Just In
- 59 min ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 2 hrs ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 3 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ಪಾದನೆಗಿಂತಲೂ ಮೂರು ಪಟ್ಟು ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದೆ ಹ್ಯುಂಡೈ ಕ್ರೆಟಾ
ಹ್ಯುಂಡೈ ನಿರ್ಮಾಣದ ಕ್ರೆಟಾ ನ್ಯೂ ಜನರೇಷನ್ ಆವೃತ್ತಿಯು ಭಾರತದಲ್ಲಿ ಬಿಡುಗಡೆಯಾಗಿ ಒಂದು ವರ್ಷ ಪೂರ್ಣಗೊಳಿಸಿದ್ದು, ಕಂಪ್ಯಾಕ್ಟ್ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿರುವ ಕ್ರೆಟಾ ಆವೃತ್ತಿಯು ಬಿಡಗಡೆ ಹಲವು ವರ್ಷಗಳ ನಂತರವೂ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.
2020ರ ಮಾರ್ಚ್ 16ರಂದು ನ್ಯೂ ಜನರೇಷನ್ ಕ್ರೆಟಾ ಕಾರು ಮಾದರಿಯನ್ನು ಭಾರೀ ಬದಲಾವಣೆಯೊಂದಿಗೆ ಬಿಡುಗಡೆಗೊಳಿಸಿದ್ದ ಹ್ಯುಂಡೈ ಕಂಪನಿಯು ಒಂದು ವರ್ಷದ ಅವಧಿಯಲ್ಲಿ ಬರೋಬ್ಬರಿ 1.21 ಲಕ್ಷ ಯುನಿಟ್ ಮಾರಾಟಗೊಳಿಸಿತ್ತು. ಈ ನ್ಯೂ ಜನರೇಷನ್ ಮಾದರಿಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಮಾರಾಟವಾದ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಉತ್ಪಾದನಾ ಸಾಮರ್ಥ್ಯಕ್ಕಿಂತಲೂ ಮೂರು ಪಟ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.
ಬೇಡಿಕೆಗೆ ಅನುಗುಣವಾಗಿ ಹೊಸ ಕಾರಿನ ಉತ್ಪಾದನಾ ಸಾಮರ್ಥ್ಯವನ್ನು ದ್ವಿಗುಣಗೊಳಿಸಿರುವ ಹ್ಯುಂಡೈ ಕಂಪನಿಯು ಗ್ರಾಹಕರಿಗೆ ನಿಗದಿತ ಅವಧಿ ಹೆಚ್ಚಿನ ಮಟ್ಟದ ಯುನಿಟ್ಗಳನ್ನು ವಿತರಿಸುತ್ತಿದ್ದು, ಕಳೆದ ಎರಡು ವರ್ಷಗಳಲ್ಲಿ ಎಸ್ಯುವಿ ಬೇಡಿಕೆ ಪ್ರಮಾಣವು ಶೇ.25ರಿಂದ ಶೇ.33ಕ್ಕೆ ಏರಿಕೆಯಾಗಿರುವುದು ಕ್ರೆಟಾ ಬೇಡಿಕೆಯಲ್ಲಿ ಮತ್ತಷ್ಟು ಹೊಸ ಬೇಡಿಕೆ ಹರಿದುಬರುತ್ತಿದೆ.
ಹ್ಯುಂಡೈ ಕಂಪನಿಯು ಕ್ರೆಟಾ ಮಾದರಿಯನ್ನು ಭಾರತದಲ್ಲಿ ಮೊದಲ ಬಾರಿಗೆ 2016ರಲ್ಲಿ ಪರಿಚಯಿಸಿದ್ದ ಹ್ಯುಂಡೈ ಕಂಪನಿಯು ಕಳೆದ ವರ್ಷ ಮಾರ್ಚ್ನಲ್ಲಿ ನ್ಯೂ ಜನರೇಷನ್ ಮಾದರಿಯೊಂದಿಗೆ ಬಿಡುಗಡೆ ಮಾಡಿತ್ತು.
ಕಳೆದ ಜನವರಿಯಲ್ಲಿ ಕ್ರೆಟಾ ಮಾದರಿಯು ಭಾರತದಲ್ಲಿ ಬಿಡುಗಡೆಯಾದ ನಂತರ ಇದುವರೆಗೆ ಒಟ್ಟು 5 ಲಕ್ಷ ಯುನಿಟ್ ಮಾರಾಟಗೊಂಡಿದ್ದು, 2020ರ ಮಾರ್ಚ್ 16ರಿಂದ ಇದುವರೆಗೆ ಕೇವಲ ಒಂದೇ ವರ್ಷದಲ್ಲಿ 1.21 ಲಕ್ಷ ಯುನಿಟ್ ಮಾರಾಟಗೊಂಡಿದೆ. ಕೈಗೆಟುಕುವ ಬೆಲೆ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿರುವ ಕ್ರೆಟಾ ಕಾರು ಕಾಲ ಕಾಲಕ್ಕೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳುತ್ತಾ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, ಹ್ಯುಂಡೈ ಕಂಪನಿಯ ಇತರೆ ಕಾರುಗಳ ಮಾದರಿಗಳ ಪೈಕಿ ಕ್ರೆಟಾ ಮಾದರಿಯು ಭಾರೀ ಪ್ರಮಾಣದ ಆದಾಯ ತಂದುಕೊಟ್ಟಿದೆ.
ಸದ್ಯ ಮಾರುಕಟ್ಟೆಯಲ್ಲಿ ಎರಡನೇ ತಲೆಮಾರಿನ ಕ್ರೆಟಾ ಮಾದರಿಯು ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ಹಳೆಯ ತಲೆಮಾರಿನ ಆವೃತ್ತಿಗಿಂತಲೂ ಹೆಚ್ಚು ಬಲಿಷ್ಠ, ಪ್ರೀಮಿಯಂ ಫೀಚರ್ಸ್ ಮತ್ತು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವುದು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.
ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!
ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.
1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಕ್ರೆಟಾ ಕಂಪ್ಯಾಕ್ಟ್ ಎಸ್ಯವಿ ಮಾದರಿಯು ಸದ್ಯ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.17.54 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.