ಆರಂಭಿಕ ಕ್ರೆಟಾ ಡೀಸೆಲ್ ವೆರಿಯೆಂಟ್ ಸ್ಥಗಿತಗೊಳಿಸಿ ಮತ್ತೆ ಮಾರಾಟ ಪುನಾರಂಭಿಸಿದ ಹ್ಯುಂಡೈ
ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಆರಂಭಿಕ ಡೀಸೆಲ್ ಮಾದರಿಯಾದ ಇ ಮ್ಯಾನುವಲ್ ಆವೃತ್ತಿಯನ್ನು ಕಳೆದ ವಾರವಷ್ಟೇ ಮಾರಾಟ ಪಟ್ಟಿಯಿಂದ ಸ್ಥಗಿತಗೊಳಿಸಿದ್ದ ಹ್ಯುಂಡೈ ಕಂಪನಿಯು ಇದೀಗ ಮತ್ತೆ ಪುನಾರಂಭಿಸಿದ್ದು, ಹೊಸ ವೆರಿಯೆಂಟ್ ಖರೀದಿಗೆ ಕನಿಷ್ಠ 10 ತಿಂಗಳಿನಿಂದ 1 ವರ್ಷ ಕಾಯುವಿಕೆ ಅವಧಿಯನ್ನು ನಿಗದಿಪಡಿಸಿದೆ.

ಇ, ಇಎಕ್ಸ್, ಎಸ್, ಎಸ್‌ಎಕ್ಸ್ ಮತ್ತು ಎಸ್‌ಎಕ್ಸ್ (ಒ) ವೆರಿಯೆಂಟ್‌ಗಳಲ್ಲಿ ಮಾರಾಟವಾಗುತ್ತಿದ್ದ ಕ್ರೆಟಾ ಕಾರು ಮಾದರಿಯಲ್ಲಿ ಹ್ಯುಂಡೈ ಕಂಪನಿಯು ತಾತ್ಕಾಲಿಕವಾಗಿ ಇ ಡೀಸೆಲ್ ಮ್ಯಾನುವಲ್ ಆವೃತ್ತಿಯ ಮಾರಾಟವನ್ನು ಸ್ಥಗಿತಗೊಳಿಸಿ ಹೈ ಎಂಡ್ ಮಾದರಿಗಳ ಮೇಲೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿತ್ತು. ಆದರೆ ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಇ ಡೀಸೆಲ್ ಆವೃತ್ತಿಯ ಮಾರಾಟವನ್ನು ಮುಂದುವರಿಸಲು ನಿರ್ಧರಿಸಲಾಗಿದ್ದು, ಗ್ರಾಹಕರ ಕಾಯುವಿಕೆ ಅವಧಿಯಲ್ಲಿ ಹೆಚ್ಚಳವಾಗಿದೆ.

ಆರಂಭಿಕ ಕಾರು ಮಾದರಿಗಳಿಂತಲೂ ಹೈ ಎಂಡ್ ಆವೃತ್ತಿಗಳ ಮಾರಾಟವು ಕಾರು ಕಂಪನಿಗಳಿಗೆ ಹೆಚ್ಚಿನ ಲಾಭಾಂಶ ತಂದುಕೊಡಲಿದ್ದು, ಹ್ಯುಂಡೈ ಕಂಪನಿಯು ಇದೇ ಉದ್ದೇಶದಿಂದ ಬೆಸ್ ಮಾದರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಆದರೆ ಗ್ರಾಹಕರ ಬೇಡಿಕೆಯೆಂತೆ ಆರಂಭಿಕ ಮಾದರಿಯ ಮಾರಾಟವನ್ನು ಮುಂದುವರಿಸಲಾಗಿದ್ದು, ಬುಕ್ಕಿಂಗ್ ನಂತರ ಕನಿಷ್ಠ 8 ರಿಂದ 1 ವರ್ಷದ ತನಕ ಕಾಯಬೇಕಿದೆ.

ಕ್ರೆಟಾ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.99 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.17.53 ಲಕ್ಷ ಬೆಲೆ ಹೊಂದಿದ್ದು, ಆರಂಭಿಕ ಇ ಡೀಸೆಲ್ ಮ್ಯಾನುವಲ್ ಆವೃತ್ತಿಯು ರೂ.10.31 ಲಕ್ಷ ಬೆಲೆ ಹೊಂದಿದೆ.

ಇನ್ನು ನ್ಯೂ ಜನರೇಷನ್ ಕ್ರೆಟಾ ಕಾರು ಹೊಸ ಎಮಿಷನ್ ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮಾರಾಟವನ್ನು ಹೊಂದಿದೆ. ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ಬಿಎಸ್-6 ಜಾರಿ ನಂತರ ತೆಗೆದುಹಾಕಲಾಗಿದೆ.

ಹೊಸ ಎಮಿಷನ್ ಜಾರಿ ನಂತರ ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ.

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡು ಯಶಸ್ವಿ ಐದು ವರ್ಷಗಳನ್ನು ಪೂರೈಸಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಮಾರಾಟದಲ್ಲಿ ಇಂದಿಗೂ ಕೂಡಾ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ಆಕರ್ಷಕ ಬೆಲೆ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ವಿನೂತನ ವಿನ್ಯಾಸದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಹೊಂದಿರುವ ಕ್ರೆಟಾ ಕಾರು ಕಾಲ ಕಾಲಕ್ಕೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳುತ್ತಾ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.
MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಕ್ರೆಟಾ ಕಾರು ಭಾರತದಲ್ಲಿ ಇದುವರೆಗೆ ಬರೋಬ್ಬರಿ 5 ಲಕ್ಷ ಯುನಿಟ್ ಮಾರಾಟಗೊಳ್ಳುವ ಮೂಲಕ ಹ್ಯುಂಡೈ ಕಂಪನಿಗೆ ಭಾರೀ ಪ್ರಮಾಣದ ಆದಾಯ ತಂದುಕೊಟ್ಟಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.


Click it and Unblock the Notifications








