ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಹ್ಯುಂಡೈ(Hyundai) ಕಂಪನಿಯು ಅಲ್ಕಾಜರ್(Alcazar) ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸುವ ಮೂಲಕ ಮಧ್ಯಮ ಗಾತ್ರ ಎಸ್‌ಯುವಿ ಮಾರಾಟದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕೆಲವು ವೆರಿಯೆಂಟ್‌ಗಳಲ್ಲಿ ಬದಲಾವಣೆ ಪರಿಚಯಿಸಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಹೊಸ ಅಲ್ಕಾಜರ್(Alcazar) ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿ ಹಲವಾರು ಹೊಸ ತಾಂತ್ರಿಕ ಸೌಲಭ್ಯ, ಅತ್ಯುತ್ತಮ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆಯೊಂದಿಗೆ ಮಾರಾಟ ಮಾರಾಟವಾಗುತ್ತಿದ್ದು, ಹೊಸ ಕಾರಿನಲ್ಲಿ ಕಂಪನಿಯು ಕೆಲವು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಆರಂಭಿಕ ಮಾದರಿಯಲ್ಲಿದ್ದ ಪ್ರಮುಖ ಎರಡು ವೆರಿಯೆಂಟ್‌ಗಳ ಮಾರಾಟ ಸ್ಥಗಿತಗೊಳಿಸಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ವರದಿಗಳ ಪ್ರಕಾರ ಹ್ಯುಂಡೈ ಕಂಪನಿಯು ಅಲ್ಕಾಜರ್ ಕಾರಿನ ಪ್ರೆಸ್ಟೀಜ್ 6-ಸೀಟರ್ ಪೆಟ್ರೋಲ್ ಮ್ಯಾನುವಲ್ ರೂಪಾಂತರವನ್ನು ಮತ್ತು ಪ್ರೆಸ್ಟೀಜ್ (ಆಪ್ಷನ್) 6 ಸೀಟರ್ ಪೆಟ್ರೋಲ್ ಸ್ವಯಂಚಾಲಿತ ರೂಪಾಂತರವನ್ನು ಹಿಂಪಡೆದಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಆರಂಭಿಕ ಮಾದರಿಗಳ ಸ್ಥಗಿತದ ಕುರಿತಾಗಿ ಕಂಪನಿಯು ಯಾವುದೇ ನಿಖರ ಮಾಹಿತಿ ಹಂಚಿಕೊಂಡಿಲ್ಲವಾದರೂ ಡೀಲರ್ಸ್‌‌ಗಳ ಮಾಹಿತಿಯೆಂತೆ ಆರಂಭಿಕ ಮಾದರಿಗಳಿಂತ ಹೈ ಎಂಡ್ ಮಾದರಿಗಳಿಗಾಗಿ ಹೆಚ್ಚಿನ ಬೇಡಿಕೆಯಿರುವುದರಿಂದ ಪೆಟ್ರೋಲ್ 6 ಸೀಟರ್ ಮಾದರಿಗಳನ್ನು ತೆಗೆದುಹಾಕಿರುವ ಬಗೆಗೆ ಮಾಹಿತಿ ಲಭ್ಯವಾಗಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಪ್ರಸ್ತುತ ಮಾರುಕಟ್ಟೆಯಲ್ಲಿ ಮಧ್ಯಮ ಗಾತ್ರದ ಕಾರುಗಳಲ್ಲಿ ಪೆಟ್ರೋಲ್ ಮ್ಯಾನುವಲ್ ಮಾದರಿಗಳಿಂತಲೂ ಪೆಟ್ರೋಲ್ ಆಟೋಮ್ಯಾಟಿಕ್, ಡೀಸೆಲ್ ಆಟೋಮ್ಯಾಟಿಕ್ ಮಾದರಿಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಹೊಸ ಕಾರಿನಲ್ಲಿ ಪೆಟ್ರೋಲ್ ಆಟೋಮ್ಯಾಟಿಕ್ ಹೊಂದಿರುವ 7 ಸೀಟರ್ ಮಾದರಿಯು ಮಾರಾಟ ಮುಂದುವರಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಭಾರತದಲ್ಲಿ ಹ್ಯುಂಡೈ ಕಂಪನಿಯು ಭಾರತಾದ್ಯಂತ ಅಲ್ಕಾಜರ್ ಎಸ್‌ಯುವಿಯ 14,000 ಕ್ಕೂ ಹೆಚ್ಚು ಯುನಿಟ್‌ಗಳನ್ನು ವಿತರಣೆ ಮಾಡಿದ್ದು, ಬಿಡುಗಡೆಯ ನಂತರ ಇದು ತಿಂಗಳಿಗೆ ಸರಾಸರಿ 2,000 ಯುನಿಟ್‌ಗಳು ಮಾರಾಟವಾಗುತ್ತಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಕಂಪನಿಯು ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಅಲ್ಕಾಜರ್ ಮಾದರಿಯಲ್ಲಿ ನಿರಂತರವಾಗಿ ಬದಲಾವಣೆ ತರುತ್ತಿದ್ದು, ಕಳೆದ ತಿಂಗಳ ಹಿಂದಷ್ಟೇ ಪ್ಲ್ಯಾಟಿನಂ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್ ಹೊಂದಿರುವ ಹೊಸ ವೆರಿಯೆಂಟ್ ಒಂದನ್ನು ಪರಿಚಯಿಸಿತ್ತು.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಪ್ಲ್ಯಾಟಿನಂ ಆವೃತ್ತಿಯಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಹೊಂದಿರುವ 7 ಸೀಟರ್ ಸೌಲಭ್ಯದ ಪ್ಲ್ಯಾಟಿನಂ(ಆಪ್ಷನ್) ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಬಿಡುಗಡೆಯಾಗಲಿದ್ದು, ಈ ಹಿಂದೆ 6 ಸೀಟರ್ ಮಾದರಿಯನ್ನು ಮಾತ್ರವೇ ಬಿಡುಗಡೆಯಾಗಿದ್ದ ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 7 ಸೀಟರ್ ಸೌಲಭ್ಯದೊಂದಿಗೆ ಬಿಡುಗಡೆಯಾಗಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಹೊಸ 7 ಸೀಟರ್ ಮಾದರಿಯು 6 ಸೀಟರ್ ಹೊಂದಿರುವ ಪ್ಲ್ಯಾಟಿನಂ ಮಾದರಿಗಿಂತಲೂ ರೂ. 15 ಸಾವಿರ ಕಡಿಮೆ ಬೆಲೆ ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ.19.63 ಲಕ್ಷ ಬೆಲೆ ಹೊಂದಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಅಲ್ಕಾಜರ್ ಕಾರು ಪ್ಲ್ಯಾಟಿನಂ, ಪ್ರೆಸ್ಟೀಜ್, ಸಿಗ್ನೆಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟೀಜ್ ಆಪ್ಷನ್ ಮತ್ತು ಸಿಗ್ನೆಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್‌ಗಳೊಂದಿಗೆ ಟೈಪೂನ್ ಸಿಲ್ವರ್, ಟೈಟಾನ್ ಗ್ರೇ, ಟೈಗಾ ಬ್ರೌನ್, ಸ್ಟೇರಿ ನೈಟ್, ಪೊಲಾರ್ ವೈಟ್ ಮತ್ತು ಪ್ಯಾಂಥಮ್ ಬ್ಲ್ಯಾಕ್ ಬಣ್ಣ ಸೇರಿ ಎರಡು ಡ್ಯುಯಲ್ ಟೋನ್ ಮಾದರಿಗಳು ಖರೀದಿಗೆ ಲಭ್ಯವಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಇನ್ನು ಹೊಸ ಅಲ್ಕಾಜರ್ ಕಾರು ಅತ್ಯುತ್ತಮ ಫೀಚರ್ಸ್‌, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆ ಹೊಂದಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಆರಂಭಿಕ ಮಾದರಿಗಳಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.30 ಲಕ್ಷದಿಂದ ಟಾಪ್ ಎಂಡ್ ಮಾದರಿಯ ರೂ. 19.99 ಲಕ್ಷ ಬೆಲೆ ಹೊಂದಿದ್ದು, 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಹೊಸ ಕಾರು 4,500 ಎಂಎಂ ಉದ್ದ, 1,790 ಎಂಎಂ ಅಗಲ, 1,675 ಎಂಎಂ ಎತ್ತರ ಮತ್ತು 2,760 ಎಂಎಂ ವೀಲ್ಹ್‌ಬೆಸ್ ಪಡೆದುಕೊಂಡಿದ್ದು, ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಧರಿಸಿರುವ ಹೊಸ ಅಲ್ಕಾಜರ್‌ನಲ್ಲಿ ಹಲವಾರು ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳನ್ನು ನೀಡಲಾಗಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಹೊಸ ಕಾರಿನಲ್ಲಿ ಸ್ಪ್ಲಿಟ್-ಶೈಲಿಯ ಎಲ್ಇಡಿ ಹೆಡ್‌ಲ್ಯಾಂಪ್‌, 3ಡಿ ಹನಿಕೊಂಬ್ ಗ್ರಿಲ್, ಹೊಸ ವಿನ್ಯಾಸದ ಬಂಪರ್ ವಿನ್ಯಾಸ, ಎಲ್ಇಡಿ ಟೈಲ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್, ವಿವಿಧ ಮಾದರಿಗಳಿಗೆ ಅನುಗುಣವಾಗಿ 17 ಮತ್ತು 18-ಇಂಚಿನ ಅಲಾಯ್ ವೀಲ್ಹ್, ರೂಫ್ ರೈಲ್ಸ್, ಫ್ಲಕ್ಸ್ ಸ್ಕಫ್ ಪ್ಲೇಟ್, ಶಾರ್ಕ್ ಫಿನ್ ಅಂಟೆನಾ, ಬಾಡಿ ಕ್ಲ್ಯಾಡಿಂಗ್ ಹೊಂದಿದೆ.

ಗ್ರಾಹಕರ ಬೇಡಿಕೆ ಆಧರಿಸಿ ಅಲ್ಕಾಜರ್ ಎಸ್‌ಯುವಿ ಪ್ರಮುಖ ವೆರಿಯೆಂಟ್‌ಗಳನ್ನು ಸ್ಥಗಿತಗೊಳಿಸಿದ ಹ್ಯುಂಡೈ

ಜೊತೆಗೆ ಹೊಸ ಕಾರಿನಲ್ಲಿ 10.25 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 10.25 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಬ್ಲ್ಯೂ ಲಿಂಕ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಕಮಾಂಡರ್, ಮೂರು ಸಾಲಿಗೂ ಎಸಿ ವೆಂಟ್ಸ್, ಬ್ಲೈಂಡ್ ವಿಂಡೋ ಮಾನಿಟರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಸೀಟ್ ಬ್ಲ್ಯಾಟ್ ಟೇಬಲ್, ಆಟೋ ಏರ್ ಪ್ಯೂರಿಫೈರ್, ರಿಮೋಟ್ ಎಂಜಿನ್ ಸ್ಟಾರ್ಟ್, ಕ್ಲೈಮೆಟ್ ಕಂಟ್ರೋಲ್, ಪನೊರಮಿಕ್ ಸನ್‌ರೂಫ್ ಸೇರಿದಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳಿವೆ.

Article Published On: Tuesday, November 16, 2021, 8:45 [IST]
English summary
Hyundai india discontinued alcazar suv base petrol variants
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+