ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಖರೀದಿಗಾಗಿ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಕಳೆದ ತಿಂಗಳು ಬಿಡುಗಡೆಯಾಗಬೇಕಿದ್ದ ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಯನ್ನು ಕೋವಿಡ್ ಪರಿಣಾಮ ಮುಂದೂಡಿಕೆ ಮಾಡಿರುವ ಹ್ಯುಂಡೈ ಕಂಪನಿಯು ಜೂನ್ ಆರಂಭದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಹೊಸ ಕಾರು ಖರೀದಿಗಾಗಿ ಪ್ರಮುಖ ಹ್ಯುಂಡೈ ಡೀಲರ್ಸ್‌ಗಳು ಗ್ರಾಹಕರಿಂದ ಬುಕ್ಕಿಂಗ್ ಸ್ವಿಕರಿಸುತ್ತಿದ್ದಾರೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಖರೀದಿಗಾಗಿ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಹ್ಯುಂಡೈ ಕಂಪನಿಯು ಹೊಸ ಅಲ್ಕಾಜರ್ ಕಾರು ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸಲಿದ್ದು, ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಪ್ರಮುಖ ಡೀಲರ್ಸ್‌ಗಳಲ್ಲಿ ಆಸಕ್ತ ಗ್ರಾಹಕರು ರೂ.50 ಸಾವಿರ ಮುಂಗಡ ಪಾವತಿಸುತ್ತಿದ್ದಾರೆ. ಹೊಸ ಕಾರು ಕುರಿತು ಪ್ರಮುಖ ಡೀಲರ್ಸ್‌ಗಳಿಗೆ ದಿನಂಪ್ರತಿ ನೂರಾರು ಗ್ರಾಹಕರು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕೆಲವೇ ವಾರಗಳಲ್ಲಿ ಹೊಸ ಕಾರು ವಿತರಣೆ ಆರಂಭವಾಗಲಿದೆ ಎನ್ನಲಾಗಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಖರೀದಿಗಾಗಿ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಹೊಸ ಕಾರು ಬಿಡುಗಡೆಯನ್ನು ಕೋವಿಡ್ ಪರಿಣಾಮ ಮುಂದೂಡಿಕೆ ಮಾಡಲಾಗಿದ್ದರೂ ಕಾರ್ಯಕ್ಷಮತೆ ಕುರಿತಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಮುಂದುವರಿಸಿದ್ದು, ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿ ಹೊಸ ಅಲ್ಕಾಜರ್ ಕಾರು ಮಾದರಿಯನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಖರೀದಿಗಾಗಿ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಅಲ್ಕಾಜರ್ ಕಾರು ಕ್ರೆಟಾ ಕಾರಿಗಿಂತಲೂ ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಮಾರಾಟಗೊಳ್ಳಲಿದ್ದು, ವಿಸ್ತರಿತ ಕ್ಯಾಬಿನ್‌ ಮೂಲಕ ಮೂರು ಸಾಲಿನ ಆಸನಗಳೊಂದಿಗೆ 7 ಸೀಟರ್ ಸೌಲಭ್ಯವನ್ನು ಅಚ್ಚುಕಟ್ಟಾದ ಜೋಡಣೆ ಹೊಂದಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಖರೀದಿಗಾಗಿ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಹೈ ಎಂಡ್ ಮಾದರಿಯಾಗಿ 6 ಸೀಟರ್ ಆವೃತ್ತಿಯು ಮಾರಾಟಗೊಳ್ಳಲಿದ್ದು, ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದೆ. ಅಲ್ಕಾಜರ್ ಕಾರಿನ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದ್ದು, ಹಿಂಬದಿಯ ಸವಾರರಿಗೂ ಆರಾಮದಾಯಕ ಪ್ರಯಾಣಕ್ಕಾಗಿ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳನ್ನು ನೀಡಲಾಗಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಖರೀದಿಗಾಗಿ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಇತ್ತೀಚೆಗೆ ಪ್ರಮುಖ ಕಾರು ಕಂಪನಿಗಳು 5 ಸೀಟರ್ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲಿ 5 ಸೀಟರ್ ಜೊತೆಗೆ 7 ಸೀಟರ್ ಮಾದರಿಯನ್ನು ಪರಿಚಯಿಸುತ್ತಿರುವ ಅಲ್ಕಾಜರ್ ಬಿಡುಗಡೆಗೆ ಪ್ರಮುಖ ಕಾರಣವಾಗಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಖರೀದಿಗಾಗಿ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಹ್ಯುಂಡೈ ಕಂಪನಿಯು ಹೊಸ ಅಲ್ಕಾಜರ್ ಕಾರಿನಲ್ಲಿ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ನೀಡುತ್ತಿದ್ದು, ಹೈ ಎಂಡ್ ಮಾದರಿಗಳಲ್ಲಿ 2.0-ಲೀಟರ್ ಎಂಜಿನ್ ಮತ್ತು 1.5-ಲೀಟರ್ ಎಂಜಿನ್ ಜೋಡಣೆ ಮಾಡಲಾಗಿದ್ದು, 2.0-ಲೀಟರ್ ಎಂಜಿನ್ ಮಾದರಿಯನ್ನು ಟ್ಯುಸಾನ್ ಮತ್ತು ಎಲಾಂಟ್ರಾ ಮಾದರಿಗಳಲ್ಲಿ ಬಳಕೆ ಮಾಡಲಾಗುತ್ತಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಖರೀದಿಗಾಗಿ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

1.5-ಲೀಟರ್ ಪೆಟ್ರೋಲ್ ಮಾದರಿಯನ್ನು ಕ್ರೆಟಾ ಮಾದರಿಯಿಂದ ಪಡೆದುಕೊಳ್ಳಲಾಗಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 2.0-ಲೀಟರ್ ಮಾದರಿಯು 159-ಬಿಎಚ್‌ಪಿ, 192-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಎಂಜಿನ್ ಮಾದರಿಯು 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಖರೀದಿಗಾಗಿ ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಆರಂಭ

ಹೊಸ ಅಲ್ಕಾಜರ್ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಎಂಜಿನ್ ಆಯ್ಕೆಯೊಂದಿಗೆ ಫುಲ್ ಸೈಜ್ ಕಾರು ಖರೀದಿದಾರರನ್ನು ಸೆಳೆಯಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14 ಲಕ್ಷದಿಂದ ರೂ.19 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.

More from DriveSpark

Article Published On: Wednesday, May 12, 2021, 17:08 [IST]
English summary
Hyundai Dealerships Have Started Accepting Unofficial Bookings For Alcazar SUV. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+