Just In
- 5 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 6 hrs ago
2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್‌ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 6 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 6 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯ ಸನಿಹದಲ್ಲಿ ಹ್ಯುಂಡೈ ಕ್ರೆಟಾ 7 ಸೀಟರ್ ಎಸ್‌ಯುವಿ
ಸಬ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಸದ್ಯ ಮುಂಚೂಣಿಯಲ್ಲಿರುವ ಹ್ಯುಂಡೈ ಕಂಪನಿಯು ಕ್ರೆಟಾ ಕಾರು ಮಾದರಿಯಲ್ಲಿ ಶೀಘ್ರದಲ್ಲೇ ಮತ್ತೊಂದು ಹೊಸ ಆವೃತ್ತಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಆವೃತ್ತಿಯು 7 ಸೀಟರ್ ಮಾದರಿಯೊಂದಿಗೆ ಭಾರತದಲ್ಲಿ ಬಿಡುಗಡೆಯಾಗಲಿದೆ.

7 ಸೀಟರ್ ಸೌಲಭ್ಯವನ್ನು ಹೊಂದಿರುವ ಕ್ರೆಟಾ ಎಸ್‌ಯುವಿ ಕಾರು ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಿರುವ ಹ್ಯುಂಡೈ ಕಂಪನಿಯು ಹೊಸ ಕಾರಿನ ಅಧಿಕೃತ ಹೆಸರನ್ನು ಕೂಡಾ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿದ್ದು, ಹೊಸ ಕಾರು ಆವೃತ್ತಿಯು ದೇಶಿಯ ಮಾರುಕಟ್ಟೆಯಲ್ಲಿ ಕ್ರೆಟಾಗೆ ಬದಲು ಅಲ್ಕಾಜರ್ ಎನ್ನುವ ಹೆಸರಿನೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದೆ.

5 ಸೀಟರ್ ಮಾದರಿಯು ಕ್ರೆಟಾ ಹೆಸರಿನಲ್ಲಿ ಮತ್ತು 7 ಸೀಟರ್ ಮಾದರಿಯನ್ನು ಅಲ್ಕಾಜಲ್ ಹೆಸರಿನೊಂದಿಗೆ ಮಾರಾಟ ಮಾಡಲಿರುವ ಹ್ಯುಂಡೈ ಕಂಪನಿಯು ಕಾರಿನ ಕಾರ್ಯಕ್ಷಮತೆ ಕುರಿತಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಮಾಹಿತಿಗಳ ಪ್ರಕಾರ, ಹೊಸ ಕಾರು ಈ ವರ್ಷದ ಎರಡನೇ ತ್ರೈಮಾಸಿಕ ವೇಳೆಗೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಟಾಟಾ ಹ್ಯಾರಿಯರ್ ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಅಲ್ಕಾಜರ್ ಕಾರು ಸಾಮಾನ್ಯ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಬೆಲೆಯಲ್ಲೂ ದುಬಾರಿಯಾಗಿರಲಿದ್ದು, 5 ಸೀಟರ್ ಮಾದರಿಗಿಂತ ರೂ. 1.50 ಲಕ್ಷದಿಂದ ರೂ. 2 ಲಕ್ಷ ದುಬಾರಿ ಬೆಲೆ ಪಡೆದುಕೊಳ್ಳಲಿದೆ. ಹೊಸ ಕಾರಿನಲ್ಲಿ ಸದ್ಯ ಮಾರುಕಟ್ಟೆಯಲ್ಲಿರುವ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯದ ಹೊರತಾಗಿ ಇನ್ನುಳಿದ ತಾಂತ್ರಿಕ ಅಂಶಗಳು ಕ್ರೆಟಾ ಕಾರಿನಲ್ಲಿರುವಂತೆ ಪಡೆದುಕೊಳ್ಳಲಿದೆ.

ಇನ್ನು ಹ್ಯುಂಡೈ ಕಾರುಗಳ ಮಾರಾಟ ಪೈಕಿ ನ್ಯೂ ಜನರೇಷನ್ ಕ್ರೆಟಾ ಖರೀದಿಗೆ ಹೆಚ್ಚು ಬೇಡಿಕೆಯಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.82 ಲಕ್ಷ ಬೆಲೆ ಪಡೆದುಕೊಂಡಿದೆ. ಟಾಪ್ ಎಂಡ್ ಮಾದರಿಯು ರೂ. 17.33 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದೀಗ ಬಿಡುಗಡೆಗೆ ಸಿದ್ದವಾಗಿರುವ 7 ಸೀಟರ್ ಸೌಲಭ್ಯ ಕ್ರೆಟಾ ಕಾರು ಮಾದರಿಯು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯವನ್ನು ಹೊರತುಪಡಿಸಿ ಇನ್ನುಳಿದ ಬಹುತೇಕ ತಾಂತ್ರಿಕ ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಜೋಡಣೆ ಮಾಡಲಿದೆ.