Just In
- 1 hr ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 1 hr ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 2 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 4 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
Don't Miss!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- News ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಉಳುವಿಗಾಗಿ ಸೆಣಸಾಟ: ಕಾಂಗ್ರೆಸ್ ಅವಕಾಶಕ್ಕಾಗಿ ಹೋರಾಟ
- Movies ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪರ್ಫಾಮೆನ್ಸ್ ಪ್ರಿಯರಿಗಾಗಿ i20 N Line ಆವೃತ್ತಿಯನ್ನು ಬಿಡುಗಡೆ ಮಾಡಿದ Hyundai
Hyundai India ಕಂಪನಿಯು i20 ಪ್ರೀಮಿಯಂ ಹ್ಯಾಚ್ಬ್ಯಾಕ್ ಮಾದರಿಯಲ್ಲಿ ಪರ್ಫಾಮೆನ್ಸ್ ಪ್ರಿಯರಿಗಾಗಿ N Line ವರ್ಷನ್ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.84 ಲಕ್ಷ ಬೆಲೆ ಹೊಂದಿದೆ.
ಸ್ಪೋರ್ಟಿ ಲುಕ್ ಮತ್ತು ಗರಿಷ್ಠ ಮಟ್ಟದ ಪರ್ಫಾಮೆನ್ಸ್ ಹೊಂದಿರುವ Hyundai N Line ಆವೃತ್ತಿಗಳು ಜಾಗತಿಕ ಆಟೋ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕಂಪನಿಯು ಮೊದಲ ಬಾರಿಗೆ ಭಾರತದಲ್ಲೂ ಹೊಸ ಆವೃತ್ತಿಗಳ ಮಾರಾಟಕ್ಕೆ ಚಾಲನೆ ನೀಡಿದೆ. i20 ಹ್ಯಾಚ್ಬ್ಯಾಕ್ ಮಾದರಿಯಲ್ಲಿ ಮೊದಲ ಹಂತವಾಗಿ N Line ಮಾದರಿಯನ್ನು ಬಿಡುಗಡೆ ಮಾಡಿರುವ ಹ್ಯುಂಡೈ ಕಂಪನಿಯು ಹಂತ-ಹಂತವಾಗಿ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಪರಿಚಯಿಸಲಿದೆ.
ಹೊಸ i20 N Line ಕಾರು ಮಾದರಿಯು ಗ್ರಾಹಕರು ತಮ್ಮ ಬೇಡಿಕೆಗೆ ಪ್ರಮುಖ ಮೂರು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಗೇರ್ಬಾಕ್ಸ್ ಆಯ್ಕೆಯನ್ನು ಆಧರಿಸಿ N6 iMT, N8 iMT ಮತ್ತು N8 DCT ಆವೃತ್ತಿಗಳನ್ನು ಹೊಂದಿದೆ.
i20 N Line ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚು ಸ್ಪೋರ್ಟಿ ವಿನ್ಯಾಸಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.75 ಲಕ್ಷ ಬೆಲೆ ಹೊಂದಿದೆ.
ಹೊಸ ಕಾರು ಮಾದರಿಯು ಸ್ಟ್ಯಾಂಡರ್ಡ್ ಮಾದರಿಗಿಂತ ರೂ. 95 ಸಾವಿರದಷ್ಟು ದುಬಾರಿಯಾಗಿದ್ದು, ಪರ್ಫಾಮೆನ್ಸ್ ಮಾದರಿಗೆ ಪೂರಕವಾಗಿ ಹೊಸ ಕಾರಿನಲ್ಲಿ ಹಲವಾರು ಸ್ಪೋರ್ಟಿ ವಿನ್ಯಾಸಗಳನ್ನು ಮತ್ತು ಪ್ರೀಮಿಯಂ ಇಂಟಿರಿಯರ್ ಸೌಲಭ್ಯಗಳನ್ನು ನೀಡಲಾಗಿದೆ.
i20 N Line ಮಾದರಿಯನ್ನು Hyundai ಕಂಪನಿಯು 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರ ಬಿಡುಗಡೆ ಮಾಡಲಿದ್ದು, ಹೊಸ ಕಾರಿನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಟ್ರಾನ್ಸ್ಮಿಷನ್ ಮತ್ತು 6-ಸ್ಪೀಡ್ ಇಂಟಲಿಜೆಂಟ್ ಮ್ಯಾನುವಲ್ ಟ್ರಾನ್ಸ್ಮಿಷನ್ ಆಯ್ಕೆ ಹೊಂದಿರಲಿದೆ.
ಸ್ಟ್ಯಾಂಡರ್ಡ್ ಮಾದರಿಗಿಂತಲೂ ಅತ್ಯುತ್ತಮ ಪರ್ಫಮೆನ್ಸ್ ಹಿಂದಿರುಗಿಸಲಿದ್ದು, i20 N Line ಮಾದರಿಯು 120-ಬಿಎಚ್ಪಿ ಮತ್ತು 172-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಸೊನ್ನೆಯಿಂದ 100 ಕಿ.ಮೀ ಕ್ವಿಕ್ ಸ್ಪೀಡ್ ಪಡೆದುಕೊಳ್ಳುತ್ತದೆ.
ಪರ್ಫಾಮೆನ್ಸ್ ಮಾದರಿಗೆ ಪೂರಕವಾಗಿ ಹೊಸ ಕಾರಿನಲ್ಲಿ ಹಲವಾರು ಸ್ಪೋರ್ಟಿ ವಿನ್ಯಾಸಗಳಿದ್ದು, ಡ್ಯುಯಲ್ ಟೋನ್ ಫ್ರಂಟ್ ಬಂಪರ್, ಸ್ಪೋರ್ಟಿಯಾಗಿರುವ ರೆಡ್ ಆಕ್ಸೆಂಟ್, ಫ್ರಂಟ್ ಫಾಸಿಯಾದಲ್ಲಿ N Line ಬ್ಯಾಡ್ಜ್ ನೀಡಲಾಗಿದೆ.
ಹೊಸ ಕಾರಿನಲ್ಲಿ ಸ್ಪೋರ್ಟಿ ವಿನ್ಯಾಸದ 16-ಇಂಚಿನ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಸೈಡ್ ಗಾರ್ನಿಶ್ ಜೊತೆ ರೆಡ್ ಇನ್ಸರ್ಟ್, ಮುಂಭಾಗದ ಚಕ್ರಗಳಲ್ಲಿ ರೆಡ್ ಬ್ರೇಕ್ ಕ್ಯಾಲಿಪರ್ನೊಂದಿಗೆ ಕಾರಿನ ಹಿಂಬದಿಯಲ್ಲಿ ಸ್ಪೋರ್ಟಿ ಬಂಪರ್, ಡಿಫ್ಯೂಸರ್, ಟ್ವಿನ್ ಎಕ್ಸಾಸ್ಟ್, ಟೈಲ್ ಗೇಡ್ ಸ್ಪಾಯ್ಲರ್, ಟೈಲ್ ಲ್ಯಾಂಪ್ ಜೋಡಣೆಗಾಗಿ ಡಾರ್ಕ್ ಕ್ರೋಮ್ ನೀಡಲಾಗಿದೆ.
ಹೊರಭಾಗದಲ್ಲಿ ಮಾತ್ರವಲ್ಲ ಹೊಸ ಕಾರಿನ ಒಳಭಾಗದಲ್ಲೂ ಹಲವಾರು ಸ್ಪೋರ್ಟಿ ಫೀಚರ್ಸ್ ನೀಡಲಾಗಿದ್ದು, ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೊಸ ಕಾರಿನ ಡ್ಯಾಶ್ಬೋರ್ಡ್ ಆಕರ್ಷಕವಾಗಿದೆ. ಹೊಸ ಕಾರಿನಲ್ಲಿ ಆಲ್ ಬ್ಲ್ಯಾಕ್ ಥೀಮ್ ನೀಡಲಾಗಿದ್ದು, ರೆಡ್ ಆಕ್ಸೆಂಟ್ ಜೊತೆ ಆ್ಯಂಬಿಯೆಂಟ್ ಲೈಟಿಂಗ್ಸ್ ನೀಡಲಾಗಿದೆ.
ಕೆಲವು ಫೀಚರ್ಸ್ಗಳು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಜೋಡಣೆ ಮಾಡಲಾಗಿದ್ದು, 10.25-ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಸಿಂಗಲ್ ಪ್ಯಾನ್ ಸನ್ರೂಫ್, ಬಾಷ್ ಕಂಪನಿಯ 7-ಸ್ಪೀಕರ್ಸ್ ಸೌಂಡ್ ಸಿಸ್ಟಂ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳಿವೆ.
ಸದ್ಯ ಮಾರುಕಟ್ಟೆಯಲ್ಲಿ i20 ಪ್ರೀಮಿಯಂ ಹ್ಯಾಚ್ಬ್ಯಾಕ್ ಮಾದರಿಯು ಮ್ಯಾಗ್ನಾ, ಸ್ಪೋರ್ಟ್ಜ್, ಆಸ್ಟಾ ಮತ್ತು ಆಸ್ಟಾ ಆಪ್ಷನ್ ವೆರಿಯೆಂಟ್ಗಳೊಂದಿಗೆ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.91 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 11.40 ಲಕ್ಷ ಬೆಲೆ ಹೊಂದಿದೆ.
ನ್ಯೂ ಜನರೇಷನ್ i20 ಹ್ಯಾಚ್ಬ್ಯಾಕ್ ಮಾದರಿಯಲ್ಲಿ ಒಂದು ಡೀಸೆಲ್ ಮತ್ತು ಎರಡು ಪೆಟ್ರೋಲ್ ಎಂಜಿನ್ಗಳ ಆಯ್ಕೆ ನೀಡಿದಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.0-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಕಪ್ಪಾ ಪೆಟ್ರೋಲ್ ಮತ್ತು 1.5-ಲೀಟರ್ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದೆ.
ಹೊಸ ತಲೆಮಾರಿನ i20 ಕಾರು ಆಕರ್ಷಕ ಎಕ್ಸ್ಟಿರಿಯರ್ ಡಿಸೈನ್ನೊಂದಿಗೆ ಏರೋ ಡೈನಾಮಿಕ್ ಸ್ಪೋರ್ಟಿ ಲುಕ್ ಹೊಂದಿದ್ದು, ಹೊಸ ಕಾರು ಹಳೆಯ ಮಾದರಿಗಿಂತಲೂ ಹೆಚ್ಚಿನ ಮಟ್ಟದ ವೀಲ್ಹ್ ಬೆಸ್ನೊಂದಿಗೆ ಆರಾಮದಾಯಕವಾದ ಸ್ಥಳಾವಕಾಶ ಹೊಂದಿದೆ.