ತಾತ್ಕಾಲಿಕವಾಗಿ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಹ್ಯುಂಡೈ ಇಂಡಿಯಾ

ದೇಶಾದ್ಯಂತ ಕೋವಿಡ್ 2ನೇ ಅಲೆ ತೀವ್ರವಾಗಿ ಹೆಚ್ಚುತ್ತಿರುವುದರಿಂದ ವಿವಿಧ ರಾಜ್ಯಗಳು ಹಲವು ಕಠಿಣ ಕ್ರಮಗಳೊಂದಿಗೆ ವೈರಸ್ ಹರಡುವಿಕೆಗೆ ಕಡಿವಾಣ ಹಾಕುತ್ತಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉತ್ಪಾದನಾ ವಲಯವು ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಹ್ಯುಂಡೈ ಇಂಡಿಯಾ

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಿಸಿಕೊಳ್ಳುತ್ತಿದ್ದ ಆಟೋ ಉದ್ಯಮವು ಇದೀಗ ಮತ್ತೆ ಲಾಕ್‌ಡೌನ್ ಸಂಕಷ್ಟಕ್ಕೆ ಸಿಲುಕಿದ್ದು, ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೆ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದೆ. ಆದರೆ ಉದ್ಯೋಗಿಗಳ ಆರೋಗ್ಯದ ದೃಷ್ಠಿಯಿಂದ ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉತ್ಪಾದನೆ ಕೈಗೊಳ್ಳುತ್ತಿದ್ದರೆ ಇನ್ನು ಕೆಲವು ವಾಹನ ಕಂಪನಿಗಳು ವಾಹನ ಉತ್ಪಾದನೆಯನ್ನು ಸಂಪೂರ್ಣವಾಗಿ ಬಂದ್ ಮಾಡಿವೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಹ್ಯುಂಡೈ ಇಂಡಿಯಾ

ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ ಕೋವಿಡ್ ಪರಿಣಾಮ ಒಂದು ವಾರ ಉತ್ಪಾದನೆಯನ್ನು ಸ್ಥಗಿತಗೊಳಿಸುತ್ತಿರುವುದಾಗಿ ಹೇಳಿಕೊಂಡಿದ್ದು, ಚೆನ್ನೈ ಹೊರವಲಯದಲ್ಲಿ ನೆಲೆಗೊಂಡಿರುವ ಕಾರು ಉತ್ಪಾದನಾ ಘಟಕವನ್ನು ಮುಂದಿನ ಆದೇಶದ ತನಕ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಹ್ಯುಂಡೈ ಇಂಡಿಯಾ

ಕಾರು ಉತ್ಪಾದನೆ ಸ್ಥಗಿತಗೊಂಡಿರುವ ಸಮಯದಲ್ಲೇ ಕಾರು ಘಟಕದಲ್ಲಿನ ತಾಂತ್ರಿಕ ಅಂಶಗಳ ಉನ್ನತೀಕರಣಕ್ಕೆ ನಿರ್ಧರಿಸಿದ್ದು, ಹೊಸ ಕಾರುಗಳ ಉತ್ಪಾದನೆಯನ್ನು ತೀವ್ರಗೊಳಿಸಲು ತಾಂತ್ರಿಕ ಅಂಶಗಳ ಉನ್ನತೀಕರಣವು ಪ್ರಮುಖ ಅಂಶವಾಗಿದೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಹ್ಯುಂಡೈ ಇಂಡಿಯಾ

ಹೀಗಾಗಿ ಕಂಪನಿಯು ಕಾರು ಉತ್ಪಾದನೆಯನ್ನು ಬಂದ್ ಮಾಡಿದರೂ ಕೂಡಾ ಗ್ರಾಹಕರ ಸೇವೆಗಳಲ್ಲಿ ಯಾವುದೇ ತೊಂದರೆ ಆಗದಂತೆ ಎಲ್ಲಾ ಅಗತ್ಯ ಸಿದ್ದತೆ ಮಾಡಿಕೊಂಡಿರುವುದಾಗಿ ತನ್ನ ಗ್ರಾಹಕರಿಗೆ ಭರವಸೆ ನೀಡಿದ್ದು, ವಾಹನ ಖರೀದಿ ಮತ್ತು ಗ್ರಾಹಕರಿಗೆ ಸೇವೆಗಳಿಗೆ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದಿದೆ. ಅಗತ್ಯವಿದ್ದಲ್ಲಿ ಗ್ರಾಹಕರ ಮನೆ ಬಾಗಿಲುಗಳಿಗೆ ಸೇವೆ ಒದಗಿಸಲಿರುವ ಹ್ಯುಂಡೈ ಕಂಪನಿಯು ವಿವಿಧ ರಾಜ್ಯ ಸರ್ಕಾರಗಳ ಸುರಕ್ಷಾ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದು, ಹೊಸ ವಾಹನಗಳ ಖರೀದಿ ಮತ್ತು ವಿತರಣೆ ಪ್ರಕ್ರಿಯೆಯನ್ನು ಯಾವುದೇ ರೀತಿಯಲ್ಲಿ ಸ್ಥಗಿತಗೊಳಿಸಿಲ್ಲ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಹ್ಯುಂಡೈ ಇಂಡಿಯಾ

ವಾಹನ ಖರೀದಿ ಪ್ರಕ್ರಿಯೆಗಳು ಎಂದಿನಂತೆ ಕ್ಲಿಕ್ ಟು ಬೈ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಮುಂದುವರಿದ್ದು, ಪರಿಸ್ಥಿತಿಗೆ ಅನುಗುಣವಾಗಿ ವಾಹನ ವಿತರಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಹ್ಯುಂಡೈ ಇಂಡಿಯಾ

ಹೊಸ ವಾಹನಗಳ ಮಾರಾಟವು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಕೆ ಆಗುತ್ತಿದ್ದರೂ ಕರೋನಾ ವೈರಸ್ ಪರಿಣಾಮದಿಂದಾಗಿ ಹೊಸ ವಾಹನಕ್ಕೆ ಅಡಚಣೆ ಎದುರಾಗುತ್ತಿದ್ದು, ವಾಹನಗಳ ಮಾರಾಟವನ್ನು ಸರಳ ಮತ್ತು ಸುರಕ್ಷಿತವಾಗಿಸಲು ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಸಾಕಷ್ಟು ಬಳಕೆಯಾಗುತ್ತಿವೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಹ್ಯುಂಡೈ ಇಂಡಿಯಾ

ಹೊಸ ವಾಹನ ಖರೀದಿಗಾಗಿ ಬಹುತೇಕ ಗ್ರಾಹಕರು ನೇರವಾಗಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಸಾಮಾನ್ಯವಾಗಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮ ಗ್ರಾಹಕರನ್ನು ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಖರೀದಿ ಪ್ರಕ್ರಿಯೆಯತ್ತ ಸೆಳೆಯಲು ಆಟೋ ಕಂಪನಿಗಳು ಮಾಡಿದ ಹೊಸ ಪ್ರಯತ್ನವು ಇಂದು ಸಾಕಷ್ಟು ಪ್ರಯೋಜಕಾರಿಯಾಗಿದೆ.

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಹ್ಯುಂಡೈ ಇಂಡಿಯಾ

ವೈರಸ್ ಹರಡುವಿಕೆಯ ಸಂದರ್ಭದಲ್ಲಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಪ್ರಕ್ರಿಯೆಯನ್ನು ಸರಳಗೊಳಿಸಲು ಆನ್‌ಲೈನ್ ಮಾರಾಟ ಮಳಿಗೆಗಳು ಸಾಕಷ್ಟು ಸಹಕಾರಿಯಾಗಿದ್ದು, ಬಳಕೆದಾರರ ಸಂಖ್ಯೆಯಲ್ಲೂ ಕೂಡಾ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ ಹ್ಯುಂಡೈ ಇಂಡಿಯಾ

ಕೋವಿಡ್ 19 ಹರಡುವಿಕೆಗೂ ಮೊದಲೇ ಹಲವಾರು ಆಟೋ ಕಂಪನಿಗಳು ಆನ್‌ಲೈನ್ ಪ್ಲ್ಯಾಟ್ ತೆರೆದಿದ್ದರೂ ಬಳಕೆದಾರರ ಸಂಖ್ಯೆಯು ತೀರಾ ವಿರಳವಾಗಿತ್ತು. ಆದರೆ ಕರೋನಾ ವೈರಸ್ ಹೆಚ್ಚಳವಾಗುತ್ತಿದ್ದಂತೆ ಸಾಮಾಜಿಕ ಅಂತರ ಅಗತ್ಯವಾಯಿತೋ ಆಗಿನಿಂದ ವಾಹನ ಮಾರಾಟಕ್ಕಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳ ಬಳಕೆಯು ಹೆಚ್ಚಳವಾಗುತ್ತಿದೆ.

Most Read Articles

Kannada
English summary
Hyundai Undertakes Six-Day Maintenance Shutdown At Manufacturing Plant. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X