ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹ್ಯುಂಡೈ ಮೋಟಾರ್ಸ್(Hyundai) ಕಂಪನಿಯು ಹೊಸ ಕಾರು ಮಾರಾಟದಲ್ಲಿ ಹಲವು ತಿಂಗಳಿನಿಂದ ಉತ್ತಮ ಬೇಡಿಕೆ ಕಾಯ್ದುಕೊಳ್ಳುತ್ತಿದ್ದು, ಕೋವಿಡ್ ಪರಿಣಾಮ ತಗ್ಗಿರುವ ಹೊಸ ವಾಹನಗಳ ಮಾರಾಟವನ್ನು ಹಬ್ಬದ ಋತುಗಳಲ್ಲಿ ಸುಧಾರಿಸಲು ವಿವಿಧ ಕೊಡುಗೆಗಳನ್ನು ಪ್ರಕಟಿಸಿದೆ.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಕೋವಿಡ್‌ ಪರಿಣಾಮ ಏರಿಳಿತ ಕಾಣುತ್ತಿರುವ ಹೊಸ ವಾಹನಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಮುಂದಾಗಿರುವ ಪ್ರಮುಖ ಕಾರು ಕಂಪನಿಗಳು ಹಬ್ಬದ ಋತುಗಳಲ್ಲಿ ವಾಹನ ಖರೀದಿದಾರರನ್ನು ಸೆಳೆಯಲು ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಸಹ ನವೆಂಬರ್ ಅವಧಿಯಲ್ಲಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ನೀಡುತ್ತಿದೆ.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ಹ್ಯುಂಡೈ ಕಂಪನಿಯು ಔರಾ, ಗ್ರಾಂಡ್ ಐ10 ನಿಯೋಸ್, ಸ್ಯಾಂಟ್ರೋ ಮತ್ತು ಐ20 ಮತ್ತು ಕಾರುಗಳ ಮೇಲೆ ಉತ್ತಮ ಆಫರ್‌ಗಳನ್ನು ನೀಡಿದೆ.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಎಂಟ್ರಿ ಲೆವಲ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಗ್ರಾಂಡ್ ಐ10 ನಿಯೋಸ್ ಆವೃತ್ತಿಯ ಮೇಲೆ ಹ್ಯುಂಡೈ ಕಂಪನಿಯು ಗರಿಷ್ಠ ರೂ. 50 ಸಾವಿರ ತನಕ ಉಳಿತಾಯ ಮಾಡಬಹುದಾಗಿದ್ದು, ಎಕ್ಸ್‌ಚೆಂಜ್ ಮತ್ತು ಕ್ಯಾಶ್ ಬ್ಯಾಕ್ ಆಫರ್ ಒಳಗೊಂಡಿರಲಿದೆ.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಔರಾ ಕಂಪ್ಯಾಕ್ಟ್ ಸೆಡಾನ್ ಕಾರು ಮಾದರಿಯ ಮೇಲೆ ಹ್ಯುಂಡೈ ಕಂಪನಿಯು ರೂ.50 ಸಾವಿರ ತನಕ ಉಳಿತಾಯಕ್ಕೆ ಅವಕಾಶ ನೀಡಿದ್ದು, ವಾಣಿಜ್ಯ ಬಳಕೆಗಾಗಿ ಖರೀದಿಗೆ ಲಭ್ಯವಿರುವ ಎಕ್ಸೆಂಟ್ ಪ್ರೈಮ್ ಕಾರು ಮಾದರಿಯ ಮೇಲೂ ಗರಿಷ್ಠ ನಗದು ರಿಯಾಯ್ತಿ ಪಡೆದುಕೊಳ್ಳಬಹುದಾಗಿದೆ.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹಾಗೆಯೇ ಹ್ಯುಂಡೈ ಕಂಪನಿಯು ತನ್ನ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ಸ್ಯಾಂಟ್ರೋ ಹ್ಯಾಚ್‌ಬ್ಯಾಕ್ ಕಾರು ಖರೀದಿಯ ಮೇಲೆ ರೂ.40 ಸಾವಿರದಷ್ಟು ಎಕ್ಸ್‌ಚೆಂಜ್ ಆಫರ್ ಮತ್ತು ಕ್ಯಾಶ್‌ಬ್ಯಾಕ್ ಆಫರ್ ನೀಡುತ್ತಿದ್ದು, ಸ್ಯಾಂಟ್ರೊ ಕಾರಿನ ಸಿಎನ್‌ಜಿ ಮಾದರಿಯು ಸಹ ಹೊಸ ಆಫರ್ ಒಳಗೊಂಡಿದೆ.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹೊಸ ಆಫರ್‌ಗಳಲ್ಲಿ ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ಕಂಪನಿಯು ರೂ. 40 ಸಾವಿರದಷ್ಟು ವಿವಿಧ ಆಫರ್‌ಗಳನ್ನು ನೀಡುತ್ತಿದ್ದು, ಹೊಸ ಆಫರ್‌ಗಳು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳ ಮೇಲೂ ಅನ್ವಯವಾಗಲಿದೆ.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹೊಸ ಆಫರ್‌ಗಳಲ್ಲಿ ಸ್ಯಾಂಟ್ರೋ, ಔರಾ, ಗ್ರಾಂಡ್ ಐ10 ನಿಯೋಸ್ ಮತ್ತು ಐ20 ಹೊರತುಪಡಿಸಿ ವೆನ್ಯೂ, ಕ್ರೆಟಾ, ವೆರ್ನಾ, ಅಲ್ಕಾಜರ್ ಮತ್ತು ಕೊನಾ ಇವಿ ಕಾರುಗಳ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಇನ್ನು ಕೋವಿಡ್ 2ನೇ ಅಲೆಯ ಪರಿಣಾಮ ಆರ್ಥಿಕ ಚಟುವಟಿಕೆಗಳಲ್ಲಿ ಏರಿಳಿತ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಹೊಸ ವಾಹನ ಮಾರಾಟದಲ್ಲಿ ಕುಸಿತ ಕಂಡುಬರುತ್ತಿದೆ. ಬಹುತೇಕ ಕಾರು ಕಂಪನಿಗಳ ಹೊಸ ವಾಹನಗಳ ಮಾರಾಟ ಪ್ರಮಾಣವು ಇಳಿಕೆಯಾಗಿದ್ದು, ಹ್ಯುಂಡೈ ಕಂಪನಿಯು ಸಹ ಕೆಲ ತಿಂಗಳಿನಿಂದ ಅಲ್ಪ ಪ್ರಮಾಣದಲ್ಲಿ ಬೆಳವಣಿಗೆ ಸಾಧಿಸಿದೆ.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಕೋವಿಡ್ ಪರಿಣಾಮವಾಗಿ ಹ್ಯುಂಡೈ ಕಂಪನಿಯು ಡಿಜಿಟಲ್ ಪ್ಲ್ಯಾಟ್‌ಫಾರ್ಮ್‌ಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಸುರಕ್ಷಿತ ಕಾರು ಮಾರಾಟ ಪ್ರಕ್ರಿಯೆಯ ನಡುವೆಯೂ ಹ್ಯುಂಡೈ ಕಂಪನಿಯು ಕಳೆದ ತಿಂಗಳ ಕಾರು ಮಾರಾಟದಲ್ಲಿ ಶೇ.36 ರಷ್ಟು ಕುಸಿತ ಕಂಡಿತ್ತು.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಹುಂಡೈ ಮೋಟಾರ್ ಇಂಡಿಯಾ ಅಕ್ಟೋಬರ್ ಕಾರು ಮಾರಾಟದ ಅಂಕಿ ಅಂಶಗಳ ಪ್ರಕಾರ ಕಂಪನಿಯು ಕಳೆದ ತಿಂಗಳು ಒಟ್ಟು 43,556 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಕಂಪನಿಯು 68,835 ಯುನಿಟ್ ಕಾರುಗಳನ್ನು ಮಾರಾಟ ಮಾಡಿತ್ತು.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಈ ವರ್ಷದ ಅಕ್ಟೋಬರ್ ಅವಧಿಯ ಕಾರು ಮಾರಾಟದಲ್ಲಿ ಶೇ. 36.7 ರಷ್ಟು ಕುಸಿತವನ್ನು ದಾಖಲಿಸಿದ್ದು, ಅಕ್ಟೋಬರ್‌ನಲ್ಲಿ ಕಂಪನಿಯು ಒಟ್ಟು 6,535 ಯುನಿಟ್ ಕಾರುಗಳನ್ನು ಭಾರತದಿಂದ ವಿದೇಶಿ ಮಾರುಕಟ್ಟೆಗಳಿಗೆ ರಫ್ತು ಮಾಡಿದೆ.

ದೀಪಾವಳಿ ವಿಶೇಷತೆಗಾಗಿ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಹ್ಯುಂಡೈ

ಈ ವರ್ಷ ಕಂಪನಿಯ ರಫ್ತು ಪ್ರಮಾಣವು 46.6% ನಷ್ಟು ಕುಸಿದಿದೆ. ಸೆಮಿ ಕಂಡಕ್ಟರ್'ಗಳ ಕೊರರೆಯಿಂದಾಗಿ ಹ್ಯುಂಡೈ ಕಂಪನಿಯ ಮಾರಾಟದಲ್ಲಿ ಕುಸಿತ ಕಂಡು ಬಂದಿದೆ. ಸೆಮಿಕಂಡಕ್ಟರ್ ಕೊರತೆಯು ಭಾರತೀಯ ಆಟೋ ಮೊಬೈಲ್ ಉದ್ಯಮವನ್ನು ಮಾತ್ರವಲ್ಲದೆ ಜಾಗತಿಕ ಆಟೋ ಮೊಬೈಲ್ ಉದ್ಯಮವನ್ನು ಅಸ್ತವ್ಯಸ್ತಗೊಳಿಸಿದೆ.

Article Published On: Saturday, November 6, 2021, 8:45 [IST]
English summary
Hyundai india announced benefits and offers for selected models in november
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+