Just In
- 2 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 3 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 4 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 4 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Movies Swathi Royal; ಒಂಬತ್ತನೇ ಕ್ಲಾಸ್ ನಲ್ಲೇ ಲವ್ವಲ್ಲಿ ಬಿದ್ದ ಅಮೃತಧಾರೆ ಅಪರ್ಣಾ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹ್ಯುಂಡೈ ಹೊಸ ಕ್ರೆಟಾ 7 ಸೀಟರ್ ಎಸ್ಯುವಿ ಕಾರಿನ ಬಿಡುಗಡೆ ಮಾಹಿತಿ ಬಹಿರಂಗ
ಮಧ್ಯಮ ಗಾತ್ರ ಎಸ್ಯುವಿ ಕಾರುಗಳ ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಹೊಸ ಕ್ರೆಟಾ 7 ಸೀಟರ್ ಮಾದರಿಯನ್ನು ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರು ಮುಂಬರುವ ಎಪ್ರಿಲ್ ಹೊತ್ತಿಗೆ ಖರೀದಿಗೆ ಲಭ್ಯವಾಗುವ ಸುಳಿವು ನೀಡಿದೆ.
ಹ್ಯುಂಡೈ ಕಂಪನಿಯು 7 ಸೀಟರ್ ಸೌಲಭ್ಯವನ್ನು ಹೊಂದಿರುವ ಕ್ರೆಟಾ ಎಸ್ಯುವಿ ಕಾರು ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಿದ್ದು, ಹೊಸ ಕಾರಿನ ಅಧಿಕೃತ ಹೆಸರನ್ನು ಕೂಡಾ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿದೆ. ಹೊಸ 7 ಸೀಟರ್ ಕಾರು ಆವೃತ್ತಿಯು ದೇಶಿಯ ಮಾರುಕಟ್ಟೆಯಲ್ಲಿ ಕ್ರೆಟಾಗೆ ಬದಲು ಅಲ್ಕಾಜರ್ ಎನ್ನುವ ಹೆಸರಿನೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದ್ದು, ಎಸ್ಯುವಿ ವೈಶಿಷ್ಟ್ಯತೆ ಹೊಂದಿದ್ದರೂ ಕೂಡಾ ಎಂಪಿವಿ ಕಾರು ಖರೀದಿದಾರರನ್ನು ಸೆಳೆಯಲಿದೆ.
5 ಸೀಟರ್ ಮಾದರಿಯು ಕ್ರೆಟಾ ಹೆಸರಿನಲ್ಲಿ ಮತ್ತು 7 ಸೀಟರ್ ಮಾದರಿಯನ್ನು ಅಲ್ಕಾಜಲ್ ಹೆಸರಿನೊಂದಿಗೆ ಮಾರಾಟ ಮಾಡಲಿರುವ ಹ್ಯುಂಡೈ ಕಂಪನಿಯು ಕಾರಿನ ಕಾರ್ಯಕ್ಷಮತೆ ಕುರಿತಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.
ಹೊಸ ಕಾರನ್ನು ಈ ವರ್ಷದ ಎರಡನೇ ತ್ರೈಮಾಸಿಕ ಅವಧಿಯ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಟಾಟಾ ನ್ಯೂ ಜನರೇಷನ್ ಸಫಾರಿ, ಮಹೀಂದ್ರಾ ಎಕ್ಸ್ಯುವಿ500 ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.
ಅಲ್ಕಾಜರ್ ಕಾರು ಸಾಮಾನ್ಯ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಬೆಲೆಯಲ್ಲೂ ದುಬಾರಿಯಾಗಿರಲಿದ್ದು, 5 ಸೀಟರ್ ಮಾದರಿಗಿಂತಲೂ ಹೆಚ್ಚುವರಿಯಾಗಿ ರೂ. 1.50 ಲಕ್ಷದಿಂದ ರೂ. 2 ಲಕ್ಷ ದುಬಾರಿ ಬೆಲೆ ಪಡೆದುಕೊಳ್ಳಬಹುದಾಗಿದೆ. ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯವನ್ನು ಸೇರಿಸಬಹುದಾಗಿದ್ದು, 6 ಸೀಟರ್ ಮಾದರಿಯು 2+2+2 ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿರಲಿದೆ.
ಇನ್ನು ಹೊಸ ಕಾರಿನಲ್ಲಿ ಸದ್ಯ ಮಾರುಕಟ್ಟೆಯಲ್ಲಿರುವ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯದ ಹೊರತಾಗಿ ಇನ್ನುಳಿದ ತಾಂತ್ರಿಕ ಅಂಶಗಳು ಸಾಮಾನ್ಯ ಕ್ರೆಟಾ ಕಾರಿನಲ್ಲಿರುವಂತೆ ಪಡೆದುಕೊಳ್ಳಲಿದೆ.
ಸದ್ಯ ಹ್ಯುಂಡೈ ನ್ಯೂ ಜನರೇಷನ್ ಕ್ರೆಟಾ ಕಾರು ದೆಹಲಿ ಎಕ್ಸ್ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 17.53 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದ್ದು, 7 ಸೀಟರ್ ಮಾದರಿಯು ಇನ್ನಷ್ಟು ದುಬಾರಿಯಾಗಿಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಹೊಸ ಕ್ರೆಟಾ ಕಾರು ಸದ್ಯ 5 ಸೀಟರ್ ಸೌಲಭ್ಯದೊಂದಿಗೆ ಗ್ರಾಹಕರ ಬೇಡಿಕೆಯೆಂತೆ ಐದು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.
ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್
ಇದೀಗ ಬಿಡುಗಡೆಗೆ ಸಿದ್ದವಾಗಿರುವ 7 ಸೀಟರ್ ಸೌಲಭ್ಯ ಕ್ರೆಟಾ ಕಾರು ಮಾದರಿಯು ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೆಚ್ಚುವರಿ ಆಸನ ಸೌಲಭ್ಯವನ್ನು ಹೊರತುಪಡಿಸಿ ಇನ್ನುಳಿದ ಬಹುತೇಕ ತಾಂತ್ರಿಕ ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಜೋಡಣೆ ಮಾಡಲಿದೆ.