ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಹ್ಯುಂಡೈ ಮೋಟಾರ್ಸ್(Hyundai) ಕಂಪನಿಯು ಹೊಸ ಕಾರು ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳುತ್ತಿದ್ದು, ಕೋವಿಡ್ ಪರಿಣಾಮ ತಗ್ಗಿರುವ ಏರಿಳಿತವಾಗುತ್ತಿರುವ ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಹೊಸ ಕೊಡುಗೆಗಳನ್ನು ಪ್ರಕಟಿಸುತ್ತಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಕೋವಿಡ್‌ ಪರಿಣಾಮ ಏರಿಳಿತವಾಗಿರುವ ಹೊಸ ವಾಹನಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಮುಂದಾಗಿರುವ ಪ್ರಮುಖ ಕಾರು ಕಂಪನಿಗಳು ವರ್ಷಾಂತ್ಯದಲ್ಲಿ ವಾಹನ ಖರೀದಿದಾರರನ್ನು ಸೆಳೆಯಲು ವಿವಿಧ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಸಹ ಡಿಸೆಂಬರ್ ಅವಧಿಯಲ್ಲಿ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ನೀಡುತ್ತಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಹ್ಯುಂಡೈ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ಹ್ಯುಂಡೈ ಕಂಪನಿಯು ಸ್ಯಾಂಟ್ರೋ, ಗ್ರಾಂಡ್ ಐ10 ನಿಯೋಸ್, ಐ20 ಮತ್ತು ಔರಾ ಕಾರುಗಳ ಮೇಲೆ ಉತ್ತಮ ಆಫರ್‌ಗಳನ್ನು ನೀಡಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಎಂಟ್ರಿ ಲೆವಲ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಗ್ರಾಂಡ್ ಐ10 ನಿಯೋಸ್ ಆವೃತ್ತಿಯ ಮೇಲೆ ಹ್ಯುಂಡೈ ಕಂಪನಿಯು ಗರಿಷ್ಠ ರೂ. 50 ಸಾವಿರ ತನಕ ಉಳಿತಾಯ ಮಾಡಬಹುದಾಗಿದ್ದು, ಎಕ್ಸ್‌ಚೆಂಜ್ ಮತ್ತು ಕ್ಯಾಶ್ ಬ್ಯಾಕ್ ಆಫರ್ ಒಳಗೊಂಡಿರಲಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಔರಾ ಕಂಪ್ಯಾಕ್ಟ್ ಸೆಡಾನ್ ಕಾರು ಮಾದರಿಯ ಮೇಲೆ ಹ್ಯುಂಡೈ ಕಂಪನಿಯು ರೂ.50 ಸಾವಿರ ತನಕ ಉಳಿತಾಯಕ್ಕೆ ಅವಕಾಶ ನೀಡಿದ್ದು, ವಾಣಿಜ್ಯ ಬಳಕೆಗಾಗಿ ಖರೀದಿಗೆ ಲಭ್ಯವಿರುವ ಎಕ್ಸೆಂಟ್ ಪ್ರೈಮ್ ಕಾರು ಮಾದರಿಯ ಮೇಲೂ ಗರಿಷ್ಠ ನಗದು ರಿಯಾಯ್ತಿ ಪಡೆದುಕೊಳ್ಳಬಹುದಾಗಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಜೊತೆಗೆ ಕಂಪನಿಯು ಔರಾ ಕಾರಿನ ಸಿಎನ್‌ಜಿ ಮಾದರಿಯ ಮೇಲೂ ಅತ್ಯುತ್ತಮ ಆಫರ್‌ಗಳನ್ನು ನೀಡುತ್ತಿದ್ದು, ನಿಗದಿತ ಅವಧಿಯ ಕಾರು ಖರೀದಿಸುವ ಗ್ರಾಹಕರಿಗೆ ಆಕರ್ಷಕ ಡಿಸ್ಕೌಂಟ್ ಜೊತೆ ಹೆಚ್ಚುವರಿ ವಾರಂಟಿ ಆಫರ್ ನೀಡಲಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಹಾಗೆಯೇ ಹ್ಯುಂಡೈ ಕಂಪನಿಯು ತನ್ನ ಮತ್ತೊಂದು ಜನಪ್ರಿಯ ಕಾರು ಮಾದರಿಯಾದ ಸ್ಯಾಂಟ್ರೋ ಹ್ಯಾಚ್‌ಬ್ಯಾಕ್ ಕಾರು ಖರೀದಿಯ ಮೇಲೆ ರೂ.40 ಸಾವಿರದಷ್ಟು ಎಕ್ಸ್‌ಚೆಂಜ್ ಆಫರ್ ಮತ್ತು ಕ್ಯಾಶ್‌ಬ್ಯಾಕ್ ಆಫರ್ ನೀಡುತ್ತಿದ್ದು, ಸ್ಯಾಂಟ್ರೊ ಕಾರಿನ ಸಿಎನ್‌ಜಿ ಮಾದರಿಯು ಸಹ ಹೊಸ ಆಫರ್ ಒಳಗೊಂಡಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಹೊಸ ಆಫರ್‌ಗಳಲ್ಲಿ ಐ20 ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ಕಂಪನಿಯು ರೂ. 40 ಸಾವಿರದಷ್ಟು ವಿವಿಧ ಆಫರ್‌ಗಳನ್ನು ನೀಡುತ್ತಿದ್ದು, ಹೊಸ ಆಫರ್‌ಗಳು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳ ಮೇಲೂ ಅನ್ವಯವಾಗಲಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಹೊಸ ಆಫರ್‌ಗಳಲ್ಲಿ ಸ್ಯಾಂಟ್ರೋ, ಔರಾ, ಗ್ರಾಂಡ್ ಐ10 ನಿಯೋಸ್ ಮತ್ತು ಐ20 ಹೊರತುಪಡಿಸಿ ವೆನ್ಯೂ, ಕ್ರೆಟಾ, ವೆರ್ನಾ, ಅಲ್ಕಾಜರ್ ಮತ್ತು ಕೊನಾ ಇವಿ ಕಾರುಗಳ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಇನ್ನು ಕೋವಿಡ್ 2ನೇ ಅಲೆಯ ಪರಿಣಾಮ ಆರ್ಥಿಕ ಚಟುವಟಿಕೆಗಳಲ್ಲಿ ಏರಿಳಿತ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಹೊಸ ವಾಹನ ಮಾರಾಟದಲ್ಲಿ ಕುಸಿತ ಕಂಡುಬಂದಿದೆ. ಬಹುತೇಕ ಕಾರು ಕಂಪನಿಗಳ ಹೊಸ ವಾಹನಗಳ ಮಾರಾಟದಲ್ಲಿ ಭಾರೀ ಪ್ರಮಾಣದ ಇಳಿಕೆಯಾಗಿದ್ದು, ಹ್ಯುಂಡೈ ಕಂಪನಿಯು ಡಿಸೆಂಬರ್ ಅವಧಿಯಲ್ಲಿ ಹೆಚ್ಚಿನ ಮಟ್ಟದ ಕುಸಿತ ಅನುಭವಿಸಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಇನ್ನು ಹ್ಯುಂಡೈ ಕಂಪನಿಯ ಕೋವಿಡ್ ಪರಿಣಾಮ ಡಿಜಿಟಲ್ ಪ್ಲ್ಯಾಟ್‌ಫಾರ್ಮ್‌ಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಸುರಕ್ಷಿತ ಕಾರು ಮಾರಾಟ ಪ್ರಕ್ರಿಯೆಯಿಂದಾಗಿ ಕುಸಿತ ಕಾರು ಮಾರಾಟವು ಸ್ಥಿರತೆ ಕಾಯ್ದುಕೊಳ್ಳಲು ನೆರವಾಗುತ್ತಿದೆ.

ಹ್ಯುಂಡೈ ಕಾರುಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ

ಹ್ಯುಂಡೈ ಕಂಪನಿಯು ಕಾರು ಮಾರಾಟ ಹೆಚ್ಚಳಕ್ಕಾಗಿ ಹಲವಾರು ಹೊಸ ಉಪಕ್ರಮಗಳನ್ನು ಪ್ರಕಟಿಸಿದ್ದು, ನ್ಯೂ ಜನರೇಷನ್ ಕ್ರೆಟಾ ಮತ್ತು ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Article Published On: Monday, December 6, 2021, 14:07 [IST]
English summary
Hyundai india announced year end offers details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+