ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಮಾದರಿಗಳನ್ನು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ಇಂಧನಗಳ ಮೇಲೆ ಕೇಂದ್ರ ಸರ್ಕಾರದ ತೆರಿಗೆ ಹೆಚ್ಚಳ ನಂತರ ಇವಿ ವಾಹನ ಮಾರಾಟದಲ್ಲಿ ಭಾರೀ ಬೇಡಿಕೆ ಕಂಡುಬರುತ್ತಿದ್ದು, ಹೊಸ ವಾಹನ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ವಿವಿಧ ಕಾರು ಕಂಪನಿಗಳು ಗ್ರಾಹಕರ ಬೇಡಿಕೆಯೆಂತೆ ಶೀಘ್ರದಲ್ಲೇ ಮತ್ತಷ್ಟು ಹೊ ಇವಿ ಕಾರುಗಳನ್ನು ರಸ್ತೆಗಿಳಿಸಲು ಸಿದ್ದಗೊಂಡಿವೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ದಕ್ಷಿಣ ಕೊರಿಯಾದ ಹ್ಯುಂಡೈ ಕಂಪನಿಯು ಕೂಡಾ ಸಹ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಿವಿಧ ವರ್ಗದ ಗ್ರಾಹಕರನ್ನು ಗಮದಲ್ಲಿಟ್ಟುಕೊಂಡು ವಿವಿಧ ಮಾದರಿಯ ಇವಿ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಭಾರತದಲ್ಲೂ ಸಹ ಇವಿ ಕಾರುಗಳ ಬಿಡುಗಡೆಯಾಗಿ ಬೃಹತ್ ಯೋಜನೆಯೊಂದಕ್ಕೆ ಚಾಲನೆ ನೀಡುತ್ತಿದೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

2028ರ ವೇಳೆಗೆ ಜಾಗತಿಕ ಮಾರುಕಟ್ಟೆಯಲ್ಲಿ 30ಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಹೊಂದಲಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಗ್ರಾಹಕರ ಬೇಡಿಕೆಯೆಂತೆ ಮುಂದಿನ ಐದು ವರ್ಷಗಳಲ್ಲಿ ಆರು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ಸದ್ಯ ಎಲೆಕ್ಟ್ರಿಕ್ ಕಾರು ಮಾದರಿಗಳ ಮುಖ್ಯ ತಾಂತ್ರಿಕ ಅಂಶವಾಗಿ ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯಕ್ಕಾಗಿ ಸಂಪೂರ್ಣವಾಗಿ ಚೀನಿ ಮತ್ತು ಥೈವಾನ್ ಮಾರುಕಟ್ಟೆಯನ್ನು ನೆಚ್ಚಿಕೊಂಡಿರುವುದೇ ಇವಿ ಕಾರುಗಳ ಬೆಲೆಯು ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಬೆಲೆ ಪಡೆದುಕೊಂಡಿರುವುದಕ್ಕೆ ಪ್ರಮುಖ ಕಾರಣವಾಗಿದೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ಇವಿ ವಾಹನಗಳ ಬೆಲೆ ಇಳಿಕೆಗಾಗಿ ಭಾರತದಲ್ಲೇ ಪೂರ್ಣ ಪ್ರಮಾಣದ ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನಾ ಘಟಕಗಳಿಗೆ ಹಲವು ಆಟೋ ಕಂಪನಿಗಳು ಸಹಭಾಗೀತ್ವದ ಯೋಜನೆಯನ್ನು ಕೈಗೊಂಡಿದ್ದು, ಮೇಡ್ ಇನ್ ಇಂಡಿಯಾ ಬ್ಯಾಟರಿ ಲಭ್ಯವಾದಲ್ಲಿ ಇವಿ ಕಾರುಗಳ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಮಾಡಬಹುದುದಾಗಿದೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ಈ ಮೂಲಕ ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ಮಾರಾಟ ಮಾಡಲು ಉದ್ದೇಶಿಸಿರುವ ಹ್ಯುಂಡೈ ಕಂಪನಿಯು ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದ್ದು, ಕಂಪನಿಯು 2028ರ ವೇಳೆಗೆ ವಿವಿಧ ಸೆಗ್ಮೆಂಟ್‌ಗಳಲ್ಲಿ ಆರು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಿದೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ಹ್ಯುಂಡೈ ಕಂಪನಿಯು ಹೊಸ ಇವಿ ಕಾರುಗಳ ಉತ್ಪಾದನೆಗೆ ಪೂರಕವಾದ ಮತ್ತು ಗುಣಮಟ್ಟದ ಮಾದರಿಗಳನ್ನು ಸಿದ್ದಪಡಿಸಲು ಆಧುನಿಕ ತಂತ್ರಜ್ಞಾನ ಪ್ರೇರಿತ ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡಲು ಉದ್ದೇಶಿಸಿದ್ದು, ಹೊಸ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಕಂಪನಿಯು ವಿವಿಧ ಸೆಗ್ಮೆಂಟ್ ಇವಿ ಪರಿಚಯಿಸಲಿದೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ಹ್ಯುಂಡೈ ಕಂಪನಿಯು ಈಗಾಗಲೇ ಭಾರತದಲ್ಲಿ ಕೊನಾ ಎಲೆಕ್ಟ್ರಿಕ್ ಕಾರು ಮಾದರಿಯ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ಬಜೆಟ್ ಇವಿ ಕಾರುಗಳೊಂದಿಗೆ ಐಷಾರಾಮಿ ಇವಿ ಕಾರು ಮಾದರಿಗಳನ್ನು ಸಹ ಬಿಡುಗಡೆ ಮಾಡಲಿದೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ಎಲೆಕ್ಟ್ರಿಕ್ ಜೊತೆಗೆ ಭವಿಷ್ಯದಲ್ಲಿ ಹೈಡ್ರೊಜನ್ ಫ್ಯೂಲ್ ಸೆಲ್ಸ್ ವಾಹನಗಳು ಕೂಡಾ ಸದ್ದು ಮಾಡುವ ನೀರಿಕ್ಷೆಯಿದ್ದು, ಹೊಸ ಮಾದರಿಯ ವಾಹನಗಳ ಸಂಶೋಧನೆ ಮತ್ತು ಅಭಿವೃದ್ದಿ ಮೇಲೆ ಹೆಚ್ಚಿನ ಗಮನಹರಿಸಿರುವ ಹ್ಯುಂಡೈ ಕೂಡಾ ಶೀಘ್ರದಲ್ಲೇ ಐಯಾನಿಕ್ 5 ಕಾರನ್ನು ವಿಶ್ವದ ಪ್ರಮುಖ ಮಾರುಕಟ್ಟೆಗೆ ಪರಿಚಯಿಸಲಿದೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ಮುಂದಿನ ವರ್ಷ ಅಮೆರಿಕ ಮತ್ತು ಯುರೋಪಿನ ಪ್ರಮುಖ ಮಾರುಕಟ್ಟೆಗಳನ್ನು ಪ್ರವೇಶಿಸಲಿರುವ ಐಯಾನಿಕ್ 5 ಕಾರನ್ನು ಹ್ಯುಂಡೈ ಕಂಪನಿಯು ಭಾರತದಲ್ಲೂ ಸದ್ದು ಮಾಡುವ ನೀರಿಕ್ಷೆಗಳಿದ್ದು, ಹೊಸ ಕಾರುಗಳಲ್ಲಿ ಬಜೆಟ್ ಕಾರು ಮಾದರಿಗಳನ್ನು ಸಹ ಸೇರ್ಪಡೆಗೊಳಿಸಲಾಗಿದೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ಬಿಡುಗಡೆಯಾಗಲಿರುವ ಹೊಸ ಐಕಾನಿಕ್ 5 ಎಲೆಕ್ಟ್ರಿಕ್ ಕಾರನ್ನು ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ತಂತ್ರಜ್ಞಾನದಡಿ ನಿರ್ಮಾಣ ಮಾಡಲಾಗಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರು 58 ಕಿ.ವ್ಯಾ ಮತ್ತು 72.6 ಕಿ.ವ್ಯಾ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿದೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ಐಯಾನಿಕ್ 5 ಕಾರು ಬ್ಯಾಟರಿ ಪ್ಯಾಕ್ ಆಧಾರದ ಪ್ರತಿ ಚಾರ್ಜ್‌ಗೆ ಗರಿಷ್ಠ 470-480 ಕಿ.ಮೀ ಮೈಲೇಜ್ ಹಿಂದಿಗಿರುಗಿಸಲಿದ್ದು, ಆಧುನಿಕ ತಂತ್ರಜ್ಞಾನ ಪ್ರೇರಿತ ಸೂಪರ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಕೇವಲ 5 ನಿಮಿಷಗಳ ಕಾಲ ಚಾರ್ಜ್ ಮಾಡಿದರೂ 100 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದಾಗಿದೆ.

 ರೂ. 4 ಸಾವಿರ ಕೋಟಿ ಹೂಡಿಕೆಯೊಂದಿಗೆ ಆರು ಹೊಸ ಇವಿ ಕಾರು ಬಿಡುಗಡೆಗೆ ಸಿದ್ದವಾದ ಹ್ಯುಂಡೈ

ಐಯಾನಿಕ್ 5 ಕಾರು ಮಾದರಿಯು 4635 ಎಂಎಂ ಉದ್ದ, 1890 ಎಂಎಂ ಅಗಲ, 1605 ಎಂಎಂ ಎತ್ತರ ಮತ್ತು 3000 ಎಂಎಂ ವೀಲ್‌ಬೇಸ್‌ನೊಂದಿಗೆ ವಿಶಾಲವಾದ ಕ್ಯಾಬಿನ್ ಹೊಂದಿದ್ದು, ಹೊಸ ಕಾರು ಸಹೋದರ ಸಂಸ್ಥೆ ಕಿಯಾ ಇವಿ6 ಜೊತೆಗೆ ಹೆಚ್ಚಿನ ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಂಡಿವೆ.

Article Published On: Wednesday, December 8, 2021, 13:22 [IST]
English summary
Hyundai india is planning to launch six new electric cars by 2028 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+