ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದ ಹ್ಯುಂಡೈ

ಹೆಚ್ಚುತ್ತಿರುವ ಕೋವಿಡ್ ಎರಡನೇ ಅಲೆಯ ಪರಿಣಾಮ ತಗ್ಗಿರುವ ಹೊಸ ವಾಹನಗಳ ಖರೀದಿಯ್ನು ಸುಧಾರಿಸಲು ವಿವಿಧ ಆಟೋ ಉತ್ಪಾದನಾ ಕಂಪನಿಗಳು ಹಲವಾರು ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಹ್ಯುಂಡೈ ಕಂಪನಿಯು ಕೂಡಾ ಮೇ ಅವಧಿಗಾಗಿ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದ ಹ್ಯುಂಡೈ

ಹೊಸ ವಾಹನಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ವಿವಿಧ ವಾಹನ ಉತ್ಪಾದನಾ ಕಂಪನಿಗಳು ಆಕರ್ಷಕ ಆಫರ್‌‌ಗಳೊಂದಿಗೆ ಗ್ರಾಹಕರನ್ನು ಆಕರ್ಷಿಸುತ್ತಿದ್ದು, ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ ಕೊನಾ ಇವಿ ಸೇರಿದಂತೆ ವಿವಿಧ ಕಾರು ಮಾದರಿಗಳ ಮೇಲೆ ಮೇ ಅವಧಿಗಾಗಿ ಆಕರ್ಷಕ ಡಿಸ್ಕೌಂಟ್ ಆಫರ್ಗಳನ್ನು ನೀಡುತ್ತಿದೆ. ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕವು ಲಭ್ಯವಿರಲಿದ್ದು, ಕೊನಾ ಇವಿ ಮೇಲೆ ಗರಿಷ್ಠಉಳಿತಾಯ ಮಾಡಬಹುದಾಗಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದ ಹ್ಯುಂಡೈ

ಹೊಸ ಆಫರ್‌ಗಳಲ್ಲಿ ಆರಂಭಿಕ ಆವೃತ್ತಿಯಾದ ಸ್ಯಾಂಟ್ರೊ ಖರೀದಿ ಮೇಲೆ ರೂ.35 ಸಾವಿರ ಆಫರ್ ನೀಡುತ್ತಿದ್ದು, ಗ್ರಾಂಡ್ ಐ10 ನಿಯೋಸ್ ಹ್ಯಾಚ್‌ಬ್ಯಾಕ್ ಆವೃತ್ತಿಯ ಮೇಲೆ ಗರಿಷ್ಠ ರೂ. 50 ಸಾವಿರ ತನಕ ಉಳಿತಾಯಕ್ಕೆ ಅವಕಾಶ ನೀಡಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದ ಹ್ಯುಂಡೈ

ಕಂಪ್ಯಾಕ್ಟ್ ಸೆಡಾನ್ ಮಾದರಿಗಳಾದ ಔರಾ ಮತ್ತು ಎಕ್ಸೆಂಟ್ ಪ್ರೈಮ್ ಆವೃತ್ತಿಯ ಮೇಲೆ ರೂ.50 ಸಾವಿರ ಕ್ಯಾಶ್‌ಬ್ಯಾಕ್ ಆಫರ್ ಜೊತೆಗೆ ರೂ.25 ಸಾವಿರ ಎಕ್ಸ್‌ಚೆಂಜ್ ಬೋನಸ್ ಘೋಷಣೆ ಮಾಡಿದ್ದು, ಐ20 ಮಾದರಿಯ ಮೇಲೆ ರೂ.15 ಸಾವಿರದಷ್ಟು ಎಕ್ಸ್‌ಚೆಂಜ್ ಆಫರ್ ಮಾತ್ರ ಲಭ್ಯವಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದ ಹ್ಯುಂಡೈ

ಹಾಗೆಯೇ ಎಲೆಕ್ಟ್ರಿಕ್ ಕಾರು ಮಾದರಿಯಾದ ಕೊನಾ ಇವಿ ಎಸ್‌ಯುವಿ ಖರೀದಿ ಮೇಲೆ ಹ್ಯುಂಡೈ ಕಂಪನಿಯು ಬರೋಬ್ಬರಿ ರೂ. 1.50 ಲಕ್ಷದವರೆಗೆ ಉಳಿತಾಯ ಮಾಡುವ ಅವಕಾಶ ನೀಡಿದ್ದು, ಸಾಮಾನ್ಯ ಆಫರ್‌ಗಳನ್ನು ಹೊರತುಪಡಿಸಿ ಆಯ್ದ ಗ್ರಾಹಕರಿಗೆ ಇನ್ನು ಹೆಚ್ಚಿನ ಮಟ್ಟದ ಉಳಿತಾಯಕ್ಕೆ ಅವಕಾಶಗಳಿವೆ.

ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದ ಹ್ಯುಂಡೈ

ಇನ್ನು ಉತ್ಪಾದನಾ ವೆಚ್ಚಗಳ ನಿರ್ವಹಣೆಗಾಗಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ತಮ್ಮ ವಿವಿಧ ವಾಹನ ಮಾದರಿಗಳ ಬೆಲೆಯನ್ನು ಹೆಚ್ಚಿಸಿದ್ದು ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರುಗಳ ಬೆಲೆಯನ್ನು 2021ರಲ್ಲೇ ಎರಡನೇ ಬಾರಿಗೆ ಬೆಲೆ ಹೆಚ್ಚಳ ಮಾಡಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದ ಹ್ಯುಂಡೈ

ಹೊಸ ವಾಹನಗಳ ಬಿಡಿಭಾಗಗಳ ಬೆಲೆಯಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಬೆಲೆ ಹೆಚ್ಚಳಕ್ಕಾಗಿ ನಿರ್ಧರಿಸಿದ್ದು, ಹ್ಯುಂಡೈ ಮೋಟಾರ್ಸ್ ಕೂಡಾ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಶೇ. 1 ರಿಂದ ಶೇ. 1.50 ರಷ್ಟು ಬೆಲೆ ಹೆಚ್ಚಿಸಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದ ಹ್ಯುಂಡೈ

ಹೊಸ ದರ ಪಟ್ಟಿ ಪ್ರಕಟದ ನಂತರ ವಿವಿಧ ಕಾರುಗಳ ಬೆಲೆಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕನಿಷ್ಠ ರೂ. 1,200ರಿಂದ ಗರಿಷ್ಠ ರೂ. 34 ಸಾವಿರ ತನಕ ಬೆಲೆ ಹೆಚ್ಚಳ ಮಾಡಲಾಗಿದೆ. ಪರಿಸ್ಕೃತ ದರ ಪಟ್ಟಿಯಲ್ಲಿ ಕಂಪನಿಯ ಎಂಟ್ರಿ ಲೆವಲ್ ಕಾರು ಮಾದರಿಯಾದ ಸ್ಯಾಂಟ್ರೋ ಕಾರು ರೂ. 1 ಸಾವಿರದಿಂದ ರೂ. 6,200 ಬೆಲೆ ಹೆಚ್ಚಳ ಪಡೆದುಕೊಂಡರೆ, ಟಾಪ್ ಎಂಡ್ ಕಾರು ಮಾದರಿಯಾದ ಟ್ಯುಸಾನ್ ಎಸ್‌ಯುವಿ ಕಾರು ಮಾದರಿಯು ರೂ. 2 ಸಾವಿರದಿಂದ ರೂ. 34 ಸಾವಿರ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದ ಹ್ಯುಂಡೈ

ಹ್ಯುಂಡೈ ನಿರ್ಮಾಣದ ಕ್ರೆಟಾ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯು ಕೂಡಾ ಬೆಲೆ ಹೆಚ್ಚಳದೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ರೂ. 9.99 ಲಕ್ಷದಿಂದ ಟಾಪ್ ಎಂಡ್ ಕಾರಿನ ಬೆಲೆಯು ರೂ.17.62 ಲಕ್ಷಕ್ಕೆ ಏರಿಕೆಯಾಗಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದ ಹ್ಯುಂಡೈ

ಹ್ಯುಂಡೈ ಮೋಟಾರ್ಸ್ ಕಂಪನಿಯು ಹೊಸ ದರಗಳಲ್ಲಿ ಇತ್ತೀಚೆಗೆ ಬಿಡುಗಡೆಗೊಂಡಿರುವ ನ್ಯೂ ಜನರೇಷನ್ ಐ20 ಮಾದರಿಯ ಬೆಲೆಯಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ. ಹೊಸ ದರಪಟ್ಟಿಯಲ್ಲಿ ಗ್ರಾಂಡ್ ಐ10 ನಿಯೊಸ್, ಔರಾ, ವೆನ್ಯೂ, ವೆರ್ನಾ, ಟ್ಯುಸಾನ್ ಕಾರುಗಳು ಸಹ ಬೆಲೆ ಏರಿಕೆ ಪಡೆದುಕೊಂಡಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ಬೆಲೆ ಹೆಚ್ಚಳವಾಗಿದೆ.

Most Read Articles

Kannada
English summary
Hyundai Offers Great Discounts On Selected Models In 2021 May. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X