ಹ್ಯುಂಡೈ ವಿವಿಧ ಕಾರುಗಳ ಬೆಲೆಯಲ್ಲಿ ಗರಿಷ್ಠ ರೂ. 34 ಸಾವಿರ ತನಕ ಹೆಚ್ಚಳ

ಉತ್ಪಾದನಾ ವೆಚ್ಚಗಳ ನಿರ್ವಹಣೆಗಾಗಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ತಮ್ಮ ವಿವಿಧ ವಾಹನ ಮಾದರಿಗಳ ಬೆಲೆಯನ್ನು ಹೆಚ್ಚಿಸುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಈ ವರ್ಷ ಎರಡನೇ ಬಾರಿಗೆ ಹೆಚ್ಚಳ ಮಾಡಿದೆ.

ಹ್ಯುಂಡೈ ವಿವಿಧ ಕಾರುಗಳ ಬೆಲೆಯಲ್ಲಿ ಗರಿಷ್ಠ ರೂ. 34 ಸಾವಿರ ತನಕ ಹೆಚ್ಚಳ

ಹೊಸ ವಾಹನಗಳ ಬಿಡಿಭಾಗಗಳ ಬೆಲೆಯಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕಾಗಿ ನಿರ್ಧರಿಸಿದ್ದು, ಹ್ಯುಂಡೈ ಮೋಟಾರ್ಸ್ ಕೂಡಾ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಶೇ. 1 ರಿಂದ ಶೇ. 1.50 ರಷ್ಟು ಬೆಲೆ ಹೆಚ್ಚಿಸಿದೆ. ಹೊಸ ದರ ಪಟ್ಟಿ ಪ್ರಕಟದ ನಂತರ ವಿವಿಧ ಕಾರುಗಳ ಬೆಲೆಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕನಿಷ್ಠ ರೂ. 1,200ರಿಂದ ಗರಿಷ್ಠ ರೂ. 34 ಸಾವಿರ ತನಕ ಬೆಲೆ ಹೆಚ್ಚಳ ಮಾಡಲಾಗಿದೆ.

ಹ್ಯುಂಡೈ ವಿವಿಧ ಕಾರುಗಳ ಬೆಲೆಯಲ್ಲಿ ಗರಿಷ್ಠ ರೂ. 34 ಸಾವಿರ ತನಕ ಹೆಚ್ಚಳ

ಪರಿಸ್ಕೃತ ದರ ಪಟ್ಟಿಯಲ್ಲಿ ಕಂಪನಿಯ ಎಂಟ್ರಿ ಲೆವಲ್ ಕಾರು ಮಾದರಿಯಾದ ಸ್ಯಾಂಟ್ರೋ ಕಾರು ರೂ. 1 ಸಾವಿರದಿಂದ ರೂ. 6,200 ಬೆಲೆ ಹೆಚ್ಚಳ ಪಡೆದುಕೊಂಡರೆ, ಟಾಪ್ ಎಂಡ್ ಕಾರು ಮಾದರಿಯಾದ ಟ್ಯುಸಾನ್ ಎಸ್‌ಯುವಿ ಕಾರು ಮಾದರಿಯು ರೂ. 2 ಸಾವಿರದಿಂದ ರೂ. 34 ಸಾವಿರ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಹ್ಯುಂಡೈ ವಿವಿಧ ಕಾರುಗಳ ಬೆಲೆಯಲ್ಲಿ ಗರಿಷ್ಠ ರೂ. 34 ಸಾವಿರ ತನಕ ಹೆಚ್ಚಳ

ಹ್ಯುಂಡೈ ನಿರ್ಮಾಣದ ಕ್ರೆಟಾ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯು ಕೂಡಾ ಬೆಲೆ ಹೆಚ್ಚಳದೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ರೂ. 9.99 ಲಕ್ಷದಿಂದ ಟಾಪ್ ಎಂಡ್ ಕಾರಿನ ಬೆಲೆಯು ರೂ.17.62 ಲಕ್ಷಕ್ಕೆ ಏರಿಕೆಯಾಗಿದೆ.

ಹ್ಯುಂಡೈ ವಿವಿಧ ಕಾರುಗಳ ಬೆಲೆಯಲ್ಲಿ ಗರಿಷ್ಠ ರೂ. 34 ಸಾವಿರ ತನಕ ಹೆಚ್ಚಳ

ಹ್ಯುಂಡೈ ಮೋಟಾರ್ಸ್ ಕಂಪನಿಯು ಹೊಸ ದರಗಳನ್ನು ಇಂದಿನಿಂದಲೇ ಅನ್ವಯವಾಗುವಂತೆ ಅಧಿಕೃತವಾಗಿ ಜಾರಿಗೊಳಿಸಿದ್ದು, ಇತ್ತೀಚೆಗೆ ಬಿಡುಗಡೆಗೊಳಿಸಲಾದ ನ್ಯೂ ಜನರೇಷನ್ ಐ20 ಮಾದರಿಯ ಬೆಲೆಯಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ. ಇನ್ನು ದರಪಟ್ಟಿಯಲ್ಲಿ ಗ್ರಾಂಡ್ ಐ10 ನಿಯೊಸ್, ಔರಾ, ವೆನ್ಯೂ, ವೆರ್ನಾ, ಟ್ಯುಸಾನ್ ಕಾರುಗಳು ಸಹ ಬೆಲೆ ಏರಿಕೆ ಪಡೆದುಕೊಂಡಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ಬೆಲೆ ಹೆಚ್ಚಳವಾಗಿದೆ.

ಹ್ಯುಂಡೈ ವಿವಿಧ ಕಾರುಗಳ ಬೆಲೆಯಲ್ಲಿ ಗರಿಷ್ಠ ರೂ. 34 ಸಾವಿರ ತನಕ ಹೆಚ್ಚಳ

ಕೋವಿಡ್ ಸಂಕಷ್ಟದಿಂದಾಗಿ ಹೊಸ ವಾಹನಗಳ ಉತ್ಪಾದನಾ ವೆಚ್ಚ ನಿರ್ವಹಣೆಗಾಗಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ತಮ್ಮ ವಿವಿಧ ವಾಹನ ಮಾದರಿಗಳ ಬೆಲೆಯನ್ನು ಹೆಚ್ಚಿಸುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ 2021ರಲ್ಲೇ ಎರಡನೇ ಅವಧಿಗೆ ಬೆಲೆ ಹೆಚ್ಚಿಸಿದೆ.

ಹ್ಯುಂಡೈ ವಿವಿಧ ಕಾರುಗಳ ಬೆಲೆಯಲ್ಲಿ ಗರಿಷ್ಠ ರೂ. 34 ಸಾವಿರ ತನಕ ಹೆಚ್ಚಳ

ಈ ಹಿಂದೆ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಬಿಡಿಭಾಗಗಳ ವೆಚ್ಚವು ನಿರಂತರವಾಗಿ ಹೆಚ್ಚುತ್ತಿರುವ ಪರಿಣಾಮ ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿವೆ.

ಹ್ಯುಂಡೈ ವಿವಿಧ ಕಾರುಗಳ ಬೆಲೆಯಲ್ಲಿ ಗರಿಷ್ಠ ರೂ. 34 ಸಾವಿರ ತನಕ ಹೆಚ್ಚಳ

ಆಟೋ ಕಂಪನಿಗಳು ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಶೇ. 1.50ರಿಂದ ಶೇ.3 ರಷ್ಟು ಬೆಲೆ ಹೆಚ್ಚಳವಾಗುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ. 50 ಸಾವಿರದಿಂದ ರೂ.1 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ಹ್ಯುಂಡೈ ವಿವಿಧ ಕಾರುಗಳ ಬೆಲೆಯಲ್ಲಿ ಗರಿಷ್ಠ ರೂ. 34 ಸಾವಿರ ತನಕ ಹೆಚ್ಚಳ

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 1 ಲಕ್ಷದಿಂದ ರೂ. 1.50 ಲಕ್ಷದಷ್ಟು ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗಿರುವ ಪರಿಣಾಮ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.

Article Published On: Wednesday, April 28, 2021, 14:40 [IST]
English summary
Hyundai Cars Got A Price Hike Upto Rs 34,000 From April 2021.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+