7 ಸೀಟರ್ ಸೌಲಭ್ಯದ ಹ್ಯುಂಡೈ ಅಲ್ಕಾಜರ್ ಎಸ್‌ಯುವಿಯ ಟಿವಿ ಜಾಹೀರಾತು ಬಿಡುಗಡೆ

ಹ್ಯುಂಡೈ ಕಂಪನಿಯು ತನ್ನ ಬಹುನೀರಿಕ್ಷಿತ ಅಲ್ಕಾಜರ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಕೈಗೊಳ್ಳುತ್ತಿದ್ದು, ಕಂಪನಿಯು ಹೊಸ ಕಾರಿನ ವೈಶಿಷ್ಟ್ಯತೆಗಳ ಕುರಿತಾಗಿ ಹೊಸ ಟಿವಿ ಜಾಹೀರಾತು ಬಿಡುಗಡೆ ಮಾಡಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿಯ ಟಿವಿ ಜಾಹೀರಾತು ಬಿಡುಗಡೆ

ಅಲ್ಕಾಜರ್ ಕಾರು 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯದೊಂದಿಗೆ ಪ್ಲ್ಯಾಟಿನಂ, ಪ್ರೆಸ್ಟೀಜ್, ಸಿಗ್ನೆಚೆರ್, ಪ್ಲ್ಯಾಟಿನಂ ಆಪ್ಷನ್, ಪ್ರೆಸ್ಟೀಜ್ ಆಪ್ಷನ್ ಮತ್ತು ಸಿಗ್ನೆಚೆರ್ ಆಪ್ಷನ್ ಎನ್ನುವ ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಟಿವಿಸಿ ಮೂಲಕ ಹೊಸ ಕಾರಿನ ವೈಶಿಷ್ಟ್ಯತೆಗಳನ್ನು ಅಚ್ಚುಕಟ್ಟಾಗಿ ಪ್ರದರ್ಶಿಸಲಾಗಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿಯ ಟಿವಿ ಜಾಹೀರಾತು ಬಿಡುಗಡೆ

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.16.30 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.99 ಲಕ್ಷ ಬೆಲೆ ಹೊಂದಿದ್ದು, ಜುಲೈ ಮೊದಲ ವಾರದಿಂದ ಹೊಸ ಕಾರಿನ ವಿತರಣೆ ಆರಂಭಗೊಳ್ಳಲಿದೆ.

ಹೊಸ ಅಲ್ಕಾಜರ್ ಕಾರು ಅತ್ಯುತ್ತಮ ಫೀಚರ್ಸ್‌, ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಟಾಟಾ ಸಫಾರಿ ಮತ್ತು ಎಂಜಿ ಹೆಕ್ಟರ್ ಪ್ಲಸ್ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿಯ ಟಿವಿ ಜಾಹೀರಾತು ಬಿಡುಗಡೆ

2.0-ಲೀಟರ್ ಎಂಪಿಐ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ಮಾದರಿಗಳು ಉತ್ತಮ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದ್ದು, ಕಂಫರ್ಟ್, ಇಕೋ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳೊಂದಿಗೆ ಪೆಟ್ರೋಲ್ ಮಾದರಿಯು 159-ಬಿಎಚ್‌ಪಿ ಉತ್ಪಾದಿಸಿದ್ದಲ್ಲಿ ಡೀಸೆಲ್ ಮಾದರಿಯು 115-ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿಯ ಟಿವಿ ಜಾಹೀರಾತು ಬಿಡುಗಡೆ

ಅಲ್ಕಾಜರ್ ಕಾರಿನ 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿದ್ದು, ಹೊಸ ಕಾರು 4,500 ಎಂಎಂ ಉದ್ದ, 1,790 ಎಂಎಂ ಅಗಲ, 1,675 ಎಂಎಂ ಎತ್ತರ ಮತ್ತು 2,760 ಎಂಎಂ ವೀಲ್ಹ್‌ಬೆಸ್ ಪಡೆದುಕೊಂಡಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿಯ ಟಿವಿ ಜಾಹೀರಾತು ಬಿಡುಗಡೆ

ಹೊಸ ಕಾರಿನಲ್ಲಿ ಸ್ಪ್ಲಿಟ್-ಶೈಲಿಯ ಎಲ್ಇಡಿ ಹೆಡ್‌ಲ್ಯಾಂಪ್‌, 3ಡಿ ಹನಿಕೊಂಬ್ ಗ್ರಿಲ್, ಹೊಸ ವಿನ್ಯಾಸದ ಬಂಪರ್ ವಿನ್ಯಾಸ, ಎಲ್ಇಡಿ ಟೈಲ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್, ವಿವಿಧ ಮಾದರಿಗಳಿಗೆ ಅನುಗುಣವಾಗಿ 17 ಮತ್ತು 18-ಇಂಚಿನ ಅಲಾಯ್ ವೀಲ್ಹ್, ರೂಫ್ ರೈಲ್ಸ್, ಫ್ಲಕ್ಸ್ ಸ್ಕಫ್ ಪ್ಲೇಟ್, ಶಾರ್ಕ್ ಫಿನ್ ಅಂಟೆನಾ, ಬಾಡಿ ಕ್ಲ್ಯಾಡಿಂಗ್ ಹೊಂದಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿಯ ಟಿವಿ ಜಾಹೀರಾತು ಬಿಡುಗಡೆ

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಕ್ರೂಸ್ ಕಂಟ್ರೋಲ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಬ್ಲೈಂಡ್ ವ್ಯೂ ಮಾನಿಟರ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಹಿಲ್ ಅಸಿಸ್ಟ್ ಕಂಟ್ರೋಲ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೇರಿದಂತೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿಯ ಟಿವಿ ಜಾಹೀರಾತು ಬಿಡುಗಡೆ

ಹಾಗೆಯೇ ಹೊಸ ಕಾರಿನಲ್ಲಿ ಟೈಪೂನ್ ಸಿಲ್ವರ್, ಟೈಟಾನ್ ಗ್ರೇ, ಟೈಗಾ ಬ್ರೌನ್, ಸ್ಟೇರಿ ನೈಟ್, ಪೊಲಾರ್ ವೈಟ್ ಮತ್ತು ಪ್ಯಾಂಥಮ್ ಬ್ಲ್ಯಾಕ್ ಬಣ್ಣ ಸೇರಿ ಎರಡು ಡ್ಯುಯಲ್ ಟೋನ್ ಮಾದರಿಗಳು ಖರೀದಿಗೆ ಲಭ್ಯವಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಿಗೆ ಮಾತ್ರವಲ್ಲ ಎಂಪಿವಿ ಕಾರಿಗಳೂ ಪೈಪೋಟಿ ನೀಡುವ ವೈಶಿಷ್ಟ್ಯತೆಗಳನ್ನು ಹೊಂದಿದೆ.

Most Read Articles

Kannada
English summary
Hyundai Revealed Alcazar SUV New TVC. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X