಸಫಾರಿ ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಎಸ್‌ಯುವಿ ಕಾರುಗಳು ಮಾತ್ರವಲ್ಲದೆ ಎಂಪಿವಿ ಮಾದರಿಯಲ್ಲಿ ಸದ್ಯ ಜನಪ್ರಿಯವಾಗಿರುವ ಇನೋವಾ ಕ್ರಿಸ್ಟಾ ಆವೃತ್ತಿಗೂ ಹೊಸ ಕಾರು ಪೈಪೋಟಿ ನೀಡಲಿದೆ.

More from DriveSpark

Article Published On: Thursday, April 8, 2021, 13:57 [IST]
English summary
Hyundai Alcazar SUV Unveiled Ahead Of India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+