ಲಾಕ್‌ಡೌನ್ ನಡುವೆಯೂ ಮೇ ತಿಂಗಳಿನಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಹ್ಯುಂಡೈ ಕ್ರೆಟಾ

ಕೋವಿಡ್ 2ನೇ ಅಲೆಯ ಪರಿಣಾಮ ಆರ್ಥಿಕ ಚಟುವಟಿಕೆಗಳು ನೆಲಕಚ್ಚಿರುವ ಪರಿಣಾಮ ಹೊಸ ವಾಹನ ಮಾರಾಟ ಕುಸಿತ ಕಂಡಿದೆ. ಬಹುತೇಕ ಹೊಸ ವಾಹನಗಳ ಮಾರಾಟದಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಹ್ಯುಂಡೈ ಕಂಪನಿಯು ಸಹ ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚಿನ ಮಟ್ಟದ ಕುಸಿತ ಅನುಭವಿಸಿದೆ.

ಮೇ ತಿಂಗಳಿನಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಹ್ಯುಂಡೈ ಕ್ರೆಟಾ

ವಿವಿಧ ರಾಜ್ಯಗಳಲ್ಲಿ ಕಠಿಣ ಕ್ರಮಗಳೊಂದಿಗೆ ಲಾಕ್‌ಡೌನ್ ವಿಧಿಸಿದ್ದರೂ ಡಿಜಿಟಲ್ ಪ್ಲ್ಯಾಟ್‌ಫಾರ್ಮ್ ಮೂಲಕ ವಾಹನ ಮಾರಾಟ ಪ್ರಕ್ರಿಯೆಯನ್ನು ಕೈಗೊಳ್ಳುತ್ತಿರುವ ಕಾರು ಕಂಪನಿಗಳು ಶೋರೂಂ ತೆರೆಯಲಿದ್ದರೂ ನಿಗದಿತ ಅವಧಿಯಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಹೊಸ ವಾಹನಗಳ ವಿತರಣೆ ಮಾಡುತ್ತಿದ್ದು, ಹ್ಯುಂಡೈ ಸಹ ಡಿಜಿಟಲ್ ಪ್ಲ್ಯಾಟ್‌ಫಾರ್ಮ್‌ಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಮೇ ಅವಧಿಯಲ್ಲಿ ಸುಮಾರು 25,001 ಯುನಿಟ್ ಮಾರಾಟಗೊಳಿಸಿದೆ.

ಮೇ ತಿಂಗಳಿನಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಹ್ಯುಂಡೈ ಕ್ರೆಟಾ

ಹ್ಯುಂಡೈ ಕಾರು ಮಾರಾಟವನ್ನು ಕಳೆದ ವರ್ಷದ ಮೇ ಅವಧಿಗೆ ಹೋಲಿಕೆ ಮಾಡಿದ್ದಲ್ಲಿ ಈ ವರ್ಷದ ಮೇ ಅವಧಿಯ ಕಾರು ಮಾರಾಟವು ಹೆಚ್ಚಳವಾಗಿದ್ದರೂ ಸಹ ಕೋವಿಡ್ ಪರಿಣಾಮ ಕಳೆದ ವರ್ಷ ಕಾರು ಮಾರಾಟ ಸಾಕಷ್ಟು ಕುಸಿತ ಕಂಡಿತ್ತು.

ಮೇ ತಿಂಗಳಿನಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಹ್ಯುಂಡೈ ಕ್ರೆಟಾ

ಹೀಗಾಗಿ ಈ ವರ್ಷದ ಏಪ್ರಿಲ್ ಅವಧಿಯ ಕಾರು ಮಾರಾಟವನ್ನು ಮೇ ಅವಧಿಗೆ ಹೋಲಿಕೆ ಮಾಡಿದ್ದಲ್ಲಿ ಮೇ ಅವಧಿಯಲ್ಲಿನ ಕಾರು ಮಾರಾಟವು ಶೇ.49 ರಷ್ಟು ಕುಸಿತ ಕಂಡಿದ್ದು, ಕ್ರೆಟಾ ಕಾರು ಹೊರತುಪಡಿಸಿ ಇನ್ನುಳಿದ ಎಲ್ಲಾ ಕಾರುಗಳ ಮಾರಾಟದಲ್ಲಿ ಭಾರೀ ಇಳಿಕೆಯಾಗಿದೆ.

ಮೇ ತಿಂಗಳಿನಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಹ್ಯುಂಡೈ ಕ್ರೆಟಾ

ಕ್ರೆಟಾ ಕಾರು ಮಾತ್ರ ಲಾಕ್‌ಡೌನ್ ನಡುವೆಯೂ ಭರ್ಜರಿ ಬೇಡಿಕೆ ಪಡೆದುಕೊಂಡಿದ್ದು, ಮೇ ಅವಧಿಯಲ್ಲಿ 7,527 ಯುನಿಟ್ ಮಾರಾಟಗೊಳ್ಳುವ ಮೂಲಕ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, ನ್ಯೂ ಜನರೇಷನ್ ಮಾದರಿಯ ಬಿಡುಗಡೆಯ ನಂತರ ಹೊಸ ಕಾರು ಮಾರಾಟವು ಹಲವು ಹೊಸ ದಾಖಲೆಗಳಿಗೆ ಕಾರಣವಾಗುತ್ತಿದೆ.

ಮೇ ತಿಂಗಳಿನಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಹ್ಯುಂಡೈ ಕ್ರೆಟಾ

ಹ್ಯುಂಡೈ ನಿರ್ಮಾಣದ ಕ್ರೆಟಾ ನ್ಯೂ ಜನರೇಷನ್ ಆವೃತ್ತಿಯು ಭಾರತದಲ್ಲಿ ಬಿಡುಗಡೆಯಾಗಿ ಒಂದು ವರ್ಷ ಪೂರ್ಣಗೊಳಿಸಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿರುವ ಕ್ರೆಟಾ ಆವೃತ್ತಿಯು ಬಿಡಗಡೆ ಹಲವು ವರ್ಷಗಳ ನಂತರವೂ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಮೇ ತಿಂಗಳಿನಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಹ್ಯುಂಡೈ ಕ್ರೆಟಾ

2020ರ ಮಾರ್ಚ್ 16ರಂದು ನ್ಯೂ ಜನರೇಷನ್ ಕ್ರೆಟಾ ಕಾರು ಮಾದರಿಯನ್ನು ಭಾರೀ ಬದಲಾವಣೆಯೊಂದಿಗೆ ಬಿಡುಗಡೆಗೊಳಿಸಿದ್ದ ಹ್ಯುಂಡೈ ಕಂಪನಿಯು ಒಂದು ವರ್ಷದ ಅವಧಿಯಲ್ಲಿ ಬರೋಬ್ಬರಿ 1.30 ಲಕ್ಷ ಯುನಿಟ್ ಮಾರಾಟಗೊಳಿಸಿತ್ತು.

ಮೇ ತಿಂಗಳಿನಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಹ್ಯುಂಡೈ ಕ್ರೆಟಾ

ನ್ಯೂ ಜನರೇಷನ್ ಮಾದರಿಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಮಾರಾಟವಾದ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಉತ್ಪಾದನಾ ಸಾಮರ್ಥ್ಯಕ್ಕಿಂತಲೂ ಮೂರು ಪಟ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಮೇ ತಿಂಗಳಿನಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಹ್ಯುಂಡೈ ಕ್ರೆಟಾ

ಬೇಡಿಕೆಗೆ ಅನುಗುಣವಾಗಿ ಹೊಸ ಕಾರಿನ ಉತ್ಪಾದನಾ ಸಾಮರ್ಥ್ಯವನ್ನು ದ್ವಿಗುಣಗೊಳಿಸಿರುವ ಹ್ಯುಂಡೈ ಕಂಪನಿಯು ಗ್ರಾಹಕರಿಗೆ ನಿಗದಿತ ಅವಧಿ ಹೆಚ್ಚಿನ ಮಟ್ಟದ ಯುನಿಟ್‌ಗಳನ್ನು ವಿತರಿಸುತ್ತಿದ್ದು, ಕಳೆದ ಎರಡು ವರ್ಷಗಳಲ್ಲಿ ಎಸ್‌ಯುವಿ ಬೇಡಿಕೆ ಪ್ರಮಾಣವು ಶೇ.25ರಿಂದ ಶೇ.33ಕ್ಕೆ ಏರಿಕೆಯಾಗಿರುವುದು ಕ್ರೆಟಾ ಬೇಡಿಕೆಯಲ್ಲಿ ಮತ್ತಷ್ಟು ಹೊಸ ಬೇಡಿಕೆ ಹರಿದುಬರುತ್ತಿದೆ.

ಮೇ ತಿಂಗಳಿನಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಹ್ಯುಂಡೈ ಕ್ರೆಟಾ

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಮೇ ತಿಂಗಳಿನಲ್ಲಿ ಭಾರೀ ಬೇಡಿಕೆ ಪಡೆದುಕೊಂಡ ಹ್ಯುಂಡೈ ಕ್ರೆಟಾ

ಕ್ರೆಟಾ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.17.54 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
Hyundai Creta Becomes Best Seller In 2021 May. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X