ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ವಾಹನಗಳ ಉತ್ಪಾದನಾ ವೆಚ್ಚ ನಿರ್ವಹಣೆಗಾಗಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ತಮ್ಮ ವಿವಿಧ ವಾಹನ ಮಾದರಿಗಳ ಬೆಲೆಯನ್ನು ಹೆಚ್ಚಿಸುತ್ತಿದ್ದು, ಹ್ಯುಂಡೈ ಇಂಡಿಯಾ ಕೂಡಾ ತನ್ನ ಜನಪ್ರಿಯ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದೆ.

ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹ್ಯುಂಡೈ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ವಾಹನಗಳ ಬಿಡಿಭಾಗಗಳ ಬೆಲೆಯಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಬೆಲೆ ಏರಿಕೆಗೆ ನಿರ್ಧರಿಸಿದ್ದು, ಹ್ಯುಂಡೈ ಮೋಟಾರ್ಸ್ ಕೂಡಾ ಕ್ರೆಟಾ ಕಾರು ಮಾದರಿಯ ಬೆಲೆಯಲ್ಲಿ ಶೇ.1 ರಿಂದ ಶೇ. 1.50 ರಷ್ಟು ಬೆಲೆ ಹೆಚ್ಚಿಸಿದೆ. ಕ್ರೆಟಾ ಹೊಸ ದರ ಪಟ್ಟಿ ಪ್ರಕಟದ ನಂತರ ಕಾರಿನ ಬೆಲೆಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕನಿಷ್ಠ ರೂ. 12 ಸಾವಿರದಿಂದ ಗರಿಷ್ಠ ರೂ. 19 ಸಾವಿರ ತನಕ ಬೆಲೆ ಹೆಚ್ಚಳ ಮಾಡಿದೆ.

ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹ್ಯುಂಡೈ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

ಪರಿಸ್ಕೃತ ದರ ಪಟ್ಟಿಯಲ್ಲಿ ಕ್ರೆಟಾ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಬೆಲೆಯು ಇದೀಗ ರೂ. 10.16 ಲಕ್ಷದಿಂದ ಟಾಪ್ ಎಂಡ್ ಕಾರಿನ ಬೆಲೆಯು ರೂ.17.87 ಲಕ್ಷಕ್ಕೆ ಏರಿಕೆಯಾಗಿದೆ.

ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹ್ಯುಂಡೈ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

ಹ್ಯುಂಡೈ ಮೋಟಾರ್ಸ್ ಕಂಪನಿಯು ಕ್ರೆಟಾ ಹೊಸ ದರವನ್ನು ಅಗಸ್ಟ್ 1ರಿಂದಲೇ ಅನ್ವಯವಾಗುವಂತೆ ಅಧಿಕೃತವಾಗಿ ಜಾರಿಗೊಳಿಸಿದ್ದು, ಇದು ಈ ವರ್ಷದ ಮೂರನೇ ಬೆಲೆ ಹೆಚ್ಚಳವಾಗಿದೆ.

ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹ್ಯುಂಡೈ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

2020ರ ಮಾರ್ಚ್‌ನಲ್ಲಿ ಬಿಡುಗಡೆಯಾಗಿದ್ದ ನ್ಯೂ ಜನರೇಷನ್ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಎಮಿಷನ್ ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಮಾರಾಟವನ್ನು ಹೊಂದಿದೆ.

ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹ್ಯುಂಡೈ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಹೊಸ ಎಮಿಷನ್ ಜಾರಿ ನಂತರ ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ.

ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹ್ಯುಂಡೈ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹ್ಯುಂಡೈ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡು ಯಶಸ್ವಿ ಐದು ವರ್ಷಗಳನ್ನು ಪೂರೈಸಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಮಾರಾಟದಲ್ಲಿ ಇಂದಿಗೂ ಕೂಡಾ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹ್ಯುಂಡೈ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

ಆಕರ್ಷಕ ಬೆಲೆ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ವಿನೂತನ ವಿನ್ಯಾಸದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಹೊಂದಿರುವ ಕ್ರೆಟಾ ಕಾರು ಕಾಲ ಕಾಲಕ್ಕೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳುತ್ತಾ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.

ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹ್ಯುಂಡೈ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

ಕ್ರೆಟಾ ಕಾರು ಭಾರತದಲ್ಲಿ ಇದುವರೆಗೆ ಬರೋಬ್ಬರಿ 5 ಲಕ್ಷ ಯುನಿಟ್ ಮಾರಾಟಗೊಳ್ಳುವ ಮೂಲಕ ಹ್ಯುಂಡೈ ಕಂಪನಿಗೆ ಭಾರೀ ಪ್ರಮಾಣದ ಆದಾಯ ತಂದುಕೊಟ್ಟಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹ್ಯುಂಡೈ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

ಹ್ಯುಂಡೈ ಕಂಪನಿಯು ಕ್ರೆಟಾ ಕಾರಿನ ಮಧ್ಯಮ ಕ್ರಮಾಂಕದಲ್ಲಿ ಕೆಲವು ಬದಲಾವಣೆ ಪರಿಚಯಿಸುವ ಮೂಲಕ ಎಸ್ಎಕ್ಸ್ ವೆರಿಯೆಂಟ್ ಬೇಡಿಕೆ ಹೆಚ್ಚಿಸಲು ಎಸ್ಎಕ್ಸ್ ಎಕ್ಸಿಕ್ಯೂಟಿವ್ ಬಿಡುಗಡೆ ಮಾಡಲಾಗಿದ್ದು, ಹೊಸ ಆವೃತ್ತಿಯು ಪೆಟ್ರೋಲ್(ರೂ. 13.34 ಲಕ್ಷ) ಮತ್ತು ಡೀಸೆಲ್( ರೂ. 14.30 ಲಕ್ಷ) ಆವೃತ್ತಿಗಳಲ್ಲಿ ಖರೀದಿ ಮಾಡಬಹುದಾಗಿದೆ.

ವರ್ಷದಲ್ಲಿ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಹ್ಯುಂಡೈ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ

ಸ್ಟ್ಯಾಂಡರ್ಡ್ ಎಸ್ಎಕ್ಸ್ ಮಾದರಿಗಿಂತಲೂ ಕಡಿಮೆ ಬೆಲೆಗಾಗಿ ಹೊಸ ಆವೃತ್ತಿಯಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್ ಕೈಬಿಡಲಾಗಿದ್ದು, ಎಸ್ ಮತ್ತು ಎಸ್ಎಕ್ಸ್ ನಡುವಿನ ಬೆಲೆ ಅಂತರ ಸರಿದೂಗಿಸಲು ಎಸ್ಎಕ್ಸ್ ಎಕ್ಸಿಕ್ಯೂಟಿವ್ ಬಿಡುಗಡೆ ಮಾಡಲಾಗಿದೆ.

Article Published On: Thursday, August 5, 2021, 13:00 [IST]
English summary
Hyundai hiked creta suv price here is the new price list details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+