Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 5 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕ್ರೆಟಾ ಕಾರಿನ ಆರಂಭಿಕ ಡೀಸೆಲ್ ಆವೃತ್ತಿಯ ಮಾರಾಟವನ್ನು ಸ್ಥಗಿತಗೊಳಿಸಿದ ಹ್ಯುಂಡೈ
ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಹ್ಯುಂಡೈ ಕ್ರೆಟಾ ಕಾರು ಮಾದರಿಯು ನ್ಯೂ ಜನರೇಷನ್ ಮಾದರಿಯೊಂದಿಗೆ ಇದುವರೆಗೆ 1.20 ಲಕ್ಷ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ವಿತರಣೆಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 6ರಿಂದ 10 ತಿಂಗಳಿಗೆ ಏರಿಕೆಯಾಗಿದೆ.

ಇ, ಇಎಕ್ಸ್, ಎಸ್, ಎಸ್‌ಎಕ್ಸ್ ಮತ್ತು ಎಸ್‌ಎಕ್ಸ್ (ಒ) ವೆರಿಯೆಂಟ್‌ಗಳಲ್ಲಿ ಮಾರಾಟವಾಗುತ್ತಿದ್ದ ಕ್ರೆಟಾ ಕಾರು ಮಾದರಿಯಲ್ಲಿ ಹ್ಯುಂಡೈ ಕಂಪನಿಯು ತಾತ್ಕಾಲಿಕವಾಗಿ ಇ ಡೀಸೆಲ್ ಮ್ಯಾನುವಲ್ ಆವೃತ್ತಿಯ ಮಾರಾಟವನ್ನು ಸ್ಥಗಿತಗೊಳಿಸಿದ್ದು, ಹೈ ಎಂಡ್ ಮಾದರಿಗಳ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ. ಇ ಡೀಸೆಲ್ ಆವೃತ್ತಿ ಇತರೆ ಮಾದರಿಗಳಿಂತಲೂ ಹೆಚ್ಚಿನ ಬೇಡಿಕೆ ಹೊಂದಿರುವುದರಿಂದ ವಿತರಣೆ ಅವಧಿಯಲ್ಲಿ ಹೆಚ್ಚಳವಾಗುತ್ತಿದ್ದು, ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಗ್ರಾಹಕರನ್ನು ಹೈ ಎಂಡ್ ಮಾದರಿಗಳತ್ತ ಸೆಳೆಯಲು ಮುಂದಾಗಿರುವ ಕಂಪನಿಯು ಇ ಡೀಸೆಲ್ ಮಾದರಿಯ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ತೆಗೆದುಹಾಕಲಾಗಿದೆ.

ಆರಂಭಿಕ ಕಾರು ಮಾದರಿಗಳಿಂತ ಹೈ ಎಂಡ್ ಆವೃತ್ತಿಗಳ ಮಾರಾಟವು ಕಾರು ಕಂಪನಿಗಳಿಗೆ ಹೆಚ್ಚಿನ ಲಾಭಾಂಶ ತಂದುಕೊಡಲಿದ್ದು, ಹ್ಯುಂಡೈ ಕಂಪನಿಯು ಇದೇ ಉದ್ದೇಶದಿಂದ ಬೆಸ್ ಮಾದರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಹೈ ಎಂಡ್ ಮಾದರಿಗಳ ಗ್ರಾಹಕರನ್ನು ಸೆಳೆಯುವ ಯೋಜನೆಯಲ್ಲಿದೆ.

ಕ್ರೆಟಾ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.99 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.17.53 ಲಕ್ಷ ಬೆಲೆ ಹೊಂದಿದ್ದು,ಸ್ಥಗಿತಗೊಳಿಸಲಾಗಿರುವ ಇ ಡೀಸೆಲ್ ಮ್ಯಾನುವಲ್ ಆವೃತ್ತಿಯು ರೂ.10.31 ಲಕ್ಷ ಬೆಲೆ ಹೊಂದಿದೆ.

ಇ ಡೀಸೆಲ್ ಮ್ಯಾನುವಲ್ ಸ್ಥಗಿತದ ನಂತರ ಕ್ರೆಟಾ ಕಾರಿನ ಡೀಸೆಲ್ ಕಾರಿನ ಆರಂಭಿಕ ಬೆಲೆಯು ರೂ.11.77 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.48 ಲಕ್ಷ ಬೆಲೆ ಹೊಂದಿದ್ದು, ಇ ಡೀಸೆಲ್ ಮ್ಯಾನುವಲ್ ಆವೃತ್ತಿಯು ತಾತ್ಕಾಲಿಕವಾಗಿ ಸ್ಥಗಿತವಾಗಿದ್ದರೂ ಸಹ ಸದ್ಯ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಹೊಸ ಕಾರು ವಿತರಣೆಯಾಗಲಿದೆ. ಇನ್ನು ನ್ಯೂ ಜನರೇಷನ್ ಕ್ರೆಟಾ ಕಾರು ಹೊಸ ಎಮಿಷನ್ ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮಾರಾಟವನ್ನು ಹೊಂದಿದೆ.

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ಬಿಎಸ್-6 ಜಾರಿ ನಂತರ ತೆಗೆದುಹಾಕಲಾಗಿದ್ದು, ಹೊಸ ಎಮಿಷನ್ ಜಾರಿ ನಂತರ ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ.

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡು ಯಶಸ್ವಿ ಐದು ವರ್ಷಗಳನ್ನು ಪೂರೈಸಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಮಾರಾಟದಲ್ಲಿ ಇಂದಿಗೂ ಕೂಡಾ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ಆಕರ್ಷಕ ಬೆಲೆ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ವಿನೂತನ ವಿನ್ಯಾಸದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಹೊಂದಿರುವ ಕ್ರೆಟಾ ಕಾರು ಕಾಲ ಕಾಲಕ್ಕೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳುತ್ತಾ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಕ್ರೆಟಾ ಕಾರು ಭಾರತದಲ್ಲಿ ಇದುವರೆಗೆ ಬರೋಬ್ಬರಿ 5 ಲಕ್ಷ ಯುನಿಟ್ ಮಾರಾಟಗೊಳ್ಳುವ ಮೂಲಕ ಹ್ಯುಂಡೈ ಕಂಪನಿಗೆ ಭಾರೀ ಪ್ರಮಾಣದ ಆದಾಯ ತಂದುಕೊಟ್ಟಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.