ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ ಇಂಡಿಯಾ

ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (ಹೆಚ್‌ಎಂಐಎಲ್) ಕಂಪನಿಯು ಭಾರತದಲ್ಲಿ ಭಾರತದಲ್ಲಿ 1 ಕೋಟಿ ಕಾರು ಉತ್ಪಾದಿಸಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಇಂದು ಹ್ಯುಂಡೈ ಕಂಪನಿಯು ತಮಿಳುನಾಡಿನ ಶ್ರೀಪೆರುಂಬುದೂರ್‌ನಲ್ಲಿರುವ ಉತ್ಪಾದನಾ ಕೇಂದ್ರದಲ್ಲಿ ಕಾರು ಉತ್ಪಾದನೆಯ ಹೊಸ ಮೈಲಿಗಲ್ಲು ಸಾಧಿಸಿರುವುದಾಗಿ ಘೋಷಿಸಿದೆ.

ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ ಇಂಡಿಯಾ

ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಸಮ್ಮುಖದಲ್ಲಿ ಹ್ಯುಂಡೈ ಕಂಪನಿಯು ಭಾರತದಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವುದನ್ನು ಹ್ಯುಂಡೈ ಇಂಡಿಯಾ ಕಂಪನಿಯು ಘೋಷಣೆ ಮಾಡಿದ್ದರು.. ಈ ವೇಳೆ 1 ಕೋಟಿ ಕಾರು ಮೈಲಿಗಲ್ಲಿನ ಯುನಿಟ್ ಆಗಿ ಇತ್ತೀಚೆಗೆ ಬಿಡುಗಡೆಯಾದ ಹ್ಯುಂಡೈ ಅಲ್ಕಾಜರ್ ಅನ್ನು ಹೊರತಂದರು. ಪ್ರಸ್ತುತ ಹ್ಯುಂಡೈ ದೇಶದ ಎರಡನೇ ಅತಿದೊಡ್ಡ ಕಾರು ತಯಾರಕ ಸಂಸ್ಥೆಯಾಗಿದೆ.

ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ ಇಂಡಿಯಾ

ಭಾರತದಲ್ಲಿ ಹ್ಯುಂಡೈ ಕಂಪನಿಯು 1996ರ ಮೇ ತಿಂಗಳಿನಲ್ಲಿ ತಮ್ಮ ಪಯಣವನ್ನು ಪ್ರಾರಂಭಿಸಿದ್ದರು. ಭಾರತದಲ್ಲಿ ದಕ್ಷಿಣ ಕೊರಿಯಾದ ಆಟೋ ದೆತ್ಯ ಹ್ಯುಂಡೈ ಕಂಪನಿಯು ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸಿಕೊಂಡಿತು.

ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ ಇಂಡಿಯಾ

1998ರಲ್ಲಿ ಪರಿಚಯಿಸಲಾದ ಮೊದಲ ತಲೆಮಾರಿನ ಸ್ಯಾಂಟ್ರೊ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸಿತು. ಸ್ಯಾಂಟ್ರೊ ಕಾರಿನ ಮೂಲಕ ಹ್ಯುಂಡೈ ಕಂಪನಿಯು ಹೆಚ್ಚಿನ ಗ್ರಾಹಕರನ್ನು ಸೆಳೆದುಕೊಂಡರು. ಕಳೆದ 25 ವರ್ಷಗಳಲ್ಲಿ ಹ್ಯುಂಡೈ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ ಇಂಡಿಯಾ

ಹ್ಯುಂಡೈ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಸ್ಯಾಂಟ್ರೋ, ಗ್ರ್ಯಾಂಡ್ ಐ10 ನಿಯೋಸ್, ಐ20, ಔರಾ, ವೆನ್ಯೂ, ಎಲಾಂಟ್ರ, ವೆರ್ನಾ ಮತ್ತು ಟ್ಯೂಸನ್ ಅನ್ನು ಮಾರಾಟ ಮಾಡುತ್ತದೆ. ಮೊದಲ ಬಾರಿಗೆ 2015 ರಲ್ಲಿ ಪ್ರಾರಂಭವಾದ ಕ್ರೆಟಾ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸಿತು.

ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ ಇಂಡಿಯಾ

ಭಾರತೀಯ ಮಾರುಕಟ್ಟೆಯ ಎಸ್‍ಯುವಿ ವಿಭಾಗದಲ್ಲಿ ಹ್ಯುಂಡೈ ಕ್ರೆಟಾ ಮತ್ತು ವೆನ್ಯೂ ತಮ್ಮ ಪ್ರತಿಸ್ಪರ್ಥಿಗಳಾಗಿ ಪ್ರಬಲ ಪೈಪೋಟಿಯನ್ನು ನೀಡುತ್ತಿದೆ. ಈ ಎಸ್‍ಯುವಿಗಳು ಆಕರ್ಷಕ ವಿನ್ಯಾಸ, ಅತ್ಯಾಧುನಿಕ ಫೀಚರ್ಸ್ ಮತ್ತು ತಂತ್ರಜ್ಙಾನಗಳಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತದೆ.

ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ ಇಂಡಿಯಾ

ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಎಸ್‍ಯುವಿ ಪೋರ್ಟ್ಫೋಲಿಯೊವನ್ನು ಮತ್ತಷ್ಟು ಬಲಪಡಿಸಲು ಮೂರು-ಸಾಲಿನ ಅಲ್ಕಾಜರ್ ಮಾದರಿಯನ್ನು ಬಿಡುಗಡೆಗೊಳಿಸಿತು, ಈ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ,16.30 ಲಕ್ಷದಿಂದ ರೂ.19.99 ಲಕ್ಷಗಳಾಗಿದೆ.

ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ ಇಂಡಿಯಾ

ಹೊಸ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯು ಸ್ಪ್ಲಿಟ್-ಶೈಲಿಯ ಎಲ್ಇಡಿ ಹೆಡ್‌ಲ್ಯಾಂಪ್‌, 3ಡಿ ಹನಿಕೊಂಬ್ ಗ್ರಿಲ್, ಹೊಸ ವಿನ್ಯಾಸದ ಬಂಪರ್ ವಿನ್ಯಾಸ, ಎಲ್ಇಡಿ ಟೈಲ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್, ವಿವಿಧ ಮಾದರಿಗಳಿಗೆ ಅನುಗುಣವಾಗಿ 17 ಮತ್ತು 18-ಇಂಚಿನ ಅಲಾಯ್ ವೀಲ್ಹ್, ರೂಫ್ ರೈಲ್ಸ್, ಫ್ಲಕ್ಸ್ ಸ್ಕಫ್ ಪ್ಲೇಟ್, ಶಾರ್ಕ್ ಫಿನ್ ಅಂಟೆನಾ, ಬಾಡಿ ಕ್ಲ್ಯಾಡಿಂಗ್ ಹೊಂದಿದೆ.

ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ ಇಂಡಿಯಾ

ಇನ್ನು ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ 10.25 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 10.25 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಬ್ಲ್ಯೂ ಲಿಂಕ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಕಮಾಂಡರ್, ಮೂರು ಸಾಲಿಗೂ ಎಸಿ ವೆಂಟ್ಸ್, ಬ್ಲೈಂಡ್ ವಿಂಡೋ ಮಾನಿಟರ್ ಮತ್ತು ಆ್ಯಂಬಿಯೆಂಟ್ ಲೈಟಿಂಗ್ಸ್ ಅನ್ನು ಹೊಂದಿದೆ.

ಕಾರು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹ್ಯುಂಡೈ ಇಂಡಿಯಾ

ಇದರೊಂದಿಗೆ ಸೀಟ್ ಬ್ಲ್ಯಾಟ್ ಟೇಬಲ್, ಆಟೋ ಏರ್ ಪ್ಯೂರಿಫೈರ್, ರಿಮೋಟ್ ಎಂಜಿನ್ ಸ್ಟಾರ್ಟ್, ಕ್ಲೈಮೆಟ್ ಕಂಟ್ರೋಲ್, ಪನೊರಮಿಕ್ ಸನ್‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಪೀಚರ್ಸ್ ಗಳನ್ನು ಹೊಂದಿವೆ. ಇನ್ನು ಈ ಹೊಸ ಎಸ್‍ಯುವಿಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಗಳನ್ನು ನೀಡಲಾಗಿದೆ.

Image Courtesy: Bijoy Ghosh/Twitter

Most Read Articles

Kannada
English summary
10 Millionth Car To Be Rolled Out By Hyundai India. Read In Kananda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X