ಫೆಬ್ರವರಿ ಅವಧಿಯಲ್ಲಿ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹ್ಯುಂಡೈ

ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ಸ್ ಫೆಬ್ರವರಿ ತಿಂಗಳಿನಲ್ಲಿನ ತನ್ನ ಕಾರು ಮಾರಾಟದ ವರದಿಯನ್ನು ಪ್ರಕಟಿಸಿದ್ದು, ಕಳೆದ ತಿಂಗಳ ಕಾರು ಮಾರಾಟದಲ್ಲಿ ಶೇ.29 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಫೆಬ್ರವರಿ ಅವಧಿಯಲ್ಲಿ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹ್ಯುಂಡೈ

2021ರ ಫೆಬ್ರವರಿ ಅವಧಿಯಲ್ಲಿ ಹ್ಯುಂಡೈ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಒಟ್ಟು 51,600 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 40,010 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ವರ್ಷದ ಆರಂಂಭದಲ್ಲೇ ಹ್ಯುಂಡೈ ಕಂಪನಿಯ ವಿವಿಧ ಕಾರು ಮಾದರಿಗಳಿಗೆ ಉತ್ತಮ ಬೇಡಿಕೆ ಸಲ್ಲಿಕೆಯಾಗಿದ್ದು, ಕಳೆದ ವರ್ಷದ ಫೆಬ್ರವರಿ ಅವಧಿಯಲ್ಲಿನ ಕಾರು ಮಾರಾಟಕ್ಕಿಂತ ಈ ವರ್ಷದ ಫೆಬ್ರವರಿ ಅವಧಿಯಲ್ಲಿ ಬರೋಬ್ಬರಿ ಶೇ.29ರಷ್ಟು ರಷ್ಟು ಬೆಳವಣಿಗೆ ಸಾಧಿಸಿದೆ.

ಫೆಬ್ರವರಿ ಅವಧಿಯಲ್ಲಿ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹ್ಯುಂಡೈ

ಹ್ಯುಂಡೈ ಕಂಪನಿಯು ವಿವಿಧ ಹೊಸ ಕಾರು ಮಾದರಿಗಳೊಂದಿಗೆ ಪ್ರಯಾಣಿಕ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಕಳೆದ ಕೆಲ ತಿಂಗಳಿನಿಂದ ವಾರ್ಷಿಕ ಕಾರು ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಸಾಧಿಸುತ್ತಿದೆ.

ಫೆಬ್ರವರಿ ಅವಧಿಯಲ್ಲಿ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹ್ಯುಂಡೈ

ಹೊಸ ತಲೆಮಾರಿನ ಕ್ರೆಟಾ ಮತ್ತು ಐ20 ಕಾರು ಮಾದರಿಗಳು ಹ್ಯುಂಡೈ ಕಾರು ಮಾರಾಟ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೊಸ ಕಾರುಗಳು ಹ್ಯುಂಡೈ ಕಾರು ಮಾರಾಟದಲ್ಲಿ ಮತ್ತಷ್ಟು ಮುಂಚೂಣಿ ಸಾಧಿಸುವ ತವಕದಲ್ಲಿವೆ.

ಫೆಬ್ರವರಿ ಅವಧಿಯಲ್ಲಿ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹ್ಯುಂಡೈ

ದಸರಾ ಮತ್ತು ದೀಪಾವಳಿ ನಂತರ ಹೊಸ ವಾಹನಗಳ ಮಾರಾಟವು ಸಾಮಾನ್ಯವಾಗಿ ತಗ್ಗಿದ್ದರೂ ಕೂಡಾ ಹೊಸ ವರ್ಷದ ಆರಂಭದಿಂದಲೂ ಹ್ಯುಂಡೈ ಕಾರುಗಳ ಮಾರಾಟದಲ್ಲಿ ಸಾಕಷ್ಟು ಹೆಚ್ಚಳ ಕಂಡುಬಂದಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಹರಿದುಬರುವ ನೀರಿಕ್ಷೆಯಿದೆ. ಇನ್ನು ದಕ್ಷಿಣ ಕೊರಿಯಾದ ಕಾರು ಉತ್ಪಾದನಾ ಕಂಪನಿಯಾಗಿರುವ ಹ್ಯುಂಡೈ ಮೋಟಾರ್ಸ್ ಭಾರತದಲ್ಲಿ ಪ್ರಯಾಣಿಕ ಕಾರು ಮಾರಾಟ ಆರಂಭಿಸಿ ಯಶಸ್ವಿ 25 ವರ್ಷಗಳನ್ನು ಪೂರೈಸಿದ್ದು, ವಿವಿಧ ಕಾರು ಮಾದರಿಗಳ ಮಾರಾಟದೊಂದಿಗೆ ದೇಶದ 2ನೇ ಅತಿ ಕಾರು ಉತ್ಪಾದನಾ ಕಂಪನಿಯಾಗಿ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಕಾಯ್ದುಕೊಂಡಿದೆ.

ಫೆಬ್ರವರಿ ಅವಧಿಯಲ್ಲಿ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹ್ಯುಂಡೈ

1996ರಲ್ಲಿ ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸಿದ ಹ್ಯುಂಡೈ ಮೋಟಾರ್ಸ್ ಕಂಪನಿಯು ಹಲವಾರು ಏಳುಬೀಳುಗಳೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ದೇಶದ 2ನೇ ಅತಿದೊಡ್ಡ ಕಾರು ಉತ್ಪಾದನೆ ಮತ್ತು ಮಾರಾಟ ಕಂಪನಿಯಾಗಿ ಹೊರಹೊಮ್ಮಿದೆ.

ಫೆಬ್ರವರಿ ಅವಧಿಯಲ್ಲಿ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹ್ಯುಂಡೈ

ಸ್ಯಾಂಟ್ರೊ ಕಾರು ಮಾದರಿಯ ಉತ್ಪಾದನೆಯೊಂದಿಗೆ ವಿವಿಧ ಕಾರು ಮಾದರಿಗಳ ಮಾರಾಟ ಮೂಲಕ ಸದ್ಯ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಭಾರತದಲ್ಲಿ ಇದುವರೆಗೆ ಹ್ಯುಂಡೈ ಕಂಪನಿಯು 9 ಮಿಲಿಯನ್(90 ಲಕ್ಷ) ಕಾರುಗಳನ್ನು ಮಾರಾಟ ಮಾಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಫೆಬ್ರವರಿ ಅವಧಿಯಲ್ಲಿ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹ್ಯುಂಡೈ

ಭಾರತದಲ್ಲಿ ಕಾರು ಮಾರಾಟ ಆರಂಭಿಸಿದ್ದ ಸಂದರ್ಭದಲ್ಲಿ ವಾರ್ಷಿಕವಾಗಿ 8 ಸಾವಿರ ಕಾರುಗಳ ಮಾರಾಟ ಹೊಂದಿದ್ದ ಹ್ಯುಂಡೈ ಕಂಪನಿಯು ಇಂದು ವಾರ್ಷಿಕವಾಗಿ 8 ಲಕ್ಷ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ವಿವಿಧ ಮಾದರಿಯ ಹತ್ತು ಕಾರು ಆವೃತ್ತಿಗಳ ಮಾರಾಟದೊಂದಿಗೆ ಶೇ. 17.4 ರಷ್ಟು ಮಾರುಕಟ್ಟೆ ಪಾಲು ಹೊಂದಿದೆ.

ಫೆಬ್ರವರಿ ಅವಧಿಯಲ್ಲಿ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹ್ಯುಂಡೈ

ಭಾರತದಲ್ಲಿ ಸುಮಾರು 25 ವರ್ಷಗಳಿಂದ ಕಾರು ಮಾರಾಟದಲ್ಲಿ ಹಂತವಾಗಿ ಉನ್ನತಿ ಸಾಧಿಸಿರುವ ಹ್ಯುಂಡೈ ಕಂಪನಿಯು ಸುಮಾರು ರೂ.29 ಸಾವಿರ ಕೋಟಿ ಷೇರು ಮೌಲ್ಯ ಹೊಂದಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ 8ನೇ ಅತಿದೊಡ್ಡ ಕಾರು ಮಾರಾಟ ಕಂಪನಿಯಾಗಿ ಗುರುತಿಸಿಕೊಂಡಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಫೆಬ್ರವರಿ ಅವಧಿಯಲ್ಲಿ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹ್ಯುಂಡೈ

ಭಾರತವನ್ನು ಪ್ರಮುಖ ಆಟೋಮೊಬೈಲ್ ಹಬ್ ಆಗಿ ಜನಪ್ರಿಯತೆ ತಂದುಕೊಡುವಲ್ಲಿ ಹ್ಯುಂಡೈ ಕಂಪನಿಯ ಪಾತ್ರ ಪ್ರಮುಖವಾಗಿದ್ದು, ಭಾರತದಿಂದಲೇ ಹ್ಯುಂಡೈ ಕಂಪನಿಯು ಸುಮಾರು 80 ರಾಷ್ಟ್ರಗಳಿಗೆ ಕಾರು ಪೂರೈಕೆಯ ಸೌಲಭ್ಯವನ್ನು ಹೊಂದಿದೆ.

Most Read Articles

Kannada
English summary
Hyundai India Car Sales Details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X