ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರಗಳನ್ನು ನೀಡಿದ ಹ್ಯುಂಡೈ

ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕೂಡಾ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರಗಳನ್ನು ನೀಡಿದ ಹ್ಯುಂಡೈ

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯ ಸರ್ಕಾರಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.

ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರಗಳನ್ನು ನೀಡಿದ ಹ್ಯುಂಡೈ

ವೈರಸ್ ಹರಡುವಿಕೆ ತೀವ್ರವಾಗಿರುವುದರಿಂದ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ವಿವಿಧ ರಾಜ್ಯ ಸರ್ಕಾರಗಳ ಪ್ರಯತ್ನಕ್ಕೆ ಆಟೋ ಮೊಬೈಲ್ ಕಂಪನಿಗಳು ಸಾಕಷ್ಟು ಸಹಕಾರ ನೀಡುತ್ತಿದೆ.

ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರಗಳನ್ನು ನೀಡಿದ ಹ್ಯುಂಡೈ

ಆರ್ಥಿಕ ಸಂಕಷ್ಟದ ನಡುವೆಯೂ ಆಟೋ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡುತ್ತಿದ್ದು, ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳಲ್ಲಿ ಒಂದಾಗಿರುವ ಹ್ಯುಂಡೈ ಮೋಟಾರ್ಸ್ ಕೂಡಾ ಕೋವಿಡ್ ನಿಯಂತ್ರಣಕ್ಕಾಗಿ ಹಲವಾರು ರೀತಿಯ ನೆರವು ನೀಡಿದೆ.

ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರಗಳನ್ನು ನೀಡಿದ ಹ್ಯುಂಡೈ

ಕಳೆದ ವರ್ಷ ಕೋವಿಡ್ ಹೆಚ್ಚಳವಾಗಿದ್ದ ಸಂದರ್ಭದಲ್ಲಿ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ಸುಮಾರು ರೂ. 15 ಕೋಟಿ ಆರ್ಥಿಕ ನೆರವು ನೀಡಿದ್ದ ಹ್ಯುಂಡೈ ಕಂಪನಿಯು ಇದೀಗ 2ನೇ ಅಲೆಯ ಸಂದರ್ಭದಲ್ಲೂ ವಿವಿಧ ರೀತಿಯ ಸಹಕಾರ ನೀಡುತ್ತಿದ್ದು, ಆಕ್ಸಿಜನ್ ಉತ್ಪಾದನೆಗೆ ಸಹಕರಿಸಿರುವುದಲ್ಲದೆ ತಮಿಳುನಾಡು ಸರ್ಕಾರಕ್ಕೆ ರೂ.5 ಕೋಟಿ ದೇಣಿಗೆ ನೀಡಿದೆ.

ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರಗಳನ್ನು ನೀಡಿದ ಹ್ಯುಂಡೈ

ಹಾಗೆಯೇ ವೈದ್ಯಕೀಯ ಸೇವೆಗಳನ್ನು ಸರಳಗೊಳಿಸಲು ಆರೋಗ್ಯ ಕೇಂದ್ರಗಳಿಗೆ ವೆಂಟಿಲೇಟರ್ ಮತ್ತು ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರಗಳನ್ನು ಸಹ ದೇಣಿಗೆ ನೀಡಲಾಗುತ್ತಿದ್ದು, ನಿನ್ನೆಯಷ್ಟೇ ಶ್ರೀಪೆರಂಬೂರು ಜಿಲ್ಲಾಸ್ಪತ್ರೆಗಾಗಿ 50 ಆಕ್ಸಿಜನ್ ಕಾನ್ಸನ್ಟ್ರೇಟರ್ ವಿತರಣೆ ಮಾಡಲಾಯ್ತು.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರಗಳನ್ನು ನೀಡಿದ ಹ್ಯುಂಡೈ

ಇನ್ನು ಕೋವಿಡ್ ವಿರುದ್ದದ ಹೋರಾಟದಲ್ಲಿ ಆರಂಭದಿಂದಲೂ ವಿವಿಧ ಹಂತಗಳಲ್ಲಿ ವಿವಿಧ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಕ್ಕೆ ಹಣಕಾಸಿನ ಜೊತೆ ವೈದ್ಯಕೀಯ ಸೇವೆಗಳ ನೆರವು ನೀಡಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಇದೀಗ ತಮಿಳುನಾಡು ಸರ್ಕಾರಕ್ಕೆ ಹೆಚ್ಚಿನ ಮಟ್ಟದ ಹಣಕಾಸು ನೆರವು ನೀಡಿದೆ.

ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರಗಳನ್ನು ನೀಡಿದ ಹ್ಯುಂಡೈ

ತಮಿಳುನಾಡಿನಲ್ಲಿ ತನ್ನ ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಸ್ಥಳೀಯ ಆಡಳಿತ ವ್ಯವಸ್ಥೆಗೆ ಹೆಚ್ಚಿನ ಮಟ್ಟದ ನೆರವು ಘೋಷಣೆ ಮಾಡಿದ್ದು, ಅಗತ್ಯವಿದ್ದಲ್ಲಿ ಇನ್ನು ಹೆಚ್ಚಿನ ಮಟ್ಟದ ನೆರವು ನೀಡಲು ಕಂಪನಿ ಬದ್ದವಾಗಿದೆ ಎಂದಿದೆ.

MOST READ: ತಾಯಿಯ ಸಾವಿನ ಸುದ್ದಿ ಕೇಳಿಯೂ ಕರ್ತವ್ಯ ಮುಂದುವರೆಸಿದ ಆಂಬ್ಯುಲೆನ್ಸ್ ಚಾಲಕ

ಆರೋಗ್ಯ ಕೇಂದ್ರಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್ ಯಂತ್ರಗಳನ್ನು ನೀಡಿದ ಹ್ಯುಂಡೈ

ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿಯಲ್ಲಿ ಹ್ಯುಂಡೈ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಮಟ್ಟದ ನೆರವು ನೀಡಿದ್ದು, ಕೆಲವು ಕಂಪನಿಗಳು ಹಣಕಾಸು ನೆರವು ನೀಡಿದ್ದಲ್ಲಿ ಇನ್ನು ಕೆಲವು ವಾಹನ ಕಂಪನಿಗಳು ವೈದ್ಯಕೀಯ ಸೇವೆಗಳನ್ನು ಉನ್ನತೀಕರಿಸಲು ವೆಂಟಿಲೇಟರ್ ಉತ್ಪಾದನೆ ಮತ್ತು ಆಕ್ಸಿಜನ್ ಉತ್ಪಾದನೆಗೆ ಸಹಕಾರಿಯಾಗುತ್ತಿವೆ.

Article Published On: Friday, May 28, 2021, 17:14 [IST]
English summary
Hyundai has donated 50 oxygen concentrators to the Tamil Nadu Government. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+