ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಬಹುನೀರಿಕ್ಷಿತ ಹ್ಯುಂಡೈ ಅಲ್ಕಾಜರ್ ಕಾರು ಮಾದರಿಯು ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು ಇದೇ ತಿಂಗಳು ಜೂನ್ 18ರಂದು ಅಧಿಕೃತವಾಗಿ ಬಿಡುಗಡೆಗೊಳ್ಳುವ ಮಾಹಿತಿ ಲಭ್ಯವಾಗಲಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಅಲ್ಕಾಜರ್ ಕಾರು ಮಾದರಿಯನ್ನು ಖರೀದಿಸಲು ರೂ.25 ಸಾವಿರ ಮುಂಗಡದೊಂದಿಗೆ ಹ್ಯುಂಡೈ ಕಂಪನಿಯು ಈಗಾಗಲೇ ಅಧಿಕೃತ ಬುಕ್ಕಿಂಗ್ ಸಹ ಆರಂಭಿಸಿದ್ದು, 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರುವ ಅಲ್ಕಾಜರ್ ಎಸ್‌ಯುವಿ ಮಾದರಿಯು ಟಾಟಾ ಸಫಾರಿ ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿ ನಿರ್ಮಾಣವಾಗಿರುವ ಹೊಸ ಅಲ್ಕಾಜರ್ ಕಾರು ಮಾದರಿಯು ವಿವಿಧ ಆರು ವೆರಿಯೆಂಟ್‌ಗಳೊಂದಿಗೆ ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಹೊಂದಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಎಸ್‌ಯುವಿ ಸರಣಿಯಲ್ಲಿರುವ ತನ್ನ ವೆನ್ಯೂ, ಕ್ರೆಟಾ, ಟಕ್ಸನ್ ಮತ್ತು ಕೊನಾ ಇವಿ ಮಾದರಿಗಳಂತೆ ಅಲ್ಕಾಜರ್ ಮಾದರಿಯ ಮಾರಾಟದಲ್ಲೂ ಕೂಡಾ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿರುವ ಹ್ಯುಂಡೈ ಕಂಪನಿಯು ಹೊಸ ಕಾರನ್ನು ವಿವಿಧ ಆರು ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡುತ್ತಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರು ಪ್ಲ್ಯಾಟಿನಂ, ಪ್ರೆಸ್ಟಿಜ್, ಸಿಗ್ನಿಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟಿಜ್ ಆಪ್ಷನ್ ಮತ್ತು ಸಿಗ್ನಿಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್‌ಗಳೊಂದಿಗೆ ಟೈಪೂನ್ ಸಿಲ್ವರ್, ಟೈಟಾನ್ ಗ್ರೇ, ಟೈಗಾ ಬ್ರೌನ್, ಸ್ಟೇರಿ ನೈಟ್, ಪೊಲಾರ್ ವೈಟ್ ಮತ್ತು ಪ್ಯಾಂಥಮ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿವೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಇನ್ನು ವಿಸ್ತರಿತ ಕ್ಯಾಬಿನ್‌ ಮೂಲಕ ಮೂರು ಸಾಲಿನ ಆಸನ ಸೌಲಭ್ಯವನ್ನು ಅಚ್ಚುಕಟ್ಟಾದ ಜೋಡಣೆ ಹೊಂದಿದ್ದು, ಹೊಸ ಕಾರಿನಲ್ಲಿ ಪ್ರತ್ಯೇಕ ಆಸನ ಸೌಲಭ್ಯ ಹೊಂದಿರುವ 6 ಸೀಟರ್ ಮಾದರಿಯೇ ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹೈ ಎಂಡ್ ಮಾದರಿಯ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದ್ದು, ಹಿಂಬದಿಯ ಸವಾರರಿಗೂ ಆರಾಮದಾಯಕ ಪ್ರಯಾಣಕ್ಕಾಗಿ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳನ್ನು ನೀಡಲಾಗಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಅಲ್ಕಾಜರ್ ಕಾರಿನ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದ್ದು, ವಿವಿಧ ಮಾದರಿಗಳಿಗೆ ಅನುಗುಣವಾಗಿ ಎರಡು ಎಂಜಿನ್ ಆಯ್ಕೆ ನೀಡಲಾಗುತ್ತಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹ್ಯುಂಡೈ ಕಂಪನಿಯು ಹೊಸ ಅಲ್ಕಾಜರ್ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಎಂಜಿನ್ ಮತ್ತು ಆರಂಭಿಕ ಮಾದರಿಗಳಲ್ಲಿ 1.5-ಲೀಟರ್ ಎಂಜಿನ್ ಜೋಡಣೆ ಮಾಡಲಾಗಿದ್ದು, 2.0-ಲೀಟರ್ ಎಂಜಿನ್ ಮಾದರಿಯನ್ನು ಟ್ಯುಸಾನ್ ಮತ್ತು ಎಲಾಂಟ್ರಾ ಮಾದರಿಗಳಲ್ಲಿ ಈಗಾಗಲೇ ಬಳಕೆ ಮಾಡಲಾಗುತ್ತಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಅಲ್ಕಾಜರ್ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಎಂಜಿನ್ ಆಯ್ಕೆಯೊಂದಿಗೆ ಫುಲ್ ಸೈಜ್ ಎಸ್‌ಯುವಿ ಕಾರು ಖರೀದಿದಾರರನ್ನು ಮಾತ್ರವಲ್ಲ ಎಂಪಿವಿ ಖರೀದಿದಾರರನ್ನು ಸಹ ಸೆಳೆಯಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14 ಲಕ್ಷದಿಂದ ರೂ.19 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.

More from DriveSpark

Article Published On: Thursday, June 10, 2021, 8:45 [IST]
English summary
Hyundai Alcazar Will Launch 18th June, Find Here All New Details. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+