ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ಕರೋನಾ ಆರ್ಥಿಕ ಸಂಕಷ್ಟದಲ್ಲೂ ಕಾರು ಮಾರಾಟ ಸುಧಾರಿಸಲು ಹಲವಾರು ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದಲ್ಲದೆ ನೀರಿಕ್ಷಿತ ಮಟ್ಟದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಸಾಮಾನ್ಯ ಕಾರುಗಳಿಗೆ ಮಾತ್ರವಲ್ಲದೆ ಎಲೆಕ್ಟ್ರಿಕ್ ಕಾರು ಮಾದರಿಯ ಮಾರಾಟ ಸುಧಾರಣೆಗೂ ಕೆಲವು ಪ್ರಮುಖ ಯೋಜನೆಗಳನ್ನು ರೂಪಿಸಿದೆ.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹೌದು, ಹ್ಯುಂಡೈ ಕಂಪನಿಯು ವಿವಿಧ ಮಾದರಿಯ ಸಾಮಾನ್ಯ ಕಾರುಗಳ ಜೊತೆಗೆ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯನ್ನು ಸಹ ಮಾರಾಟ ಮಾಡುತ್ತಿದ್ದು, ಬಿಡುಗಡೆಯ ಆರಂಭದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದ ಕೊನಾ ಇವಿ ಕಾರು ಇತ್ತೀಚೆಗೆ ಕರೋನಾ ವೈರಸ್‌ನಿಂದಾದ ಆರ್ಥಿಕ ಸಂಕಷ್ಟದಿಂದ ತುಸು ಹಿನ್ನಡೆ ಅನುಭವಿಸಿತ್ತು. ಹೀಗಾಗಿ ಹೊಸ ಎಲೆಕ್ಟ್ರಿಕ್ ಕಾರಿನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವು ಆಫರ್‌ಗಳನ್ನು ಘೋಷಣೆ ಮಾಡಲಾಗಿದ್ದು, ಸೀಮಿತ ಅವಧಿಯೊಳಗೆ ಹೊಸ ಕಾರು ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿ ವಾರಂಟಿ ಆಫರ್ ಜೊತೆಗೆ ರೂ.1.50 ಲಕ್ಷ ಡಿಸ್ಕೌಂಟ್ ನೀಡುತ್ತಿದೆ.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹ್ಯುಂಡೈ ಕೊನಾ ಇವಿ ಕಾರಿನ ಬ್ಯಾಟರಿ ಮೇಲೆ ಸದ್ಯ ಮೂರು ವರ್ಷ ಅಥವಾ ಅನ್‌ಲಿಮಿಟೆಡ್ ಕಿ.ಮೀ, ನಾಲ್ಕು ವರ್ಷ ಅಥವಾ 60 ಸಾವಿರ ಕಿ.ಮೀ, ಐದು ವರ್ಷ ಅಥವಾ 50 ಸಾವಿರ ಕಿ.ಮೀ ವಾರಂಟಿ ಆಫರ್ ಅನ್ನು ಸಾಮಾನ್ಯವಾಗಿ ನೀಡಲಾಗುತ್ತಿದ್ದು, ಹೊಸ ಆಫರ್‌ನಲ್ಲಿ ಎಂಟು ವರ್ಷ ಅಥವಾ 1.60 ಲಕ್ಷ ಕಿ.ಮೀ ಮೇಲೆ ಆಫರ್ ಪಡೆದುಕೊಳ್ಳಬಹುದಾಗಿದೆ.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ವಾರಂಟಿ ಆಫರ್ ಬೇಡವಾದಲ್ಲಿ 1.50 ಲಕ್ಷ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಇದೊಂದು ಅತ್ಯುತ್ತಮ ಅವಕಾಶ ಎನ್ನಬಹುದು.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಇನ್ನು ಕೊನಾ ಎಲೆಕ್ಟ್ರಿಕ್ ಕಾರು ಅತಿ ಕಡಿಮೆ ನಿರ್ವಹಣಾ ವೆಚ್ಚದಿಂದಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿದ್ದು, ಸಾಮಾನ್ಯ ಕಾರುಗಳಿಂತಲೂ ಶೇ.80ರಷ್ಟು ಕಡಿಮೆ ರನ್ನಿಂಗ್ ಕಾಸ್ಟ್ ಹೊಂದಿರುವ ಕೊನಾ ಕಾರು ಪ್ರತಿ ಕಿ.ಮೀ ಗೆ ರೂ.1 ಕ್ಕಿಂತಲೂ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎರಡು ಮಾದರಿಯ ಬ್ಯಾಟರಿ ಆಯ್ಕೆಯನ್ನು ಹೊಂದಿರುವ ಕೊನಾ ಎಲೆಕ್ಟ್ರಿಕ್ ಕಾರು 64kWh ಮತ್ತು 39.2kWh ಬ್ಯಾಟರಿ ವೈಶಿಷ್ಟ್ಯತೆಗಳನ್ನು ಹೊಂದಿದ್ದು, ಭಾರತದಲ್ಲಿ ಸದ್ಯಕ್ಕೆ 39.2kWh ಬ್ಯಾಟರಿ ಹೊಂದಿರುವ ಮಾದರಿಯನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದೆ.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಕೇವಲ 52 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್‌ ಮಾಡಬಲ್ಲ ಡಿಸಿ ಫಾಸ್ಟ್ ಚಾರ್ಜರ್ ಸೌಲಭ್ಯವು ಈ ಕಾರಿನಲ್ಲಿದ್ದು, 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಪರ್ಫಾಮೆನ್ಸ್ ಕಾರುಗಳಂತೆಯೇ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಕೊನಾ ಇವಿ ಕಾರು 155 ಕಿ.ಮಿ ಟಾಪ್ ಸ್ಪೀಡ್ ಸೌಲಭ್ಯವನ್ನು ಹೊಂದಿದ್ದು, ಪೂರ್ಣ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜ್‌ ಆಗಲು ಕನಿಷ್ಠ 8 ಗಂಟೆ ತೆಗೆದುಕೊಳ್ಳಲಿದೆ. ಹೀಗಾಗಿ ಕೋನಾ ಕಾರಿನಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಆಕರ್ಷಕವಾಗಿದೆ.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಕೊನಾ ಇವಿ ಕಾರಿನ ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಹೊಸ ಕಾರು ತುಸು ದುಬಾರಿ ಎನ್ನಿಸಲಿದ್ದು, ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 23.90 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, ಹೊಸ ಕಾರಿನ ಮೇಲೆ ರೂ.1.50 ಲಕ್ಷ ತನಕ ತೆರಿಗೆ ವಿನಾಯ್ತಿ ಸಹ ಸಿಗಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಕೊನಾ ಎಲೆಕ್ಟ್ರಿಕ್ ಕಾರು ಮಾದರಿಯು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಇದೀಗ 2021ರ ಆವೃತ್ತಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಪರಿಚಯಿಸಲಾಗಿದೆ. ಹೊಸ ಕಾರಿನಲ್ಲಿ ಹೊಸ ವಿನ್ಯಾದ ಎಲ್ಇಡಿ ಡಿಆರ್‌ಎಲ್‌ಗಳು, ಟು ವರ್ಟಿಕಲ್ ಸ್ಲಾಟ್ ಹೊಂದಿರುವ ಬಂಪರ್, ಸಿಲ್ವರ್ ಆಕ್ಸೆಂಟ್ ಸೇರಿದಂತೆ ಪ್ರಮುಖ ಬದಲಾವಣೆಗಳೊಂದಿಗೆ ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಜೊತೆಗೆ ಹೊಸ ಕಾರಿನ ಹಿಂಭಾಗದ ವಿನ್ಯಾಸದಲ್ಲೂ ಪ್ರಮುಖ ಬದಲಾವಣೆಗಳಾಗಿದ್ದು, ಸ್ಪಿಟ್ ಟೈಲ್ ಲ್ಯಾಂಪ್ ಪ್ರತ್ಯೇಕಗೊಂಡಿರುವ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಸಿಗ್ನಲ್, ಆಕ್ಸಿಲರಿ ಟೈಲ್‌ಲ್ಯಾಂಪ್ ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕೊನಾ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹೊಸ ಕಾರಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಪ್ರಮುಖ ಸೇಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದ್ದು, ಹೊಸ ಕಾರಿನಲ್ಲಿ 6 ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ ಸೇರಿದಂತೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳಾದ ರಿಯರ್ ಟ್ರಾಫಿಕ್ ಕೂಲಿಷನ್ ಅವಾಯ್ಡೆನ್ಸ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಕೂಲಿಷನ್ ಅವಾಯ್ಡೆನ್ಸ್ ಅಸಿಸ್ಟ್‌ನಂತಹ ಸೌಲಭ್ಯ ಹೊಂದಿದೆ.

Most Read Articles

Kannada
English summary
Hyundai Announces Rs. 1.5 Lakh Discount For Kona Electric. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X