Just In
Don't Miss!
- News
ರಾಜ್ಯ ಬಜೆಟ್ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದೇನು?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Finance
30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಕ್ಯಾಪ್ಜೆಮಿನಿ
- Movies
ರಾಬರ್ಟ್ ಸಂಭ್ರಮ: ವಿನಯದಿಂದ ತೆಲುಗು ಅಭಿಮಾನಿಗಳ ಮನಸು ಕದ್ದ ದರ್ಶನ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2020ರ ಡಿಸೆಂಬರ್ ಅವಧಿಯಲ್ಲಿ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡ ನ್ಯೂ ಜನರೇಷನ್ ಕ್ರೆಟಾ
ಹ್ಯುಂಡೈ ನಿರ್ಮಾಣದ ಕ್ರೆಟಾ ಎಸ್ಯುವಿಯು ಕಾರು ಮಾದರಿಯು ಮಧ್ಯಮ ಕ್ರಮಾಂಕದ ಎಸ್ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದಕೊಂಡಿದ್ದು, ನ್ಯೂ ಜನರೇಷನ್ ಬಿಡುಗಡೆಯ ನಂತರ ಕಾರು ಮಾರಾಟವು ಮತ್ತಷ್ಟು ಹೆಚ್ಚಳವಾಗಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಸದ್ಯ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ ಎಸ್ಯುವಿಯು ಭರ್ಜರಿ ಬೇಡಿಕೆಯನ್ನು ಪಡೆದುಕೊಳ್ಳುತ್ತಿದ್ದು, ನ್ಯೂ ಜನರೇಷನ್ ಕ್ರೆಟಾ ಎಸ್ಯುವಿ ಕಾರು ಮಾರಾಟವು ಕಳೆದ ಐದು ವರ್ಷಗಳಲ್ಲೇ ಅತಿ ಹೆಚ್ಚು ದಾಖಲಾಗಿದೆ. ಕಳೆದ ತಿಂಗಳು ಡಿಸೆಂಬರ್ ಅವಧಿಯಲ್ಲೂ ಕೂಡಾ ಶೇ.58 ರಷ್ಟು ಬೆಳವಣಿಗೆ ಸಾಧಿಸಿರುವ ಕ್ರೆಟಾ ಕಾರು ಮಾದರಿಯು 10,592 ಯುನಿಟ್ ಮಾರಾಟದೊಂದಿಗೆ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಸತತ ನಂ.1 ಸ್ಥಾನವನ್ನು ಕಾಯ್ದುಕೊಂಡಿದೆ.

ನ್ಯೂ ಜನರೇಷನ್ ಮಾದರಿಯ ಬಿಡುಗಡೆಯ ನಂತರವೇ ಕ್ರೆಟಾ ಕಾರು ಮಾದರಿಯು ಇದುವರೆಗೆ 1.20 ಲಕ್ಷಕ್ಕೂ ಅಧಿಕ ಯುನಿಟ್ ಮಾರಾಟಗೊಂಡಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಾರುಗಳ ಮಾರಾಟ ಪೈಕಿ ನ್ಯೂ ಜನರೇಷನ್ ಕ್ರೆಟಾ ಖರೀದಿಗೆ ಹೆಚ್ಚು ಬೇಡಿಕೆಯಿದ್ದು, ಹೊಸ ಕಾರು ದೆಹಲಿ ಎಕ್ಸ್ಶೋರೂಂ ಆರಂಭಿಕವಾಗಿ ರೂ. 9.82 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.17.33 ಲಕ್ಷ ಬೆಲೆ ಪಡೆದುಕೊಂಡಿದೆ.

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ. ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಇದಲ್ಲದೆ ಹ್ಯುಂಡೈ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಕ್ರೆಟಾ ಕಾರಿನಲ್ಲಿ ಹೊಸದಾಗಿ 7 ಸೀಟರ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಸಾಮಾನ್ಯ ಕಾರಿನ ಪ್ಲ್ಯಾಟ್ಫಾರ್ಮ್ ಅಡಿಯಲ್ಲೇ ಮೂರು ಸಾಲಿನ ಆಸನ ಸೌಲಭ್ಯವನ್ನು ಪಡೆದುಕೊಳ್ಳಲಿದೆ.

2+3+2 ಆಸನ ಸೌಲಭ್ಯ ಪಡೆದುಕೊಳ್ಳಲಿರುವ 7 ಸೀಟರ್ ಕ್ರೆಟಾ ಮಾದರಿಯು ಸಾಮಾನ್ಯ ಕಾರಿನಲ್ಲಿರುವಂತೆಯೇ ಎಂಜಿನ್ ಆಯ್ಕೆ ಹೊಂದಿಲಿದ್ದು, ಹೊಸ ಕಾರು ತುಸು ದುಬಾರಿ ಬೆಲೆ ಹೊಂದಿರಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಮುಂಬರುವ ಅಕ್ಟೋಬರ್ ಅಥವಾ ನವೆಂಬರ್ ಹೊತ್ತಿಗೆ ಎಳು ಆಸನ ಹೊಂದಿರುವ ಹೊಸ ಕ್ರೆಟಾ ಕಾರು ಬಿಡುಗಡೆಯಾಗಲಿದ್ದು, ದುಬಾರಿ ಬೆಲೆಯ ಎಂಪಿವಿ ಕಾರುಗಳಿಗೆ ಹೊಸ ಕಾರು ಪೈಪೋಟಿ ನೀಡು ನೀರಿಕ್ಷೆಯಲ್ಲಿದೆ.