Just In
- 13 min ago XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 2 hrs ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 15 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 16 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿಗೆ ಬಿಜೆಪಿಯ ಹೊಸ ಸಂಗಾತಿಯನ್ನ ಕೇಳಿ ಎಂದು ಟಾಂಗ್ ಕೊಟ್ಟ ಸಿದ್ದರಾಮಯ್ಯ
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೆಟಾ ಕಾರಿನಲ್ಲಿ ಎಸ್ಎಕ್ಸ್ ಎಕ್ಸಿಕ್ಯೂಟಿವ್ ಆವೃತ್ತಿ ಬಿಡುಗಡೆ ಮಾಡಿದ ಹ್ಯುಂಡೈ
ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕ್ರೆಟಾ ಕಂಪ್ಯಾಕ್ಟ್ ಎಸ್ಯುವಿ ಮಾದರಿಯಲ್ಲಿ ಹೊಸ ಆವೃತ್ತಿಯೊಂದಿಗೆ ಬಿಡುಗಡೆ ಮಾಡಿದ್ದು, ಹೊಸ ಎಸ್ಎಕ್ಸ್ ಎಕ್ಸಿಕ್ಯೂಟಿವ್ ಮಾದರಿಯು ಕ್ರೆಟಾ ಕಾರಿನ ಮಧ್ಯಮ ಕ್ರಮಾಂಕದಲ್ಲಿ ಮಾರಾಟಗೊಳ್ಳಲಿದೆ.
ಕ್ರೆಟಾ ಕಾರಿನ ಮಧ್ಯಮ ಕ್ರಮಾಂಕದಲ್ಲಿರುವ ಎಸ್ಎಕ್ಸ್ ಮಾದರಿಗಿಂತಲೂ ಕೆಳಸ್ಥಾನದಲ್ಲಿ ಮಾರಾಟಗೊಳ್ಳಲಿರುವ ಎಸ್ಎಕ್ಸ್ ಎಕ್ಸಿಕ್ಯೂಟಿವ್ ಆವೃತ್ತಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 13.18 ಲಕ್ಷ ಬೆಲೆ ಹೊಂದಿದ್ದು, ಇದು ಸ್ಟ್ಯಾಂಡರ್ಡ್ ಎಸ್ಎಕ್ಸ್ ಮಾದರಿಗಿಂತಲೂ ರೂ.78 ಸಾವಿರದಷ್ಟು ಕಡಿಮೆ ಬೆಲೆ ಹೊಂದಿದೆ.
ಮಧ್ಯಮ ಕ್ರಮಾಂಕದಲ್ಲಿ ಎಸ್ಎಕ್ಸ್ ವೆರಿಯೆಂಟ್ ಬೇಡಿಕೆ ಹೆಚ್ಚಿಸಲು ಕೆಲವು ಬದಲಾವಣೆಗಳೊಂದಿಗೆ ಎಸ್ಎಕ್ಸ್ ಎಕ್ಸಿಕ್ಯೂಟಿವ್ ಬಿಡುಗಡೆ ಮಾಡಲಾಗಿದ್ದು, ಹೊಸ ಆವೃತ್ತಿಯು ಪೆಟ್ರೋಲ್(ರೂ. 13.18 ಲಕ್ಷ) ಮತ್ತು ಡೀಸೆಲ್( ರೂ. 14.18 ಲಕ್ಷ) ಆವೃತ್ತಿಗಳಲ್ಲಿ ಖರೀದಿ ಮಾಡಬಹುದಾಗಿದೆ.
ಸ್ಟ್ಯಾಂಡರ್ಡ್ ಎಸ್ಎಕ್ಸ್ ಮಾದರಿಗಿಂತಲೂ ಕಡಿಮೆ ಬೆಲೆಗಾಗಿ ಹೊಸ ಆವೃತ್ತಿಯಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್ ಕೈಬಿಡಲಾಗಿದ್ದು, ಎಸ್ ಮತ್ತು ಎಸ್ಎಕ್ಸ್ ನಡುವಿನ ಬೆಲೆ ಅಂತರ ಸರಿದೂಗಿಸಲು ಎಸ್ಎಕ್ಸ್ ಎಕ್ಸಿಕ್ಯೂಟಿವ್ ಬಿಡುಗಡೆ ಮಾಡಲಾಗಿದೆ.
ಹೊಸ ಆವೃತ್ತಿಯಲ್ಲಿ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್, ಕಾರ್ ಟೆಕ್ ಕನೆಕ್ಟಿವಿಟಿ, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಡೋರ್ ಹ್ಯಾಂಡಲ್ ಕ್ರೋಮ್, ಥೆಫ್ಟ್ ಅಲಾರಾಂ, ಅರ್ಕಾಮಿಸ್ ಸೌಂಡ್ ಸಿಸ್ಟಂ ಮತ್ತು ಧ್ವನಿ ಗ್ರಹಿಸುವಿಕೆಯಂತಹ ವೈಶಿಷ್ಟ್ಯಗಳನ್ನು ತೆಗೆದುಹಾಕಲಾಗಿದೆ.
ಪ್ರೀಮಿಯಂ ಫೀಚರ್ಸ್ ಕೈಬಿಡಲಾಗಿದ್ದರೂ ಹೊಸ ಆವೃತ್ತಿಯಲ್ಲಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ಗಳನ್ನು ಮುಂದುವರಿಸಲಾಗಿದ್ದು, ಬ್ಲೂಟೂಥ್ ಕನೆಕ್ಟಿವಿಟಿ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಶಾರ್ಕ್ ಫಿನ್ ಆಂಟೆನಾ, ಯುಎಸ್ಬಿ ಫೋರ್ಟ್, ಎಲ್ಇಡಿ ಹೆಡ್ಲೈಟ್ಸ್, 17-ಇಂಚಿನ ಅಲಾಯ್ ವೀಲ್ಹ್, ಕ್ರೂಸ್ ಕಂಟ್ರೋಲ್, ಆಟೋ ಎಸಿ ಸೇರಿದಂತೆ ಹಲವು ಫೀಚರ್ಸ್ಗಳನ್ನು ಹೊಸ ಮಾದರಿಯಲ್ಲಿ ಉಳಿಸಿಕೊಳ್ಳಲಾಗಿದೆ.
1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಆಯ್ಕೆ ಹೊಂದಿರುವ ಹೊಸ ಆವೃತ್ತಿಯಲ್ಲಿ ಸ್ಟ್ಯಾಂಡರ್ಡ್ 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆ ನೀಡಲಾಗಿದ್ದು, ಇನ್ನುಳಿದ ಆವೃತ್ತಿಗಳಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.
ಕ್ರೆಟಾ ಕಂಪ್ಯಾಕ್ಟ್ ಎಸ್ಯವಿ ಮಾದರಿಯು ಸದ್ಯ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.17.54 ಲಕ್ಷ ಬೆಲೆ ಹೊಂದಿದ್ದು, ಇದೀಗ ಬಿಡುಗಡೆಯಾಗಿರುವ ಹೊಸ ಕಾರು ಮಧ್ಯಮ ಕ್ರಮಾಂಕದಲ್ಲಿ ಮಾರಾಟಗೊಳ್ಳುತ್ತದೆ.
ಹೊಸ ಕ್ರೆಟಾ ಕಾರು ಎಸ್ಎಕ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಒಟ್ಟು 6 ವೆರಿಯೆಂಟ್ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಹೊಂದಿದೆ.