ಲಡಾಖ್ ಪೊಲೀಸ್ ಪಡೆ ಸೇರಿದ ಹ್ಯುಂಡೈ ಕ್ರೆಟಾ ಎಸ್‍ಯುವಿ
ಹ್ಯುಂಡೈ ಕ್ರೆಟಾ ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಕಾಂಪ್ಯಾಕ್ಟ್ ಎಸ್‍ಯುವಿಯ ಎರಡನೇ ತಲೆಮಾರಿನ ಮಾದರಿಯು ಮಾರಾಟದಲ್ಲಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ಕ್ರೆಟಾ ಎಸ್‍ಯುವಿಯು ಮಾದರಿಯು ಮಾರಾಟವಾಗುತ್ತಿದೆ. ಈ ಬಹುಬೇಡಿಕೆಯ ಹುಂಡೈ ಕ್ರೆಟಾ ಲಡಾಖ್ ಪೋಲಿಸ್ ಪಡೆ ಸೇರಿಕೊಂಡಿದೆ. ಲಡಾಖ್ ಪೋಲಿಸ್ ಪಡೆಯು ಹ್ಯುಂಡೈ ಕ್ರೆಟಾ ಎಸ್‍ಯುವಿಯು ಟಾಪ್-ಸ್ಪೆಕ್ ಎಸ್ಎಕ್ಸ್ ರೂಪಂತರವನ್ನು ಖರೀಡಿಸಿದೆ. ಪೋಲೀಸ್ ಲಿವರಿಯಲ್ಲಿನ ಕ್ರೆಟಾ ಹೊರಭಾಗದಲ್ಲಿ ಬೆರಳೆಣಿಕೆಯ ಬದಲಾವಣೆಗಳನ್ನು ಮಾತ್ರ ಹೊಂದಿದೆ.

ಇದು ಲಡಾಖ್ ಪೋಲೀಸ್ ಫ್ಲೀಟ್ ಮತ್ತು ಮೇಲ್ಭಾಗದಲ್ಲಿ ಬಿಕನ್ ನಿರ್ದಿಷ್ಟವಾದ ಡೆಕಾಲ್‌ಗಳನ್ನು ಪಡೆಯುತ್ತದೆ. ಲಡಾಖ್ ಪೊಲೀಸ್ ಪಡೆ ಪಡೆದುಕೊಂಡ ಕ್ರೆಟಾ ಎಸ್‍ಯುವಿಯ ನಿಖರ ಸಂಖ್ಯೆಯ ಮಾಹಿತಿಗಳು ಬಹಿರಂಗವಾಗಿಲ್ಲ,

ಹ್ಯುಂಡೈ ಕ್ರೆಟಾ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾದ ಕಡಿಮೆ ಅವಧಿಯಲ್ಲಿ ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸುವಲ್ಲಿ ಯಶ್ವಸಿಯಾಗಿದೆ. ಅಲ್ಲದೇ ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷ ಕ್ರೆಟಾ ಅತಿ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿದೆ.

ಸದ್ಯ ಮಾರುಕಟ್ಟೆಯಲ್ಲಿ ಮಾರಟವಾಗುತ್ತಿರುವ ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಹಲವು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಕ್ರೆಟಾ ಎಸ್‍ಯುವಿಯಲ್ಲಿ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಒಳಗೊಂಡಿತ್ತು.

ಕ್ರೆಟಾ ಎಸ್‍ಯುವಿಯ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.

1.5-ಲೀಟರ್ ಪೆಟ್ರೋಲ್ ಮಾದರಿಯೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115 ಬಿಎಚ್‌ಪಿ ಪವರ್ ಮತ್ತು 144 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ ಪವರ್ ಮತ್ತು 250-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಈ ಹ್ಯುಂಡೈ ಕ್ರೆಟಾ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿರುವ ಹ್ಯುಂಡೈನ ಕ್ಯಾಸ್ಕೇಡಿಂಗ್ ಗ್ರಿಲ್ ಹೆಚ್ಚು ಗಮನ ಸೆಳೆದರೂ, ಹೆಡ್‍ಲೈಟ್ ಮತ್ತಷ್ಟು ಗಮನ ಸೆಳೆಯುತ್ತದೆ. ಸ್ಪ್ಲಿಟ್ ಹೆಡ್‍ಲೈಟ್ ಸ್ಲಿಟ್ ರೀತಿಯ ಎಲ್ಇಡಿ ಡಿಆರ್‍ಎಲ್ ಅನ್ನು ಹೊಂದಿದೆ.

ಈ ಎಸ್‍ಯುವಿಯ ಹೆಡ್‌ಲೈಟ್ ಕ್ಲಸ್ಟರ್ ಕೆಳಗೆ ಹೊಸ ಲುಕ್‍ನ ಫಾಗ್ ಲ್ಯಾಂಪ್‍ಗಳಿವೆ. ಇನ್ನು ಬಂಪರ್‍ನ ಕೆಳಗೆ ಸ್ಕಫ್ ಪ್ಲೇಟ್‍ಗಳಿವೆ. ಸ್ಕ್ವೇರ್ ಶೇಪಿನ ವ್ಹೀಲ್ ಆರ್ಕ್‍ಗಳು ಕ್ರೆಟಾಗೆ ಹೆಚ್ಚಿನ ಲುಕ್ ನೀಡುತ್ತವೆ. ಇದರೊಂದಿಗೆ ಹೊಸ ಇನ್ಫೋಟೇನ್‍ಮೆಂಟ್ ಸಿಸ್ಟಂ ಅಳವಡಿಸಲಾಗಿದೆ. ಈ ಸಿಸ್ಟಂನಲ್ಲಿ ವಾಯ್ಸ್ ಕಮಾಂಡ್ ಹಾಗೂ ಬ್ಲೂಲಿಂಕ್ ಕನೆಕ್ಟಿವಿಟಿ ಫೀಚರ್‍ಗಳನ್ನು ಒಳಗೊಂಡಿದೆ,

ಈ ಎಸ್‍ಯುವಿಯಲ್ಲಿರುವ ಸನ್‍ರೂಫ್ ವಾಯ್ಸ್ ಕಮಾಂಡ್‍ನಿಂದ ಕಾರ್ಯನಿರ್ವಹಿಸುತ್ತದೆ. ಆಟೋಮ್ಯಾಟಿಕ್ ಮಾದರಿಗಳಲ್ಲಿ ಪ್ಯಾಡಲ್ ಶಿಫ್ಟ್, ಡ್ಯುಯಲ್ ಹೋಸ್ ಚಿಮ್ನಿ, ರಿಮೋಟ್ ಎಂಜಿನ್ ಸ್ಟಾರ್ಟ್ ಅಪ್, ಕ್ರೂಸ್ ಕಂಟ್ರೋಲ್, ಏರ್ ಪ್ಯೂರಿಫೈಯರ್ ಹಾಗೂ ವೈರ್‍ಲೆಸ್ ಚಾರ್ಜರ್‍ಗಳಿವೆ.

ಜನಪ್ರಿಯ ಬಿಎಸ್-6 ಹ್ಯುಂಡೈ ಕ್ರೆಟಾ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ರೆನಾಲ್ಟ್ ಡಸ್ಟರ್, ಎಂಜಿ ಹೆಕ್ಟರ್ ಹಾಗೂ ಟಾಟಾ ಹ್ಯಾರಿಯರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications