ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ

ಹ್ಯುಂಡೈ ನಿರ್ಮಾಣದ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡು ಯಶಸ್ವಿ ಐದು ವರ್ಷಗಳನ್ನು ಪೂರೈಸಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಮಾರಾಟದಲ್ಲಿ ಇಂದಿಗೂ ಕೂಡಾ ಅಗ್ರಸ್ಥಾನದಲ್ಲಿದೆ.

ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ

ಕೈಗೆಟುಕುವ ಬೆಲೆ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿರುವ ಕ್ರೆಟಾ ಕಾರು ಕಾಲ ಕಾಲಕ್ಕೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳುತ್ತಾ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, 5 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 5 ಲಕ್ಷ ಯುನಿಟ್ ಮಾರಾಟಗೊಳ್ಳುವ ಮೂಲಕ ಹ್ಯುಂಡೈ ಕಂಪನಿಗೆ ಭಾರೀ ಪ್ರಮಾಣದ ಆದಾಯ ತಂದುಕೊಟ್ಟಿದೆ.

ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ

ಸದ್ಯ ಮಾರುಕಟ್ಟೆಯಲ್ಲಿ ಎರಡನೇ ತಲೆಮಾರಿನ ಕ್ರೆಟಾ ಮಾದರಿಯು ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ಹಳೆಯ ತಲೆಮಾರಿನ ಆವೃತ್ತಿಗಿಂತಲೂ ಹೆಚ್ಚು ಬಲಿಷ್ಠ, ಪ್ರೀಮಿಯಂ ಫೀಚರ್ಸ್ ಮತ್ತು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವುದು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ

ಬಿಎಸ್-6 ಎಂಜಿನ್ ಸೇರಿದಂತೆ ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಿರುವ ನ್ಯೂ ಜನರೇಷನ್ ಕ್ರೆಟಾ ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ

ನ್ಯೂ ಜನರೇಷನ್ ಮಾದರಿಯ ಬಿಡುಗಡೆಯ ನಂತರವೇ ಕ್ರೆಟಾ ಕಾರು ಮಾದರಿಯು ಇದುವರೆಗೆ 1.20 ಲಕ್ಷಕ್ಕೂ ಅಧಿಕ ಯುನಿಟ್ ಮಾರಾಟಗೊಂಡಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಸದ್ಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಾರುಗಳ ಮಾರಾಟ ಪೈಕಿ ನ್ಯೂ ಜನರೇಷನ್ ಕ್ರೆಟಾ ಖರೀದಿಗೆ ಹೆಚ್ಚು ಬೇಡಿಕೆಯಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.82 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.17.33 ಲಕ್ಷ ಬೆಲೆ ಪಡೆದುಕೊಂಡಿದೆ.

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ

ಇದಲ್ಲದೆ ಹ್ಯುಂಡೈ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಕ್ರೆಟಾ ಕಾರಿನಲ್ಲಿ ಹೊಸದಾಗಿ 7 ಸೀಟರ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಸಾಮಾನ್ಯ ಕಾರಿನ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಮೂರು ಸಾಲಿನ ಆಸನ ಸೌಲಭ್ಯವನ್ನು ಪಡೆದುಕೊಳ್ಳಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ

2+3+2 ಆಸನ ಸೌಲಭ್ಯ ಪಡೆದುಕೊಳ್ಳಲಿರುವ 7 ಸೀಟರ್ ಕ್ರೆಟಾ ಮಾದರಿಯು ಸಾಮಾನ್ಯ ಕಾರಿನಲ್ಲಿರುವಂತೆಯೇ ಎಂಜಿನ್ ಆಯ್ಕೆ ಹೊಂದಿಲಿದ್ದು, ಹೊಸ ಕಾರು ತುಸು ದುಬಾರಿ ಬೆಲೆ ಹೊಂದಿರಲಿದೆ. ಹೊಸ 7 ಸೀಟರ್ ಕ್ರೆಟಾ ಮುಂಬರುವ ಮಾರ್ಚ್ ಅಥವಾ ಏಪ್ರಿಲ್ ಹೊತ್ತಿಗೆ ಬಿಡುಗಡೆಯಾಗಲಿದ್ದು, ದುಬಾರಿ ಬೆಲೆಯ ಎಂಪಿವಿ ಕಾರುಗಳಿಗೆ ಹೊಸ ಆವೃತ್ತಿಯು ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

More from DriveSpark

Article Published On: Thursday, January 21, 2021, 11:16 [IST]
English summary
Hyundai Creta 5 Lakhs Units Sales Milestone. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+