ವರ್ಷದ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ ನ್ಯೂ ಜನರೇಷನ್ ಹ್ಯುಂಡೈ ಐ20

ಭಾರತೀಯ ಆಟೋಮೊಬೈಲ್ ಕ್ಷೇತ್ರದ ಪ್ರತಿಷ್ಠಿತ 16ನೇ ಇಂಡಿಯನ್ ಕಾರ್ ಆಫ್ ದಿ ಇಯರ್(ICOTY) ಪ್ರಶಸ್ತಿ ಪ್ರಕಟಿಸಲಾಗಿದ್ದು, 2021ರ ಆವೃತ್ತಿಯ ಪ್ರತಿಷ್ಠಿತ ಪ್ರಶಸ್ತಿಯು ನ್ಯೂ ಜನರೇಷನ್ ಹ್ಯುಂಡೈ ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಪಾಲಾಗಿದೆ.

ವರ್ಷದ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ ನ್ಯೂ ಜನರೇಷನ್ ಹ್ಯುಂಡೈ ಐ20

ಹೊಸ ವಾಹನ ಕಾರ್ಯಕ್ಷಮತೆ, ಗ್ರಾಹಕರ ವಿಶ್ವಾಸ, ಸುಧಾರಿತ ತಂತ್ರಜ್ಞಾನ ಅಳವಡಿಕೆಯ ಅಂಶಗಳ ಆಧಾರದ ಮೇಲೆ ಇಂಡಿಯನ್ ಕಾರ್ ಆಫ್ ದಿ ಇಯರ್ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಮಧ್ಯಮ ಕ್ರಮಾಂಕದ ಕಾರುಗಳ ಪೈಕಿ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳು ಮತ್ತು ಗ್ರಾಹಕರ ವಿಶ್ವಾಸವನ್ನು ಗಳಿಸುವಲ್ಲಿ ಯಶಸ್ವಿಯಾಗಿರುವ ಐ20 ಹ್ಯಾಚ್‌ಬ್ಯಾಕ್ ಕಾರು ಮಾದರಿಗೆ 16ನೇ ಆವೃತ್ತಿಯ ಇಂಡಿಯನ್ ಕಾರ್ ಆಫ್ ಇಯರ್ ಪ್ರಶಸ್ತಿ ನೀಡಲಾಗಿದೆ.

ವರ್ಷದ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ ನ್ಯೂ ಜನರೇಷನ್ ಹ್ಯುಂಡೈ ಐ20

ಇಂಡಿಯನ್ ಕಾರ್ ಆಫ್ ಇಯರ್ ಪ್ರಶಸ್ತಿ ರೇಸ್‌ನಲ್ಲಿದ್ದ ಪ್ರಮುಖ ಕಾರುಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದುಕೊಂಡಿರುವ ನ್ಯೂ ಜನರೇಷನ್ ಐ20 ಕಾರು ಮಾದರಿಯು ಹೊಸ ಆವೃತ್ತಿಯೊಂದಿಗೆ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ICOTY ಪ್ರಶಸ್ತಿಯು ಮುಂಬರುವ ದಿನಗಳಲ್ಲಿ ಹೊಸ ಕಾರಿಗೆ ಮತ್ತಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಗಳಿವೆ.

ವರ್ಷದ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ ನ್ಯೂ ಜನರೇಷನ್ ಹ್ಯುಂಡೈ ಐ20

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಐ20 ಕಾರು ಮಾದರಿಯು ನ್ಯೂ ಜನರೇಷನ್ ಮಾದರಿಯ ಬೆಸ್ಟ್ ಇನ್ ಸೆಗ್ಮೆಂಟ್ ಫೀಚರ್ಸ್ ಹೊಂದಿದ್ದು, ಆಕರ್ಷಕ ಎಕ್ಸ್‌ಟಿರಿಯರ್ ಡಿಸೈನ್‌ನೊಂದಿಗೆ ಏರೋ ಡೈನಾಮಿಕ್ ಸ್ಪೋರ್ಟಿ ಲುಕ್ ಹೊಂದಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ವರ್ಷದ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ ನ್ಯೂ ಜನರೇಷನ್ ಹ್ಯುಂಡೈ ಐ20

ಹೊಸ ತಲೆಮಾರಿನ ಐ20 ಕಾರು ಮಾದರಿಯು ಬಿಡುಗಡೆಯ ನಂತರ ಇದುವರೆ 40 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ಮ್ಯಾಗ್ನಾ, ಸ್ಪೋರ್ಟ್ಜ್, ಆಸ್ಟಾ ಮತ್ತು ಆಸ್ಟಾ ಆಪ್ಷನ್ ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.79 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 11.32 ಲಕ್ಷ ಬೆಲೆ ಹೊಂದಿದೆ.

ವರ್ಷದ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ ನ್ಯೂ ಜನರೇಷನ್ ಹ್ಯುಂಡೈ ಐ20

ಹೊಸ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಒಂದು ಡೀಸೆಲ್ ಮತ್ತು ಎರಡು ಪೆಟ್ರೋಲ್ ಎಂಜಿನ್‌ಗಳ ಆಯ್ಕೆ ನೀಡಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.0-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಕಪ್ಪಾ ಪೆಟ್ರೋಲ್ ಮತ್ತು 1.5-ಲೀಟರ್ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದೆ.

ವರ್ಷದ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ ನ್ಯೂ ಜನರೇಷನ್ ಹ್ಯುಂಡೈ ಐ20

1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮಾದರಿಯು ಡಿಸಿಟಿ ಅಥವಾ ಆರು-ಸ್ಪೀಡಿನ ಐಎಂಟಿ ಟ್ರಾನ್ಸ್ ಮಿಷನ್‌ನೊಂದಿಗೆ 120-ಬಿಹೆಚ್‌ಪಿ ಉತ್ಪಾದಿಸುತ್ತದೆ. 1.2-ಲೀಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಹೊಂದಿರುವ ಎನ್‌ಎ ಕಪ್ಪಾ ಎಂಜಿನ್ ಮಾದರಿಯು ಐದು-ಸ್ಪೀಡಿನ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 83-ಬಿಹೆಚ್‌ಪಿ ಪವರ್ ಉತ್ಪಾದಿಸಲಿದ್ದರೆ, 1.5-ಲೀಟರಿನ ಡೀಸೆಲ್ ಎಂಜಿನ್ ಮಾದರಿಯು ಆರು-ಸ್ಪೀಡಿನ ಮ್ಯಾನ್ಯುವಲ್ ಗೇರ್‌ಬಾಕ್ಸ್‌ ಆಯ್ಕೆಯೊಂದಿಗೆ 100-ಬಿಹೆಚ್‌ಪಿ ಮತ್ತು 240-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ವರ್ಷದ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ ನ್ಯೂ ಜನರೇಷನ್ ಹ್ಯುಂಡೈ ಐ20

ಹೊಸ ತಲೆಮಾರಿನ ಐ20 ಕಾರು ಆಕರ್ಷಕ ಎಕ್ಸ್‌ಟಿರಿಯರ್ ಡಿಸೈನ್‌ನೊಂದಿಗೆ ಏರೋ ಡೈನಾಮಿಕ್ ಸ್ಪೋರ್ಟಿ ಲುಕ್ ಹೊಂದಿದ್ದು, ಹೊಸ ಕಾರು ಹಳೆಯ ಮಾದರಿಗಿಂತಲೂ ಹೆಚ್ಚಿನ ಮಟ್ಟದ ವೀಲ್ಹ್ ಬೆಸ್‌ನೊಂದಿಗೆ ಆರಾಮದಾಯಕ ಸ್ಥಳಾವಕಾಶ ಹೊಂದಿದೆ.

ವರ್ಷದ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ ನ್ಯೂ ಜನರೇಷನ್ ಹ್ಯುಂಡೈ ಐ20

ಈ ಮೂಲಕ ಹಳೆಯ ಮಾದರಿಗಿಂತಲೂ ಹೆಚ್ಚು ಸ್ಪೋರ್ಟಿ ಮತ್ತು ಶಾರ್ಪ್ ಎಡ್ಜ್ ಡಿಸೈನ್ ಹೊಂದಿರುವ ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಮಾರುತಿ ಸುಜುಕಿ ಬಲೆನೊ ಮತ್ತು ಟಾಟಾ ಆಲ್‌ಟ್ರೊಜ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡುತ್ತಿದ್ದು, ಸೆಗ್ಮೆಂಟ್ ಇನ್ ಫೀಚರ್ಸ್‌ಗಳಲ್ಲಿ ಪ್ರತಿಸ್ಪರ್ಧಿ ಕಾರುಗಳಿಂತಲೂ ಹೊಸ ಐ20 ಸಾಕಷ್ಟು ಸುಧಾರಿತ ಅಂಶಗಳನ್ನು ಪಡೆದುಕೊಂಡಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ವರ್ಷದ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿದ ನ್ಯೂ ಜನರೇಷನ್ ಹ್ಯುಂಡೈ ಐ20

ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿರುವ ಐ20 ಕಾರು ಮಾದರಿಯು 2014ರಿಂದಲೂ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಬಾರಿ ಉನ್ನತೀಕರಣಗೊಳ್ಳುವ ಮೂಲಕ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, ಇದೀಗ ಮೂರನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ರಸ್ತೆಗಿಳಿದಿದೆ.

Most Read Articles

Kannada
English summary
Hyundai I20 Attains 2021 Indian Car Of The Year Award. Read in kannada.
Story first published: Saturday, February 27, 2021, 17:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X