Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 5 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ವರ್ಷದ ಆರಂಭದಲ್ಲೇ ಅತಿ ಹೆಚ್ಚು ಕಾರು ಮಾರಾಟ ಮಾಡಿದ ಹ್ಯುಂಡೈ
ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ಸ್ ಜನವರಿ ತಿಂಗಳಿನಲ್ಲಿನ ತನ್ನ ಕಾರು ಮಾರಾಟದ ವರದಿಯನ್ನು ಪ್ರಕಟಿಸಿದ್ದು, ಕಳೆದ ತಿಂಗಳ ಕಾರು ಮಾರಾಟದಲ್ಲಿ ಶೇ. 15.06 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

2021ರ ಜನವರಿ ಅವಧಿಯಲ್ಲಿ ಹ್ಯುಂಡೈ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಒಟ್ಟು 60,105 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದು, 2020ರ ಜನವರಿ ತಿಂಗಳಿನಲ್ಲಿ 52,002 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ವರ್ಷದ ಆರಂಂಭದಲ್ಲೇ ಹ್ಯುಂಡೈ ಕಂಪನಿಯ ವಿವಿಧ ಕಾರು ಮಾದರಿಗಳಿಗೆ ಉತ್ತಮ ಬೇಡಿಕೆ ಸಲ್ಲಿಕೆಯಾಗಿದ್ದು, ಕಳೆದ ವರ್ಷದ ಜನವರಿ ಅವಧಿಯಲ್ಲಿನ ಕಾರು ಮಾರಾಟಕ್ಕಿಂತ ಈ ವರ್ಷದ ಜನವರಿ ಅವಧಿಯಲ್ಲಿ ಶೇ.15.06 ರಷ್ಟು ಬೆಳವಣಿಗೆ ಸಾಧಿಸಿದೆ.

ಹ್ಯುಂಡೈ ಕಂಪನಿಯು ವಿವಿಧ ಹೊಸ ಕಾರು ಮಾದರಿಗಳೊಂದಿಗೆ ಪ್ರಯಾಣಿಕ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಕಳೆದ ಡಿಸೆಂಬರ್‌ನಲ್ಲೂ ಕೂಡಾ ವಾರ್ಷಿಕ ಕಾರು ಮಾರಾಟದಲ್ಲಿ ಶೇ. 24.89ರಷ್ಟು ಬೆಳವಣಿಗೆಯನ್ನು ಸಾಧಿಸಿತ್ತು.

ಹೊಸ ತಲೆಮಾರಿನ ಕ್ರೆಟಾ ಮತ್ತು ಐ20 ಕಾರು ಮಾದರಿಗಳು ಹ್ಯುಂಡೈ ಕಾರು ಮಾರಾಟ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೊಸ ಕಾರು ಹ್ಯುಂಡೈ ಕಾರು ಮಾರಾಟದಲ್ಲಿ ಮತ್ತಷ್ಟು ಮುಂಚೂಣಿ ಸಾಧಿಸುವ ತವಕದಲ್ಲಿವೆ.

ದಸರಾ ಮತ್ತು ದೀಪಾವಳಿ ನಂತರ ಹೊಸ ವಾಹನಗಳ ಮಾರಾಟವು ಸಾಮಾನ್ಯವಾಗಿ ತಗ್ಗಿದ್ದರೂ ಕೂಡಾ ಹೊಸ ವರ್ಷದ ಆರಂಭದಲ್ಲೇ ಹ್ಯುಂಡೈ ಕಾರು ಮಾರಾಟದಲ್ಲಿ ಸಾಕಷ್ಟು ಹೆಚ್ಚಳ ಕಂಡುಬಂದಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಹರಿದುಬರುವ ನೀರಿಕ್ಷೆಯಿದೆ. ಇನ್ನು ಉತ್ಪಾದನಾ ವೆಚ್ಚಗಳ ನಿರ್ವಹಣೆಗಾಗಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ತಮ್ಮ ವಿವಿಧ ವಾಹನ ಮಾದರಿಗಳ ಬೆಲೆಯನ್ನು ಹೆಚ್ಚಿಸುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳ ಬೆಲೆ ಹೆಚ್ಚಳ ಮಾಡಿದೆ.

ಹೊಸ ವಾಹನಗಳ ಬಿಡಿಭಾಗಗಳ ಬೆಲೆಯಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕಾಗಿ ನಿರ್ಧರಿಸಿದ್ದು, ಹ್ಯುಂಡೈ ಮೋಟಾರ್ಸ್ ಕೂಡಾ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಶೇ. 1 ರಿಂದ ಶೇ. 3 ರಷ್ಟು ಬೆಲೆ ಹೆಚ್ಚಿಸಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ದರ ಪಟ್ಟಿ ಪ್ರಕಟದ ನಂತರ ವಿವಿಧ ಹ್ಯುಂಡೈ ಕಾರುಗಳ ಬೆಲೆಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕನಿಷ್ಠ ರೂ. 600ರಿಂದ ಗರಿಷ್ಠ ರೂ. 45 ಸಾವಿರ ತನಕ ಬೆಲೆ ಹೆಚ್ಚಳ ಮಾಡಲಾಗಿದೆ.

ಪರಿಸ್ಕೃತ ದರ ಪಟ್ಟಿಯಲ್ಲಿ ಕಂಪನಿಯ ಎಂಟ್ರಿ ಲೆವಲ್ ಕಾರು ಮಾದರಿಯಾದ ಸ್ಯಾಂಟ್ರೋ ಕಾರು ರೂ.600ರಿಂದ ರೂ. 4,900 ಬೆಲೆ ಹೆಚ್ಚಳ ಪಡೆದುಕೊಂಡರೆ, ಟಾಪ್ ಎಂಡ್ ಕಾರು ಮಾದರಿಯಾದ ಎಲಾಂಟ್ರಾ ಸೆಡಾನ್ ಕಾರು ಮಾದರಿಯು ರೂ. 15 ಸಾವಿರದಿಂದ ರೂ. 45 ಸಾವಿರ ಬೆಲೆ ಹೆಚ್ಚಳ ಪಡೆದುಕೊಂಡಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹ್ಯುಂಡೈ ಮೋಟಾರ್ಸ್ ಕಂಪನಿಯು ಹೊಸ ದರ ಪಟ್ಟಿಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಲಾದ ನ್ಯೂ ಜನರೇಷನ್ ಐ20 ಹೊರತುಪಡಿಸಿ ಗ್ರಾಂಡ್ ಐ10 ನಿಯೊಸ್, ಔರಾ, ವೆನ್ಯೂ, ವೆರ್ನಾ, ಟ್ಯುಸಾನ್ ಕಾರುಗಳು ಸಹ ಬೆಲೆ ಏರಿಕೆ ಮಾಡಲಾಗಿದೆ.