ಬಿಡುಗಡೆಯ ಸನೀಹದಲ್ಲಿ ಹ್ಯುಂಡೈ ಕ್ರೆಟಾ 7 ಸೀಟರ್ ಎಸ್‌ಯುವಿ

ಮಧ್ಯಮ ಗಾತ್ರದ 5 ಸೀಟರ್ ಎಸ್‌ಯುವಿ ಆವೃತ್ತಿಗಳಲ್ಲೇ ಇದೀಗ 7 ಸೀಟರ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮಧ್ಯಮ ಗಾತ್ರದ ಕಾರುಗಳು ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಆವೃತ್ತಿಗಳನ್ನು ಒಳಗೊಂಡಿವೆ.

ಬಿಡುಗಡೆಯ ಸನೀಹದಲ್ಲಿ ಹ್ಯುಂಡೈ ಕ್ರೆಟಾ 7 ಸೀಟರ್ ಎಸ್‌ಯುವಿ

ಹ್ಯುಂಡೈ ಕಂಪನಿಯು ಸಹ 7 ಸೀಟರ್ ಸೌಲಭ್ಯವನ್ನು ಹೊಂದಿರುವ ಕ್ರೆಟಾ ಎಸ್‌ಯುವಿ ಕಾರು ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು ಕೂಡಾ ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿದೆ. ಹೊಸ 7 ಸೀಟರ್ ಕಾರು ಆವೃತ್ತಿಯು ದೇಶಿಯ ಮಾರುಕಟ್ಟೆಯಲ್ಲಿ ಕ್ರೆಟಾಗೆ ಬದಲು ಅಲ್ಕಾಜರ್ ಎನ್ನುವ ಹೆಸರಿನೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದ್ದು, ಎಸ್‌ಯುವಿ ವೈಶಿಷ್ಟ್ಯತೆ ಹೊಂದಿದ್ದರೂ ಕೂಡಾ ಎಂಪಿವಿ ಕಾರು ಖರೀದಿದಾರರನ್ನು ಸೆಳೆಯಲಿದೆ.

ಬಿಡುಗಡೆಯ ಸನೀಹದಲ್ಲಿ ಹ್ಯುಂಡೈ ಕ್ರೆಟಾ 7 ಸೀಟರ್ ಎಸ್‌ಯುವಿ

5 ಸೀಟರ್ ಮಾದರಿಯು ಕ್ರೆಟಾ ಹೆಸರಿನಲ್ಲಿ ಮತ್ತು 7 ಸೀಟರ್ ಮಾದರಿಯನ್ನು ಅಲ್ಕಾಜಲ್ ಹೆಸರಿನೊಂದಿಗೆ ಮಾರಾಟ ಮಾಡಲಿರುವ ಹ್ಯುಂಡೈ ಕಂಪನಿಯು ಕಾರಿನ ಕಾರ್ಯಕ್ಷಮತೆ ಕುರಿತಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಬಿಡುಗಡೆಯ ಸನೀಹದಲ್ಲಿ ಹ್ಯುಂಡೈ ಕ್ರೆಟಾ 7 ಸೀಟರ್ ಎಸ್‌ಯುವಿ

ಹೊಸ ಕಾರನ್ನು ಈ ವರ್ಷದ ಎರಡನೇ ತ್ರೈಮಾಸಿಕ ಅವಧಿಯ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಟಾಟಾ ನ್ಯೂ ಜನರೇಷನ್ ಸಫಾರಿ, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಬಿಡುಗಡೆಯ ಸನೀಹದಲ್ಲಿ ಹ್ಯುಂಡೈ ಕ್ರೆಟಾ 7 ಸೀಟರ್ ಎಸ್‌ಯುವಿ

ಅಲ್ಕಾಜರ್ ಕಾರು ಸಾಮಾನ್ಯ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಬೆಲೆಯಲ್ಲೂ ದುಬಾರಿಯಾಗಿರಲಿದ್ದು, 5 ಸೀಟರ್ ಮಾದರಿಗಿಂತಲೂ ಹೆಚ್ಚುವರಿಯಾಗಿ ರೂ. 1.50 ಲಕ್ಷದಿಂದ ರೂ. 2 ಲಕ್ಷ ದುಬಾರಿ ಬೆಲೆ ಪಡೆದುಕೊಳ್ಳಬಹುದಾಗಿದೆ. ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯವನ್ನು ಸೇರಿಸಬಹುದಾಗಿದ್ದು, 6 ಸೀಟರ್ ಮಾದರಿಯು 2+2+2 ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿರಲಿದೆ.

ಬಿಡುಗಡೆಯ ಸನೀಹದಲ್ಲಿ ಹ್ಯುಂಡೈ ಕ್ರೆಟಾ 7 ಸೀಟರ್ ಎಸ್‌ಯುವಿ

ಇನ್ನು ಹೊಸ ಕಾರಿನಲ್ಲಿ ಸದ್ಯ ಮಾರುಕಟ್ಟೆಯಲ್ಲಿರುವ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯದ ಹೊರತಾಗಿ ಇನ್ನುಳಿದ ತಾಂತ್ರಿಕ ಅಂಶಗಳು ಸಾಮಾನ್ಯ ಕ್ರೆಟಾ ಕಾರಿನಲ್ಲಿರುವಂತೆ ಪಡೆದುಕೊಳ್ಳಲಿದೆ.

ಬಿಡುಗಡೆಯ ಸನೀಹದಲ್ಲಿ ಹ್ಯುಂಡೈ ಕ್ರೆಟಾ 7 ಸೀಟರ್ ಎಸ್‌ಯುವಿ

ಸದ್ಯ ಹ್ಯುಂಡೈ ನ್ಯೂ ಜನರೇಷನ್ ಕ್ರೆಟಾ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 17.53 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದ್ದು, 7 ಸೀಟರ್ ಮಾದರಿಯು ಇನ್ನಷ್ಟು ದುಬಾರಿಯಾಗಿಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಡುಗಡೆಯ ಸನೀಹದಲ್ಲಿ ಹ್ಯುಂಡೈ ಕ್ರೆಟಾ 7 ಸೀಟರ್ ಎಸ್‌ಯುವಿ

ಹೊಸ ಕ್ರೆಟಾ ಕಾರು ಸದ್ಯ 5 ಸೀಟರ್ ಸೌಲಭ್ಯದೊಂದಿಗೆ ಗ್ರಾಹಕರ ಬೇಡಿಕೆಯೆಂತೆ ಐದು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

ಬಿಡುಗಡೆಯ ಸನೀಹದಲ್ಲಿ ಹ್ಯುಂಡೈ ಕ್ರೆಟಾ 7 ಸೀಟರ್ ಎಸ್‌ಯುವಿ

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಬಿಡುಗಡೆಯ ಸನೀಹದಲ್ಲಿ ಹ್ಯುಂಡೈ ಕ್ರೆಟಾ 7 ಸೀಟರ್ ಎಸ್‌ಯುವಿ

ಇದೀಗ ಬಿಡುಗಡೆಗೆ ಸಿದ್ದವಾಗಿರುವ 7 ಸೀಟರ್ ಸೌಲಭ್ಯ ಕ್ರೆಟಾ ಕಾರು ಮಾದರಿಯು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯವನ್ನು ಹೊರತುಪಡಿಸಿ ಇನ್ನುಳಿದ ಬಹುತೇಕ ತಾಂತ್ರಿಕ ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಜೋಡಣೆ ಮಾಡಲಿದೆ.

Image Courtesy: We Guide Auto/Instagram

Most Read Articles

Kannada
English summary
Hyundai Creta 7 seater spied testing. Read in kannada.
Story first published: Monday, February 22, 2021, 20:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X