ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಹ್ಯುಂಡೈ ಕ್ರೆಟಾ

ಹ್ಯುಂಡೈ ನಿರ್ಮಾಣದ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡು ಯಶಸ್ವಿ ಹಲವು ವರ್ಷಗಳನ್ನು ಪೂರೈಸಿದ್ದರೂ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಮಾರಾಟ ವಿಭಾದಲ್ಲಿ ಇಂದಿಗೂ ಕೂಡಾ ಅಗ್ರಸ್ಥಾನ ಕಾಯ್ದುಕೊಂಡಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಹ್ಯುಂಡೈ ಕ್ರೆಟಾ

ಕೈಗೆಟುಕುವ ಬೆಲೆ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿರುವ ಕ್ರೆಟಾ ಕಾರು ಕಾಲ ಕಾಲಕ್ಕೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳುತ್ತಾ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, ಕಳೆದ ಐದೂವರೆ ವರ್ಷಗಳ ಅವಧಿಯಲ್ಲಿ ಬರೋಬ್ಬರಿ 6 ಲಕ್ಷ ಯುನಿಟ್ ಮಾರಾಟಗೊಳ್ಳುವ ಮೂಲಕ ಹ್ಯುಂಡೈ ಕಂಪನಿಗೆ ಭಾರೀ ಪ್ರಮಾಣದ ಆದಾಯ ತಂದುಕೊಟ್ಟಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಹ್ಯುಂಡೈ ಕ್ರೆಟಾ

ಸದ್ಯ ಮಾರುಕಟ್ಟೆಯಲ್ಲಿ ಎರಡನೇ ತಲೆಮಾರಿನ ಕ್ರೆಟಾ ಮಾದರಿಯು ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ಹಳೆಯ ತಲೆಮಾರಿನ ಆವೃತ್ತಿಗಿಂತಲೂ ಹೆಚ್ಚು ಬಲಿಷ್ಠ, ಪ್ರೀಮಿಯಂ ಫೀಚರ್ಸ್ ಮತ್ತು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವುದು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಹ್ಯುಂಡೈ ಕ್ರೆಟಾ

ಬಿಎಸ್-6 ಎಂಜಿನ್ ಸೇರಿದಂತೆ ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಿರುವ ನ್ಯೂ ಜನರೇಷನ್ ಕ್ರೆಟಾ ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಹ್ಯುಂಡೈ ಕ್ರೆಟಾ

ನ್ಯೂ ಜನರೇಷನ್ ಮಾದರಿಯ ಬಿಡುಗಡೆಯ ನಂತರವೇ ಕ್ರೆಟಾ ಕಾರು ಮಾದರಿಯು ಇದುವರೆಗೆ ಸುಮಾರು 2 ಲಕ್ಷಕ್ಕೂ ಅಧಿಕ ಯುನಿಟ್ ಮಾರಾಟಗೊಂಡಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಹ್ಯುಂಡೈ ಕ್ರೆಟಾ

ಸದ್ಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಾರುಗಳ ಮಾರಾಟ ಪೈಕಿ ನ್ಯೂ ಜನರೇಷನ್ ಕ್ರೆಟಾ ಖರೀದಿಗೆ ಹೆಚ್ಚು ಬೇಡಿಕೆಯಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ.10 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.17.62 ಲಕ್ಷ ಬೆಲೆ ಪಡೆದುಕೊಂಡಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಹ್ಯುಂಡೈ ಕ್ರೆಟಾ

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಹ್ಯುಂಡೈ ಕ್ರೆಟಾ

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ವರ್ಷನ್ ಖರೀದಿಸಬಹುದಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಹ್ಯುಂಡೈ ಕ್ರೆಟಾ

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಹ್ಯುಂಡೈ ಕ್ರೆಟಾ

ಇದಲ್ಲದೆ ಹ್ಯುಂಡೈ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಕ್ರೆಟಾ ಕಾರು ಆಧರಿಸಿ ಹೊಸದಾಗಿ 7 ಸೀಟರ್ ಅಲ್ಕಾಜರ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಸಾಮಾನ್ಯ ಕಾರಿನ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಮೂರು ಸಾಲಿನ ಆಸನ ಸೌಲಭ್ಯವನ್ನು ಪಡೆದುಕೊಳ್ಳಲಿದೆ.

Most Read Articles

Kannada
English summary
Hyundai Creta New Sales Milestone. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X