ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ Hyundai Creta ಕಾರಿಗೆ ಭರ್ಜರಿ ಬೇಡಿಕೆ
ಹ್ಯುಂಡೈ(Hyundai) ನಿರ್ಮಾಣದ ನ್ಯೂ ಜನರೇಷನ್ ಕ್ರೆಟಾ(Creta) ಆವೃತ್ತಿಯು ಭಾರತದಲ್ಲಿ ಬಿಡುಗಡೆಯಾಗಿ ಒಂದೂವರೆ ವರ್ಷ ಪೂರ್ಣಗೊಳಿಸಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿರುವ ಕ್ರೆಟಾ ಆವೃತ್ತಿಯು ಬಿಡಗಡೆ ಹಲವು ವರ್ಷಗಳ ನಂತರವೂ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

2020ರ ಮಾರ್ಚ್ 16ರಂದು ನ್ಯೂ ಜನರೇಷನ್ ಕ್ರೆಟಾ ಕಾರು ಮಾದರಿಯನ್ನು ಭಾರೀ ಬದಲಾವಣೆಯೊಂದಿಗೆ ಬಿಡುಗಡೆಗೊಳಿಸಿದ್ದ ಹ್ಯುಂಡೈ ಕಂಪನಿಯು ಒಂದೂವರೆ ವರ್ಷದ ಅವಧಿಯಲ್ಲಿ ಬರೋಬ್ಬರಿ 1.50 ಲಕ್ಷಕ್ಕೂ ಹೆಚ್ಚು ಯುನಿಟ್ ಮಾರಾಟಗೊಳಿಸಿದ್ದು, ಈ ನ್ಯೂ ಜನರೇಷನ್ ಮಾದರಿಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಮಾರಾಟವಾದ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಹೊಸ ಕ್ರೆಟಾ ಕಾರು ಮಾದರಿಯ ಉತ್ಪಾದನಾ ಸಾಮರ್ಥ್ಯಕ್ಕಿಂತಲೂ ಮೂರು ಪಟ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಹೊಸ ಕಾರು ಪ್ರತಿ ತಿಂಗಳು ಸರಾಸರಿಯಾಗಿ 7 ಸಾವಿರ 8 ಸಾವಿರ ಯುನಿಟ್ ಮಾರಾಟಗೊಳ್ಳುತ್ತಿದೆ.

ಬೇಡಿಕೆಗೆ ಅನುಗುಣವಾಗಿ ಹೊಸ ಕಾರಿನ ಉತ್ಪಾದನಾ ಸಾಮರ್ಥ್ಯವನ್ನು ದ್ವಿಗುಣಗೊಳಿಸಿರುವ ಹ್ಯುಂಡೈ ಕಂಪನಿಯು ಗ್ರಾಹಕರಿಗೆ ನಿಗದಿತ ಅವಧಿ ಹೆಚ್ಚಿನ ಮಟ್ಟದ ಯುನಿಟ್‌ಗಳನ್ನು ವಿತರಿಸುತ್ತಿದ್ದು, ಕಳೆದ ಎರಡು ವರ್ಷಗಳಲ್ಲಿ ಎಸ್‌ಯುವಿ ಬೇಡಿಕೆ ಪ್ರಮಾಣವು ಶೇ.25ರಿಂದ ಶೇ.33ಕ್ಕೆ ಏರಿಕೆಯಾಗಿರುವುದು ಕ್ರೆಟಾ ಬೇಡಿಕೆಯಲ್ಲಿ ಮತ್ತಷ್ಟು ಹೊಸ ಬೇಡಿಕೆ ಹರಿದುಬರುತ್ತಿದೆ.

ಬೇಡಿಕೆ ಮತ್ತು ಉತ್ಪಾದನಾ ಪ್ರಮಾಣವನ್ನು ಆಧರಿಸಿ ಹ್ಯುಂಡೈ ಕಂಪನಿಯು ಕಾರು ಖರೀದಿಗಾಗಿ 5 ತಿಂಗಳಿನಿಂದ 8 ತಿಂಗಳ ತನಕ ಕಾಯುವಿಕೆ ಅವಧಿಯನ್ನು ನಿಗದಿಪಡಿಸಿದ್ದು, ಮಧ್ಯಮ ಕ್ರಮಾಂಕದಲ್ಲಿರುವ ಎಸ್ಎಕ್ಸ್ ಆಪ್ಷನ್ ಡೀಸೆಲ್ ಆಟೋ ಮಾದರಿಯು ಹೆಚ್ಚಿನ ಬೇಡಿಕೆ ಹೊಂದಿದೆ.

ಟಾಪ್ ಎಂಡ್ ಮಾದರಿಗಳು ಬುಕ್ಕಿಂಗ್ ನಂತರ ಅತಿ ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದು, ಬೆಸ್ ವೆರಿಯೆಂಟ್ ಮತ್ತು ಮಧ್ಯಮ ಕ್ರಮಾಂಕದ ವೆರಿಯೆಂಟ್ ಖರೀದಿಗೆ ಹೆಚ್ಚಿನ ಸಮಯ ಕಾಯಬೇಕಾಗುತ್ತದೆ.

ಜೊತೆಗೆ ಹೊಸ ಕಾರುಗಳಿಗೆ ಮುಖ್ಯವಾಗಿ ಬೇಕಿರುವ ಸೆಮಿ ಕಂಡಕ್ಟರ್ ಉಪಕರಣಗಳ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿರುವುದು ಕೂಡಾ ಹೊಸ ವಾಹನಗಳ ಉತ್ಪಾದನೆ ಮೇಲೆ ಪರಿಣಾಮ ಬೀರಿದ್ದು, ಮುಂಬರುವ ಕೆಲ ತಿಂಗಳಿನಲ್ಲಿ ಸೆಮಿ ಕಂಡಕ್ಟರ್ ಪೂರೈಕೆಯು ಹೆಚ್ಚಳವಾಗುವ ನೀರಿಕ್ಷೆಯಿದೆ.

ಇನ್ನು ಹ್ಯುಂಡೈ ಕಂಪನಿಯು ಕ್ರೆಟಾ ಮಾದರಿಯನ್ನು ಭಾರತದಲ್ಲಿ ಮೊದಲ ಬಾರಿಗೆ 2016ರಲ್ಲಿ ಪರಿಚಯಿಸಿದ್ದ ಹ್ಯುಂಡೈ ಕಂಪನಿಯು ಕಳೆದ ವರ್ಷ ಮಾರ್ಚ್‌ನಲ್ಲಿ ನ್ಯೂ ಜನರೇಷನ್ ಮಾದರಿಯೊಂದಿಗೆ ಬಿಡುಗಡೆ ಮಾಡಿತ್ತು.

ಕಳೆದ ಜನವರಿಯಲ್ಲಿ ಕ್ರೆಟಾ ಮಾದರಿಯು ಭಾರತದಲ್ಲಿ ಬಿಡುಗಡೆಯಾದ ನಂತರ ಇದುವರೆಗೆ ಒಟ್ಟು 5 ಲಕ್ಷ ಯುನಿಟ್ ಮಾರಾಟಗೊಂಡಿದ್ದು, 2020ರ ಮಾರ್ಚ್ 16ರಿಂದ ಇದುವರೆಗೆ ಕೇವಲ ಒಂದೇ ವರ್ಷದಲ್ಲಿ 1.50 ಲಕ್ಷ ಯುನಿಟ್ ಮಾರಾಟಗೊಂಡಿದೆ. ಕೈಗೆಟುಕುವ ಬೆಲೆ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿರುವ ಕ್ರೆಟಾ ಕಾರು ಕಾಲ ಕಾಲಕ್ಕೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳುತ್ತಾ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.

ಹ್ಯುಂಡೈ ಕಂಪನಿಯ ಇತರೆ ಕಾರುಗಳ ಮಾದರಿಗಳ ಪೈಕಿ ಕ್ರೆಟಾ ಮಾದರಿಯು ಭಾರೀ ಪ್ರಮಾಣದ ಆದಾಯ ತಂದುಕೊಟ್ಟಿದ್ದು, ಮುಂಬರುವ ದಿನಗಳಲ್ಲಿ ಹೊಸ ಕಾರು ಮತ್ತಷ್ಟು ಬದಲಾವಣೆ ಪಡೆದುಕೊಳ್ಳುವ ಸಿದ್ದತೆಯಲ್ಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಎರಡನೇ ತಲೆಮಾರಿನ ಕ್ರೆಟಾ ಮಾದರಿಯು ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ಹಳೆಯ ತಲೆಮಾರಿನ ಆವೃತ್ತಿಗಿಂತಲೂ ಹೆಚ್ಚು ಬಲಿಷ್ಠ, ಪ್ರೀಮಿಯಂ ಫೀಚರ್ಸ್ ಮತ್ತು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವುದು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಕ್ರೆಟಾ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.16 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.17.87 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.


Click it and Unblock the Notifications