ದೇಶಿಯ ಮಾರುಕಟ್ಟೆಯಲ್ಲಿ ಕಾರು ಮಾರಾಟ ಆರಂಭಿಸಿ ಯಶಸ್ವಿ 25 ವರ್ಷ ಪೂರೈಸಿದ ಹ್ಯುಂಡೈ
ದಕ್ಷಿಣ ಕೊರಿಯಾದ ಕಾರು ಉತ್ಪಾದನಾ ಕಂಪನಿಯಾಗಿರುವ ಹ್ಯುಂಡೈ ಮೋಟಾರ್ಸ್ ಭಾರತದಲ್ಲಿ ಪ್ರಯಾಣಿಕ ಕಾರು ಮಾರಾಟ ಆರಂಭಿಸಿ ಯಶಸ್ವಿ 25 ವರ್ಷಗಳನ್ನು ಪೂರೈಸಿದ್ದು, ವಿವಿಧ ಕಾರು ಮಾದರಿಗಳ ಮಾರಾಟದೊಂದಿಗೆ ದೇಶದ 2ನೇ ಅತಿ ಕಾರು ಉತ್ಪಾದನಾ ಕಂಪನಿಯಾಗಿ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಕಾಯ್ದುಕೊಂಡಿದೆ.

1996ರಲ್ಲಿ ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸಿದ ಹ್ಯುಂಡೈ ಮೋಟಾರ್ಸ್ ಕಂಪನಿಯು ಹಲವಾರು ಏಳುಬೀಳುಗಳೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ದೇಶದ 2ನೇ ಅತಿದೊಡ್ಡ ಕಾರು ಉತ್ಪಾದನೆ ಮತ್ತು ಮಾರಾಟ ಕಂಪನಿಯಾಗಿ ಹೊರಹೊಮ್ಮಿದೆ. ಸ್ಯಾಂಟ್ರೊ ಕಾರು ಮಾದರಿಯ ಉತ್ಪಾದನೆಯೊಂದಿಗೆ ವಿವಿಧ ಕಾರು ಮಾದರಿಗಳ ಮಾರಾಟ ಮೂಲಕ ಸದ್ಯ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಭಾರತದಲ್ಲಿ ಇದುವರೆಗೆ ಹ್ಯುಂಡೈ ಕಂಪನಿಯು 9 ಮಿಲಿಯನ್(90 ಲಕ್ಷ) ಕಾರುಗಳನ್ನು ಮಾರಾಟ ಮಾಡಿದೆ.

ಭಾರತದಲ್ಲಿ ಹ್ಯುಂಡೈ ಕಂಪನಿಯು ಕಾರು ಉತ್ಪಾದನೆಗೆ 1996 ರಲ್ಲಿ ಚಾಲನೆ ನೀಡಿದರು ಕೂಡಾ ಕಾರು ಮಾರಾಟವನ್ನು ಅಧಿಕೃತವಾಗಿ 1998ರಲ್ಲಿ ಆರಂಭ ಮಾಡಿತ್ತು. ಆರಂಭದಲ್ಲಿ ವಾರ್ಷಿಕವಾಗಿ 8 ಸಾವಿರ ಕಾರುಗಳ ಮಾರಾಟ ಹೊಂದಿದ್ದ ಕಂಪನಿಯು ಇಂದು ವಾರ್ಷಿಕವಾಗಿ 8 ಲಕ್ಷ ಕಾರುಗಳನ್ನು ಮಾರಾಟ ಮಾಡುತ್ತಿದೆ.

ವಿವಿಧ ಮಾದರಿಯ ಹತ್ತು ಕಾರು ಆವೃತ್ತಿಗಳ ಮಾರಾಟ ಮಾಡುತ್ತಿರುವ ಹ್ಯುಂಡೈ ಕಂಪನಿಯು ಕಾರು ಮಾರಾಟದಲ್ಲಿ ಎರಡನೇ ಸ್ಥಾನದೊಂದಿಗೆ ಶೇ. 17.4 ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಸದ್ಯ ಹ್ಯುಂಡೈ ಕಂಪನಿಯು ಅಗ್ರಸ್ಥಾನದಲ್ಲಿದೆ.

ಭಾರತದಲ್ಲಿ ಸುಮಾರು 25 ವರ್ಷಗಳಿಂದ ಕಾರು ಮಾರಾಟದಲ್ಲಿ ಹಂತವಾಗಿ ಉನ್ನತಿ ಸಾಧಿಸಿರುವ ಹ್ಯುಂಡೈ ಕಂಪನಿಯು ಸುಮಾರು ರೂ.29 ಸಾವಿರ ಕೋಟಿ ಷೇರು ಮೌಲ್ಯ ಹೊಂದಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ 8ನೇ ಅತಿದೊಡ್ಡ ಕಾರು ಮಾರಾಟ ಕಂಪನಿಯಾಗಿ ಗುರುತಿಸಿಕೊಂಡಿದೆ. ಭಾರತವನ್ನು ಪ್ರಮುಖ ಆಟೋಮೊಬೈಲ್ ಹಬ್ ಆಗಿ ಜನಪ್ರಿಯತೆ ತಂದುಕೊಡುವಲ್ಲಿ ಹ್ಯುಂಡೈ ಕಂಪನಿಯ ಪಾತ್ರ ಪ್ರಮುಖವಾಗಿದ್ದು, ಭಾರತದಿಂದಲೇ ಹ್ಯುಂಡೈ ಕಂಪನಿಯು ಸುಮಾರು 80 ರಾಷ್ಟ್ರಗಳಿಗೆ ಕಾರು ಪೂರೈಕೆಯ ಸೌಲಭ್ಯವನ್ನು ಹೊಂದಿದೆ.

ಚೆನ್ನೈ ಹೊರವಲಯದಲ್ಲಿರುವ ಇರುಂಗಟ್ಟುಕೊಟೈನಲ್ಲಿ ಕಾರು ಉತ್ಪಾದನಾ ಘಟಕ ಆರಂಭಿಸುವ ಮೂಲಕ ಆರಂಭದಲ್ಲಿ ಕೆಲವೇ ಕೆಲವು ನಗರಗಳಲ್ಲಿ ಮಾರಾಟ ಆರಂಭಿಸಿದ್ದ ಹ್ಯುಂಡೈ ಕಂಪನಿಯು ಇದೀಗ ದೇಶಾದ್ಯಂತ 1154 ಮಾರಾಟ ಮಳಿಗೆಗಳನ್ನು ಮತ್ತು 1298 ಅಧಿಕೃತ ಸರ್ವಿಸ್ ಸೆಂಟರ್‌ಗಳ ಸೇವೆ ಹೊಂದಿದೆ.
MOST READ: ಮುಖೇಶ್ ಅಂಬಾನಿ ಭದ್ರತೆಗಾಗಿಯೇ ಬಂತು ಮೂರು ಕೋಟಿ ಬೆಲೆಯ ಕಾರು

2020ರಲ್ಲಿ 1,80,237 ಯುನಿಟ್ ಎಸ್‌ಯುವಿ ಕಾರು ಮಾರಾಟ ಮಾಡುವ ಮೂಲಕ ಎಸ್‌ಯುವಿ ಕಾರು ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿರುವ ಹ್ಯುಂಡೈ ಕಂಪನಿಯು ಆರಂಭದಲ್ಲಿ ಸ್ಯಾಂಟ್ರೊ ಮತ್ತು ಪ್ರಸ್ತುತ ಮಾರುಕಟ್ಟೆಯಲ್ಲಿ ಕ್ರೆಟಾ, ಐ20, ಐ10 ಕಾರುಗಳ ಮೂಲಕ ಮಾರಾಟದಲ್ಲಿ ಭಾರೀ ಪ್ರಮಾಣದ ಮುನ್ನಡೆ ಕಾಯ್ದುಕೊಂಡಿದೆ.

ಕರೋನಾ ವೈರಸ್ ಭೀತಿ ನಡುವೆಯೂ ವಾಹನ ಮಾರಾಟದಲ್ಲಿ ಹಲವು ಹೊಸ ಬದಲಾಣೆಗಳನ್ನು ಪರಿಚಯಿಸಿದ ಹ್ಯುಂಡೈ ಕಂಪನಿಯು ಸಂಕಷ್ಟದ ಪರಿಸ್ಥಿತಿಯಲ್ಲೂ ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಸ್ಯಾಂಟ್ರೋ, ಗ್ರಾಂಡ್ ಐ10 ನಿಯೋಸ್, ಐ20, ಐರಾ, ವೆರ್ನಾ, ಎಲಾಂಟ್ರಾ, ವೆನ್ಯೂ, ಕ್ರೆಟಾ, ಟ್ಯುಸಾನ್ ಮತ್ತು ಕೊನಾ ಎಲೆಕ್ಟ್ರಿಕ್ ಕಾರು ಮಾದರಿಗಳ ಮಾರಾಟ ಹೊಂದಿರುವ ಹ್ಯುಂಡೈ ಕಂಪನಿಯು ಕ್ರೆಟಾ ಕಾರಿನ ಮಾರಾಟದಲ್ಲಿ ಹಲವು ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications