ಜುಲೈ ಅವಧಿಗಾಗಿ ಹ್ಯುಂಡೈ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ

ಹ್ಯುಂಡೈ ಮೋಟಾರ್ಸ್ ಕಂಪನಿಯು ಹೊಸ ಕಾರು ಮಾರಾಟದಲ್ಲಿ ಹಲವು ತಿಂಗಳಿನಿಂದ ಉತ್ತಮ ಬೇಡಿಕೆ ಕಾಯ್ದುಕೊಳ್ಳುತ್ತಿದ್ದು, ಕೋವಿಡ್ ಪರಿಣಾಮ ತಗ್ಗಿರುವ ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಹೊಸ ಕೊಡುಗೆಗಳನ್ನು ಪ್ರಕಟಿಸುತ್ತಿದೆ.

ಜುಲೈ ಅವಧಿಗಾಗಿ ಹ್ಯುಂಡೈ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ

ಕೋವಿಡ್‌ನಿಂದಾಗಿ ಕಳೆದ ವರ್ಷ ಕನಿಷ್ಠ ಪ್ರಮಾಣದ ಹೊಸ ವಾಹನಗಳನ್ನು ಮಾರಾಟ ಮಾಡಿದ್ದ ಕಾರು ಕಂಪನಿಗಳಿಗೆ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಹರಿದುಬಂದಿತ್ತು. ಆದರೆ ಕೋವಿಡ್ 2ನೇ ಅಲೆ ಪರಿಣಾಮ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಕಂಪನಿಗಳು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಕೆ ಕಾಣುತ್ತಿದ್ದು, ವಾಹನ ಖರೀದಿದಾರರನ್ನು ಸೆಳೆಯಲು ವಿವಿಧ ಆಫರ್‌ಗಳನ್ನು ಘೋಷಣೆ ಮಾಡಲಾಗುತ್ತಿದೆ.

ಜುಲೈ ಅವಧಿಗಾಗಿ ಹ್ಯುಂಡೈ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ

ಹೊಸ ವಾಹನ ಖರೀದಿಯನ್ನು ಉತ್ತೇಜಿಸಲು ವಿವಿಧ ಕಾರು ಕಂಪನಿಗಳು ಹೊಸ ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹ್ಯುಂಡೈ ಕಂಪನಿಯು ಸಹ ಜುಲೈ ಅವಧಿಗಾಗಿ ಪ್ರಮುಖ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ ಮಾಡಿದೆ.

ಜುಲೈ ಅವಧಿಗಾಗಿ ಹ್ಯುಂಡೈ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ

ಹ್ಯುಂಡೈ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಜುಲೈ ಅವಧಿಗಾಗಿ ಹ್ಯುಂಡೈ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ಹ್ಯುಂಡೈ ಕಂಪನಿಯು ಸ್ಯಾಂಟ್ರೋ, ಗ್ರಾಂಡ್ ಐ10 ನಿಯೋಸ್ ಮತ್ತು ಔರಾ ಕಾರುಗಳ ಮೇಲೆ ಉತ್ತಮ ಆಫರ್‌ಗಳನ್ನು ನೀಡಿದೆ.

ಜುಲೈ ಅವಧಿಗಾಗಿ ಹ್ಯುಂಡೈ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ

ಎಂಟ್ರಿ ಲೆವಲ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಗ್ರಾಂಡ್ ಐ10 ನಿಯೋಸ್ ಆವೃತ್ತಿಯ ಮೇಲೆ ಹ್ಯುಂಡೈ ಕಂಪನಿಯು ಗರಿಷ್ಠ ರೂ. 50 ಸಾವಿರ ತನಕ ಉಳಿತಾಯ ಮಾಡಬಹುದಾಗಿದ್ದು, ಎಕ್ಸ್‌ಚೆಂಜ್ ಮತ್ತು ಕ್ಯಾಶ್ ಬ್ಯಾಕ್ ಆಫರ್ ಒಳಗೊಂಡಿರಲಿದೆ.

ಜುಲೈ ಅವಧಿಗಾಗಿ ಹ್ಯುಂಡೈ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ

ಔರಾ ಕಂಪ್ಯಾಕ್ಟ್ ಸೆಡಾನ್ ಕಾರು ಮಾದರಿಯ ಮೇಲೆ ಹ್ಯುಂಡೈ ಕಂಪನಿಯು ರೂ.50 ಸಾವಿರ ತನಕ ಉಳಿತಾಯಕ್ಕೆ ಅವಕಾಶ ನೀಡಿದ್ದು, ವಾಣಿಜ್ಯ ಬಳಕೆಗಾಗಿ ಖರೀದಿಗೆ ಲಭ್ಯವಿರುವ ಎಕ್ಸೆಂಟ್ ಪ್ರೈಮ್ ಕಾರು ಮಾದರಿಯ ಮೇಲೂ ಗರಿಷ್ಠ ನಗದು ರಿಯಾಯ್ತಿ ಪಡೆದುಕೊಳ್ಳಬಹುದಾಗಿದೆ.

ಜುಲೈ ಅವಧಿಗಾಗಿ ಹ್ಯುಂಡೈ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ

ಹಾಗೆಯೇ ಹ್ಯುಂಡೈ ಕಂಪನಿಯು ತನ್ನ ಮತ್ತೊಂದು ಪ್ರೀಮಿಯಂ ಕಾರು ಮಾದರಿಯಾದ ಐ20 ಖರೀದಿಯ ಮೇಲೆ ರೂ. 15 ಸಾವಿರದಷ್ಟು ಎಕ್ಸ್‌ಚೆಂಜ್ ಆಫರ್ ನೀಡುತ್ತಿದ್ದು, ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರು ಗರಿಷ್ಠ ಪ್ರಮಾಣದ ಉಳಿತಾಯ ಮಾಡಬಹುದಾಗಿದೆ.

ಜುಲೈ ಅವಧಿಗಾಗಿ ಹ್ಯುಂಡೈ ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ

ಹೌದು, ಹ್ಯುಂಡೈ ಕಂಪನಿಯು ಎಲೆಕ್ಟ್ರಿಕ್ ಕಾರು ಮಾದರಿಯಾದ ಕೊನಾ ಆವೃತ್ತಿಯ ಮೇಲೆ ರೂ. 1.50 ಲಕ್ಷದ ತನಕ ಉಳಿತಾಯಕ್ಕೆ ಅವಕಾಶ ನೀಡಿದ್ದು, ರೂ. 1.50 ಲಕ್ಷ ಆಫರ್‌ನಲ್ಲಿ ಕ್ಯಾಶ್‌ಬ್ಯಾಕ್ ಮತ್ತು ಎಕ್ಸ್‌ಚೆಂಜ್ ಆಫರ್ ಒಳಗೊಂಡಿದೆ.

Article Published On: Friday, July 9, 2021, 12:59 [IST]
English summary
Hyundai India Offering Huge Discounts On Its Selected Car Models.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+