ಕೋವಿಡ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಹ್ಯುಂಡೈ
ಲಾಕ್‌ಡೌನ್ ಅವಧಿಯಲ್ಲಿ ಕೊನೆಗೊಳ್ಳಲಿರುವ ವಾಹನಗಳ ವಾರಂಟಿ ಅವಧಿಯನ್ನು ಬಹುತೇಕ ವಾಹನ ತಯಾಕರ ಕಂಪನಿಗಳು ವಿಸ್ತರಣೆ ಮಾಡಿದ್ದು, ಹೊಸ ವಾಹನಗಳ ನಿಗದಿತ ಅವಧಿಯ ಸೇವೆಗಳನ್ನು ಪಡೆಯಲು ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ವಾರಂಟಿ ಅವಧಿಯನ್ನು ವಿಸ್ತರಿಸಲಾಗುತ್ತಿದೆ.

ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ವಾಹನ ಮಾರಾಟಕ್ಕೆ ಕೆಲವು ಕಡೆಗಳಲ್ಲಿ ಷರತ್ತು ಬದ್ದ ಅವಕಾಶಗಳಿದ್ದರೂ ಗ್ರಾಹಕರ ಸೇವೆಗಳನ್ನು ಪೂರೈಸುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಸವಾಲಿನ ಕೆಲಸವಾಗಿದೆ. ಆದರೆ ಲಾಕ್‌ಡೌನ್ ಅವಧಿಯಲ್ಲಿ ಮುಕ್ತಾಯಗೊಳ್ಳಲಿರುವ ನಿಗದಿತ ಅವಧಿಯ ಸೇವೆಗಳನ್ನು ಪಡೆದುಕೊಳ್ಳದ ವಾಹನಗಳ ವಾರಂಟಿ ಆಫರ್ ಮುಗಿದುಹೋಗಲಿದ್ದು, ವಾರಂಟಿ ಅವಧಿ ಮುಕ್ತಾಯದಿಂದ ಉಚಿತ ಸೇವೆಗಳನ್ನು ಕಳೆದುಕೊಳ್ಳಲಿರುವ ಗ್ರಾಹಕರಿಗೆ ಹ್ಯುಂಡೈ ಸೇರಿದಂತೆ ಬಹುತೇಕ ವಾಹನ ತಯಾರಕ ಕಂಪನಿಗಳು ಸಿಹಿಸುದ್ದಿ ಪ್ರಕಟಿಸಿವೆ.

ಲಾಕ್‌ಡೌನ್ ಸಂದರ್ಭದಲ್ಲಿ ವಾಹನ ವಾರಂಟಿ ಮುಕ್ತಾಯವಾಗುವುದರಿಂದ ಗ್ರಾಹಕರ ಸೇವೆಗಳು ಕಡಿತವಾಗುವುದನ್ನು ತಪ್ಪಿಸಲು ಗ್ರಾಹಕರಿಗೆ ಹೆಚ್ಚುವರಿಯಾಗಿ ಎರಡು ತಿಂಗಳ ಕಾಲ ವಾರಂಟಿ ಅವಧಿಯನ್ನು ವಿಸ್ತರಿಸಲಾಗಿದೆ.

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯಗೊಳ್ಳಬೇಕಿರುವ ಹೊಸ ಕಾರುಗಳ ವಾರಂಟಿ ಅವಧಿಯನ್ನು ಜುಲೈ 31ರ ತನಕ ಮುಂದೂಡಲಾಗಿದ್ದು, ಲಾಕ್‌ಡೌನ್ ಸಂದರ್ಭದಲ್ಲಿ ವಾರಂಟಿ ಮುಕ್ತಾಯಗೊಳ್ಳುವುದನ್ನು ತಪ್ಪಿಸಲು ವಾರಂಟಿ ವಿಸ್ತರಿಸಲಾಗಿದೆ.

ವಾರಂಟಿ ಅವಧಿ ವಿಸ್ತರಣೆಯಾಗಿರುವುದರಿಂದ ವಾರಂಟಿ ಪ್ಯಾಕೇಜ್‌ನಲ್ಲಿರುವ ಸೇವೆಗಳನ್ನು ಪರಿಸ್ಥಿತಿ ತುಸು ಸುಧಾರಣೆಗೊಂಡ ನಂತರ ಪಡೆದುಕೊಳ್ಳಬಹುದಾಗಿದ್ದು, ವಾರಂಟಿ ಅವಧಿಯನ್ನು ವಿಸ್ತರಿಸಿರುವುದು ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿದೆ. ವಾಹನ ಖರೀದಿ ಮತ್ತು ಗ್ರಾಹಕರಿಗೆ ಸೇವೆಗಳಿಗೆ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದಿರುವ ಹ್ಯುಂಡೈ ಕಂಪನಿಯು ಅಗತ್ಯ ಸೇವೆಗಳನ್ನು ಮಾತ್ರ ಗ್ರಾಹಕರ ಮನೆ ಬಾಗಿಲುಗಳಿಗೆ ತಲುಪಿಸುತ್ತಿದ್ದು, ತಾತ್ಕಾಲಿಕವಾಗಿ ಕಾರು ಉತ್ಪಾದನೆ ಬಂದ್ ಮಾಡಿದರೂ ಹೊಸ ವಾಹನಗಳ ಖರೀದಿ ಮತ್ತು ವಿತರಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿಲ್ಲ.

ವಾಹನ ಖರೀದಿ ಪ್ರಕ್ರಿಯೆಗಳು ಎಂದಿನಂತೆ ಕ್ಲಿಕ್ ಟು ಬೈ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಮುಂದುವರಿದ್ದು, ಪರಿಸ್ಥಿತಿಗೆ ಅನುಗುಣವಾಗಿ ವಾಹನ ವಿತರಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.ನ

ಹೊಸ ವಾಹನಗಳ ಮಾರಾಟವು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಕೆ ಆಗುತ್ತಿದ್ದರೂ ಕರೋನಾ ವೈರಸ್ ಪರಿಣಾಮದಿಂದಾಗಿ ಹೊಸ ವಾಹನಕ್ಕೆ ಅಡಚಣೆ ಎದುರಾಗುತ್ತಿದ್ದು, ವಾಹನಗಳ ಮಾರಾಟವನ್ನು ಸರಳ ಮತ್ತು ಸುರಕ್ಷಿತವಾಗಿಸಲು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಸಾಕಷ್ಟು ಬಳಕೆಯಾಗುತ್ತಿವೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೊಸ ವಾಹನ ಖರೀದಿಗಾಗಿ ಬಹುತೇಕ ಗ್ರಾಹಕರು ನೇರವಾಗಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಸಾಮಾನ್ಯವಾಗಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮ ಗ್ರಾಹಕರನ್ನು ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಖರೀದಿ ಪ್ರಕ್ರಿಯೆಯತ್ತ ಸೆಳೆಯಲು ಆಟೋ ಕಂಪನಿಗಳು ಮಾಡಿದ ಹೊಸ ಪ್ರಯತ್ನವು ಇಂದು ಸಾಕಷ್ಟು ಪ್ರಯೋಜಕಾರಿಯಾಗಿದೆ.

ವೈರಸ್ ಹರಡುವಿಕೆಯ ಸಂದರ್ಭದಲ್ಲಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಪ್ರಕ್ರಿಯೆಯನ್ನು ಸರಳಗೊಳಿಸಲು ಆನ್‌ಲೈನ್ ಮಾರಾಟ ಮಳಿಗೆಗಳು ಸಾಕಷ್ಟು ಸಹಕಾರಿಯಾಗಿದ್ದು, ಬಳಕೆದಾರರ ಸಂಖ್ಯೆಯಲ್ಲೂ ಕೂಡಾ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕೋವಿಡ್ 19 ಹರಡುವಿಕೆಗೂ ಮೊದಲೇ ಹಲವಾರು ಆಟೋ ಕಂಪನಿಗಳು ಆನ್‌ಲೈನ್ ಪ್ಲ್ಯಾಟ್ ತೆರೆದಿದ್ದರೂ ಬಳಕೆದಾರರ ಸಂಖ್ಯೆಯು ತೀರಾ ವಿರಳವಾಗಿತ್ತು. ಆದರೆ ಕರೋನಾ ವೈರಸ್ ಹೆಚ್ಚಳವಾಗುತ್ತಿದ್ದಂತೆ ಸಾಮಾಜಿಕ ಅಂತರ ಅಗತ್ಯವಾಯಿತೋ ಆಗಿನಿಂದ ವಾಹನ ಮಾರಾಟಕ್ಕಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳ ಬಳಕೆಯು ಹೆಚ್ಚಳವಾಗುತ್ತಿದೆ.


Click it and Unblock the Notifications








